ಹಾವೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

'ಯಾರು ಭಾರತ ಜೋಡೋ, ಯಾರು ತೋಡೋ ಮಾಡುತ್ತಿದ್ದಾರೆಂದು ಎಲ್ಲರಿಗೂ ಗೊತ್ತಿದೆ'

|
Google Oneindia Kannada News

ಹಾವೇರಿ, ಸೆ.29: ಯಾರು ಭಾರತ್ ಜೋಡೋ ಮಾಡಿದ್ದಾರೆ, ಯಾರು ತೋಡೋ ಮಾಡಿದ್ದಾರೆ ಎಂದು ಎಲ್ಲರಿಗೂ ಗೊತ್ತಿದೆ ಎಂದು ಕಾಂಗ್ರೆಸ್ ಪಕ್ಷವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ.

ಭಾರತ್ ಜೋಡೋ ಕಾರ್ಯಕ್ರಮದ ಫ್ಲೆಕ್ಸ್‌ಗಳನ್ನು ಹರಿದು ಹಾಕಿರುವ ಬಗ್ಗೆ ಮಾತನಾಡುವಾಗ ಈ ಹೇಳಿಕೆ ನೀಡಿದ್ದಾರೆ. ಜೊತೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದಾರೆ.

ಚರ್ಮ ಗಂಟು ರೋಗದಿಂದ ಮೃತಪಟ್ಟ ಜಾನುವಾರುಗಳಿಗೆ 20 ಸಾವಿರ ರೂ. ಪರಿಹಾರಚರ್ಮ ಗಂಟು ರೋಗದಿಂದ ಮೃತಪಟ್ಟ ಜಾನುವಾರುಗಳಿಗೆ 20 ಸಾವಿರ ರೂ. ಪರಿಹಾರ

"ಡಿ.ಕೆ.ಶಿವಕುಮಾರ್ ಏನಾದರೂ ಹೇಳಲಿ. ಯಾರೇ ಫ್ಲೆಕ್ಸ್ ಹಾಕಬೇಕಾದರೂ ಅನುಮತಿ ಪಡೆಯಬೇಕು. ಯಾವುದೇ ರಾಜಕೀಯ ಪಕ್ಷದ ಫ್ಲೆಕ್ಸ್ ಹರಿಯುವ ಅವಶ್ಯಕತೆ ಬಿಜೆಪಿಗೆ ಇಲ್ಲ. ಜನರಿಗೂ ಎಲ್ಲಾ ವಿಚಾರಗಳು ಗೊತ್ತಿದೆ. ಹೀಗಾಗಿ ಅದರ ಅವಶ್ಯಕತೆ ಇಲ್ಲ ಎಂದು ನನ್ನ ಭಾವನೆ" ಎಂದಿದ್ದಾರೆ.

ಚುನಾವಣಾ ಆಯೋಗದಲ್ಲಿ ನೊಂದಣಿಯಾಗಿದೆ ಎಸ್‌ಡಿಪಿಐ

ಚುನಾವಣಾ ಆಯೋಗದಲ್ಲಿ ನೊಂದಣಿಯಾಗಿದೆ ಎಸ್‌ಡಿಪಿಐ

" ಈಗ ಪಿಎಫ್ಐ ನಿಷೇಧಿಸಲಾಗಿದೆ. ಎಸ್‌ಡಿಪಿಐ ನಿಷೇಧದ ಬಗ್ಗೆ ಯಾವುದೇ ನಿರ್ಧಾರವಿಲ್ಲ. ಅದು ಭಾರತ ಚುನಾವಣಾ ಆಯೋಗದಲ್ಲಿ ನೋಂದಣಿಯಾಗಿರುವ ಪಕ್ಷ. ಇದರ ನಿಷೇಧದ ಬಗ್ಗೆ ಯಾವುದೇ ನಿರ್ಧಾರ ಕೇಂದ್ರ ಸರ್ಕಾರ ತೆಗೆದುಕೊಂಡಿಲ್ಲ. ಬರುವ ದಿನಗಳಲ್ಲಿ ಅದರ ಬೆಳವಣಿಗೆಯ ಆಧಾರದ ಮೇಲೆ ಕ್ರಮ ವಹಿಸಲಾಗುವುದು" ಎಂದು ಮಾಹಿತಿ ನೀಡಿದ್ದಾರೆ.

