ಹಾವೇರಿ ತಲುಪಿದ ಸಿದ್ದರಾಮಯ್ಯ, ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ

Posted By:
Subscribe to Oneindia Kannada

ಹಾವೇರಿ, ಡಿಸೆಂಬರ್ 23: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನವಕರ್ನಾಟಕ ನಿರ್ಮಾಣ ಯಾತ್ರೆ ಇಂದು ಹಾವೇರಿಯಲ್ಲಿ ಆಯೋಜಿತಗೊಂಡಿದೆ.

ಬೆಳಗಾವಿ ಜಿಲ್ಲೆ ಅಭಿವೃದ್ಧಿಗೆ ಸಿದ್ದರಾಮಯ್ಯ ಸರ್ಕಾರ ನೀಡಿದ ಕೊಡುಗೆಗಳು

ರಾಜ್ಯದಲ್ಲಿ ಅತಿಹೆಚ್ಚು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಜಿಲ್ಲೆ ಬೆಳಗಾವಿಯಲ್ಲಿ ಎರಡು ದಿನಗಳ ಕಾಲ ಯಾತ್ರೆ ಯಶಸ್ವಿಯಾಗಿ ಮುಗಿಸಿದ ನಂತರ ಸಿದ್ದರಾಮಯ್ಯ ಅವರು ಇಂದು ಹಾವೇರಿಗೆ ಹೊರಟಿದ್ದಾರೆ.

CM Siddaramaiah

ಬೆಳಿಗ್ಗೆ 10.30ಗೆ ಹಾವೇರಿಯಲ್ಲಿ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಲಿರುವ ಮುಖ್ಯಮಂತ್ರಿಗಳು, 1.30ಕ್ಕೆ ಬ್ಯಾಡಗಿಯಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಸಾಕಷ್ಟು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿರುವ ಮುಖ್ಯಮಂತ್ರಿಗಳು ಹಾವೇರಿ ಜಿಲ್ಲೆಗೆ ಸರ್ಕಾರ ನೀಡಿರುವ ಕೊಡುಗೆಗಳ ಬಗ್ಗೆ ಮನದಟ್ಟು ಮಾಡಲಿದ್ದಾರೆ.

ಹಾವೇರಿಯಲ್ಲಿ ಜಿಲ್ಲೆಯಲ್ಲಿ ಪ್ರಸ್ತುತ ಕಾಂಗ್ರೆಸ್ ನ ನಾಲ್ಕು ಶಾಸಕರಿದ್ದು, ಇನ್ನುಳಿದ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರು ಆರಿಸಿಬಂದಿದ್ದರು. ಆದರೆ ಹಾವೇರಿಯ ಎಲ್ಲ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲುವಂತೆ ಮಾಡಲು ಮುಖ್ಯಮಂತ್ರಿಗಳು ಏನು ಮೋಡಿ ಮಾಡುತ್ತಾರೊ ಕಾದು ನೋಡಬೇಕು.

ಮುಖ್ಯಮಂತ್ರಿಗಳ ಜೊತೆಗೆ ಸ್ಥಳೀಯ ಕಾಂಗ್ರೆಸ್ ಶಾಸಕರಾದ ರುದ್ರಪ್ಪ ಮಾನಪ್ಪ ಲಮಾಣಿ, ಮನೋಹರ ತಹಶೀಲ್ದಾರ್, ಬಸವರಾಜ ನೀಲಪ್ಪ ಶಿವಣ್ಣವರ್ ಮತ್ತು ಹಾವೇರಿಯ ಪ್ರಮುಖ ಕಾಂಗ್ರೆಸ್ ಮುಖಂಡ ಕೆ.ಬಿ.ಕೋಳಿವಾಡ ಇರಲಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
CM Siddaramaiah inaugurating multicrore development programs in Haveri district today. He will also address people in Haveri and Byadagi.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