CM Bommai Cast Vote: ಪುತ್ರ, ಪುತ್ರಿಯೊಂದಿಗೆ ಮತ ಚಲಾಯಿಸಿದ ಸಿಎಂ ಬಸವರಾಜ ಬೊಮ್ಮಾಯಿ
ಇಂದು (ಬುಧವಾರ, ಮೇ 10) ಕರ್ನಾಟಕದ ಎಲ್ಲ 224 ಕ್ಷೇತ್ರಗಳಲ್ಲಿ 2023ರ ವಿಧಾನಸಭೆ ಚುನಾವಣೆಗೆ ಮತದಾನ ನಡೆಯುತ್ತಿದ್ದು, ರಾಜ್ಯದ ಮತದಾರರು ಅತ್ಯಂತ ಉತ್ಸಾಹದಿಂದ ಪಾಲ್ಗೊಳ್ಳುತ್ತಿದ್ದಾರೆ.
ಇದೇ ವೇಳೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಪುತ್ರ ಭರತ್ ಬೊಮ್ಮಾಯಿ ಹಾಗೂ ಪುತ್ರಿ ಅದಿತಿ ಬೊಮ್ಮಾಯಿಯೊಂದಿಗೆ ಬಂದು ಶಿಗ್ಗಾಂವಿ ಪಟ್ಟಣದ ಸರಕಾರಿ ಕನ್ನಡ ಹಿರಿಯ ಮಾದರಿ ಗಂಡುಮಕ್ಕಳ ಶಾಲೆಯ ಮತಗಟ್ಟೆ ಸಂಖ್ಯೆ 102ರಲ್ಲಿ ಮತ ಚಲಾಯಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಮತದಾನ ಮಾಡಲು ತೆರಳುವ ಮುನ್ನ ಬೆಳಿಗ್ಗೆ 8 ಗಂಟೆಗೆ ಹುಬ್ಬಳ್ಳಿಯ ಅಶೋಕ ನಗರದಲ್ಲಿರುವ ಆಂಜನೇಯನ ದೇವಸ್ಥಾನಕ್ಜೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.
ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಮತದಾನಕ್ಕೂ ಮುನ್ನ ಶಿಗ್ಗಾಂವಿಯ ತಡಸ ಕ್ರಾಸ್ ಬಳಿ ಇರುವ ಗಾಯತ್ರಿ ದೇವಿ ಮಂದಿರಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.
"ನಮ್ಮ ಪಕ್ಷದ ಪ್ರಚಾರದ ರೀತಿ ಮತ್ತು ಜನರು ಪ್ರತಿಕ್ರಿಯಿಸಿದ ರೀತಿಯಿಂದ ನನಗೆ ತುಂಬಾ ಸಂತೋಷವಾಗಿದೆ, ಕರ್ನಾಟಕದ ಅಭಿವೃದ್ಧಿಗೆ ಬಂದು ಮತ ಚಲಾಯಿಸುವಂತೆ ನಾನು ಜನರಲ್ಲಿ ಮನವಿ ಮಾಡುತ್ತೇನೆ," ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲೂ ಮತದಾನ ಆರಂಭವಾಗಿದ್ದು, ಬೆಳಗ್ಗೆ 7ರಿಂದ ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದೆ. 224 ಕ್ಷೇತ್ರ, 2,615 ಅಭ್ಯರ್ಥಿಗಳ ಹಣೆ ಬರಹವನ್ನು ರಾಜ್ಯದ 5,31,33,054 ಮತದಾರರು ನಿರ್ಧರಿಸಲಿದ್ದಾರೆ.












Click it and Unblock the Notifications