ವಿಧಾನಸಭೆ ಒಳಗೆ ನಿಷೇಧಿಸಿ ಎಂದು ಹೊರಗಡೆ ಟೀಕಿಸುತ್ತಾರೆ

ವಿಧಾನಸಭೆ ಒಳಗೆ ನಿಷೇಧಿಸಿ ಎಂದು ಹೊರಗಡೆ ಟೀಕಿಸುತ್ತಾರೆ

ಪಿಎಫ್ಐ ನಿಷೇಧ ರಾಜಕೀಯ ಸ್ಟಂಟ್ ಹಾಗೂ ಚುನಾವಣಾ ಗಿಮಿಕ್ ಎಂದಿರುವ ಬಿ.ಕೆ.ಹರಿಪ್ರಸಾದ್ ಹೇಳಿಕೆಗೆ ತಿರುಗೇಟು ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, "ಅವರಿಗೆ ಬೇರೇನೂ ವ್ಯಾಖ್ಯಾನ ಮಾಡಲು ಸಾಧ್ಯ. ಇಷ್ಟು ವರ್ಷ ವಿಧ್ವಂಸಕ ಕೃತ್ಯಗಳು ನಮ್ಮೆದುರಿಗೆ ನಡೆದಿದೆ. ಕೊಲೆ, ಭಯೋತ್ಪಾದನೆ ಚಟುವಟಿಕೆಗೆ ಬೆಂಬಲ ನೀಡಿದ್ದಾರೆ. ಇದೆ ಕಾಂಗ್ರೆಸ್ ವಿಧಾನ ಸಭೆ ಒಳಹೊರಗೆ ನಿಷೇಧಿಸಿ ಅಂತ ಹೇಳುತ್ತಿದ್ದವರು, ಈಗ ಗಿಮಿಕ್ ಎಂದು ಕರೆಯುವುದು ಎಷ್ಟರ ಮಟ್ಟಿಗೆ ಸರಿ ಎಂದು ಹರಿಪ್ರಸಾದ್ ಯೋಚಿಸಬೇಕು" ಎಂದಿದ್ದಾರೆ.

ನಾಳೆ ರಾಜ್ಯಕ್ಕೆ ಪ್ರವೇಶಿಸಲಿರುವ ಭಾರತ್ ಜೋಡೋ ಯಾತ್ರೆ

ನಾಳೆ ರಾಜ್ಯಕ್ಕೆ ಪ್ರವೇಶಿಸಲಿರುವ ಭಾರತ್ ಜೋಡೋ ಯಾತ್ರೆ

ಕಾಂಗ್ರೆಸ್ ಆಯೋಜಿಸಿರುವ ಭಾರತ್ ಜೋಡೋ ಯಾತ್ರೆ ಕಾರ್ಯಕ್ರಮಕ್ಕೆ ಸಾಹಿತಿಗಳ ಬೆಂಬಲ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ದೇಶದಲ್ಲಿ ಸಾಹಿತಿಗಳು ಎರಡೂ ಕಡೆ ಇದ್ದಾರೆ. ಹಾಗಾಗಿ ಕೆಲವರು ಅಲ್ಲಿ, ಕೆಲವರು ಇಲ್ಲಿ ಬೆಂಬಲ ನೀಡುತ್ತಾರೆ ಎಂದಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಭಾರತ್ ಜೋಡೋ ಯಾತ್ರೆ ಗುರುವಾರ (ಸೆ. 30) ಗುಂಡ್ಲುಪೇಟೆ ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿದೆ. ಈ ಹಿನ್ನೆಲೆಯಲ್ಲಿ ಸಂಚಾರ ದಟ್ಟಣೆ ಉಂಟಾಗುವುದನ್ನು ತಪ್ಪಿಸಲು ವಾಹನ ಸಂಚಾರಕ್ಕೆ ಬದಲಿ ಮಾರ್ಗದ ವ್ಯವಸ್ಥೆ ಮಾಡಲಾಗಿದೆ. ಸೆ. 29 ರ ಮಧ್ಯರಾತ್ರಿಯಿಂದ ಅಕ್ಟೋಬರ್ 1 ರ ಮಧ್ಯರಾತ್ರಿಯವರೆಗೆ ಜಿಲ್ಲಾದ್ಯಂತ ಮದ್ಯ ಮಾರಾಟ ನಿಷೇಧಿಸಿ ಚಾಮರಾಜನಗರ ಡಿಸಿ ಆದೇಶಿಸಿದ್ದಾರೆ.

