ಹಾವೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊರೊನಾ ವೈರಸ್; ಹಾವೇರಿ ಆಸ್ಪತ್ರೆಯಲ್ಲಿ ವಿಶೇಷ ಘಟಕ ಸ್ಥಾಪನೆ

|
Google Oneindia Kannada News

ಹಾವೇರಿ, ಫೆಬ್ರವರಿ 12 : ಕೊರೊನಾ ವೈರಸ್‍ನಿಂದಾಗಿ ಚೀನಾದ ಜನರು ತತ್ತರಿಸಿ ಹೋಗಿದ್ದಾರೆ. ಈ ನಿಟ್ಟಿನಲ್ಲಿ ದೇಶದಲ್ಲೆಲ್ಲಾ ಸರಕಾರಿ ಆಸ್ಪತ್ರೆಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಆದೇಶ ನೀಡಲಾಗಿದೆ. ಹಾವೇರಿ ಜಿಲ್ಲೆಯಲ್ಲಿಯೂ ಅಂತಹ ಗುಣಲಕ್ಷಣಗಳು ಕಂಡುಬಂದಂತಹ ರೋಗಿಗಳ ಚಿಕಿತ್ಸೆಗೆ ವಿಶೇಷ ಘಟಕ ಸ್ಥಾಪಿಸಲಾಗಿದೆ.

ಬುಧವಾರ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ನಾಗರಾಜ ನಾಯಕ್ ವಿಶೇಷ ಘಟಕದ ವೀಕ್ಷಣೆ ಮಾಡಿದರು. ಘಟಕ ನಾಲ್ಕು ಬೆಡ್‍ಗಳನ್ನು ಹೊಂದಿದೆ. ಎರಡು ಕೊಠಡಿಗಳಲ್ಲಿ ಚಿಕಿತ್ಸೆಗೆ ಬೇಕಾದ ಎಲ್ಲಾ ವ್ಯವಸ್ಥೆ ಮಾಡಲಾಗಿದೆ. ರಾತ್ರಿ ಮತ್ತು ಹಗಲು ನಿರಂತರವಾಗಿ ಇಬ್ಬರು ಸ್ಟಾಫ್‌ನರ್ಸ್ ಹಾಗೂ ನುರಿತ ವೈದ್ಯರನ್ನು ನೇಮಕ ಮಾಡಲಾಗಿದೆ.

ಮಾಸ್ಕ್ ಧರಿಸಿದರೆ ಕೊರೊನಾ ವೈರಸ್ ಬರುವುದಿಲ್ಲವೇ?ಮಾಸ್ಕ್ ಧರಿಸಿದರೆ ಕೊರೊನಾ ವೈರಸ್ ಬರುವುದಿಲ್ಲವೇ?

ಹಾವೇರಿ ಜಿಲ್ಲೆಯಲ್ಲಿ ಇದುವರೆಗೂ ಕೊರೊನಾ ವೈರಸ್‌ ಸೋಂಕಿನ ಯಾವುದೇ ಪ್ರಕರಣಗಳು ಕಂಡುಬಂದಿಲ್ಲ. ಆದರೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸೋಂಕು ಕಂಡು ಬಂದರೆ ಚಿಕಿತ್ಸೆ ನೀಡಲು ಎಲ್ಲಾ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.

 ಕೊರೊನಾ ವೈರಸ್ ಬಗ್ಗೆ ಜೋಕ್ ಮಾಡಿದವನಿಗೆ 5 ವರ್ಷ ಜೈಲು ಶಿಕ್ಷೆ ಕೊರೊನಾ ವೈರಸ್ ಬಗ್ಗೆ ಜೋಕ್ ಮಾಡಿದವನಿಗೆ 5 ವರ್ಷ ಜೈಲು ಶಿಕ್ಷೆ

Coronavirus Special Unit Set Up At Haveri Hospital

ಜಿಲ್ಲಾ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳು, ದಾಖಲಾಗಿರುವ ರೋಗಿಗಳು ಮತ್ತು ಸಾರ್ವಜನಿಕರು ಆಸ್ಪತ್ರೆಯ ಕೆಲಸದ ಅವಧಿಯಲ್ಲಿ ಮಾಸ್ಕ್ ಧರಿಸಲು ಸಲಹೆ ನೀಡಲಾಗಿದೆ.

ಮಾರಕ ಕೊರೊನಾ ವೈರಸ್‌ಗೆ ಹೊಸ ಹೆಸರು: ಲಸಿಕೆ ಕಂಡುಹಿಡಿಯಲು ಇನ್ನೂ 18 ತಿಂಗಳು ಬೇಕುಮಾರಕ ಕೊರೊನಾ ವೈರಸ್‌ಗೆ ಹೊಸ ಹೆಸರು: ಲಸಿಕೆ ಕಂಡುಹಿಡಿಯಲು ಇನ್ನೂ 18 ತಿಂಗಳು ಬೇಕು

ಚೀನಾ ಸೇರಿದಂತೆ ವಿಶ್ವದ ಅನೇಕ ರಾಷ್ಟ್ರಗಳಲ್ಲಿ ಕೊರೊನಾ ವೈರಸ್ ಆತಂಕ ಹುಟ್ಟಿಸಿದೆ. ಜನರು ಅಗತ್ಯ ಮುನ್ನೆಚ್ಚರಿಕೆಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಕರ್ನಾಟಕದಲ್ಲಿ ಇದುವರೆಗೂ ಯಾವುದೇ ಕೊರೊನಾ ಪ್ರಕರಣಗಳು ಪತ್ತೆಯಾಗಿಲ್ಲ.

English summary
Special unit has been set up in Haveri district government hospital to treat Coronavirus patient. Doctors and two nurse allotted to unit for 24 hours service.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X