ಇನ್ನು, ನವೆಂಬರ್ ನಲ್ಲಿ ನಡೆಯಲಿರುವ ಹಾವೇರಿ ಸಾಹಿತ್ಯ ಸಮ್ಮೇಳನಕ್ಕೆ ಎಲ್ಲಾ ಸಿದ್ಧತೆಗಳು ನಡೆಯುತ್ತಿದೆ. ಅದ್ದೂರಿಯಾಗಿ ಸಮ್ಮೇಳನ ಮಾಡಿ ತೀರುತ್ತೇವೆ ಎಂದು ಮಾಹಿತಿ ನೀಡಿದ್ದಾರೆ.

ಕೆಎಂಎಫ್ ಕಚೇರಿ ಉದ್ಘಾಟನೆ, ಮೆಗಾ ಡೈರಿ ಶಂಕು ಸ್ಥಾಪನೆ

ಕೆಎಂಎಫ್ ಕಚೇರಿ ಉದ್ಘಾಟನೆ, ಮೆಗಾ ಡೈರಿ ಶಂಕು ಸ್ಥಾಪನೆ

ಹಾವೇರಿ ಜಿಲ್ಲೆಯಲ್ಲಿ ಎಂಜಿನಿಯರಿಂಗ್ ಕಾಲೇಜು, ಮೆಡಿಕಲ್ ಕಾಲೇಜು, ಮೆಗಾ ಡೈರಿ, ಇಂಡಸ್ಟ್ರಿಯಲ್ ಪಾರ್ಕ್, ಟೆಕ್ಸ್‌ಟೈಲ್ ಪಾರ್ಕ್ ಗಳ ನಿರ್ಮಾಣವಾಗುತ್ತಿದೆ. ಇನ್ನು, ಕೆಎಂಎಫ್ ಕಚೇರಿ ಉದ್ಘಾಟನೆ ಹಾಗೂ ಮೆಗಾ ಡೈರಿ ಶಂಕು ಸ್ಥಾಪನೆ ಪ್ರಮುಖ ಕಾರ್ಯಕ್ರಮ.

ಹಾಲು ಉತ್ಪಾದನೆ ಹಾಗೂ ಹಾಲು ಉತ್ಪಾದಕರಿಗೆ ಬಹಳಷ್ಟು ಅನುಕೂಲ ಕೊಡುವ ಕಾರ್ಯಕ್ರಮ ಇದಾಗಿದೆ. ಇದರ ಜೊತೆಗೆ ಹಲವಾರು ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗುತ್ತಿದೆ. ಬಜೆಟ್‌ನಲ್ಲಿ ಹೇಳಲಾಗಿರುವ ಕಾರ್ಯಕ್ರಮಗಳೆಲ್ಲಾ ಪ್ರಾರಂಭವಾಗುತ್ತಿದೆ. ಜಿಲ್ಲೆಯ ಸ್ವರೂಪ ಪಡೆದುಕೊಂಡು ಅಭಿವೃದ್ಧಿಯ ಆಯಾಮ ದೊರೆತು 25 ವರ್ಷಗಳು ಸಂದಿರುವ ಸಂದರ್ಭದಲ್ಲಿ ಜಿಲ್ಲೆ ಹಾಗೂ ರಾಜ್ಯದ ಅಭಿವೃದ್ಧಿಗೆ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕಿದೆ ಎಂದು ಮುಖ್ಯಮಂತ್ರಿಗಳು ಮಾಹಿತಿ ನೀಡಿದ್ದಾರೆ.

English summary
'Everyone knows who is doing Bharat Jodo and who is doing Todo' says Chief Minister Basavaraj Bommai in haveri. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X