DK Shivakumar: ಕಾಂಗ್ರೆಸ್ ಮುಖಂಡನಿಗೆ ಕಪಾಳಮೋಕ್ಷ ಮಾಡಿದ ಡಿಕೆ ಶಿವಕುಮಾರ್
ಹಾವೇರಿ ಮೇ 5: ಹೆಗಲ ಮೇಲೆ ಕೈ ಹಾಕಿದ್ದಕ್ಕೆ ಕೋಪಗೊಂಡ ಡಿಸಿಎಂ ಡಿಕೆ ಶಿವಕುಮಾರ್ ಕಾಂಗ್ರೆಸ್ ಮುಖಂಡನಿಗೆ ಕಪಾಳಮೋಕ್ಷ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.
ಹಾವೇರಿಯ ಸವಣೂರಿನಲ್ಲಿ ಶನಿವಾರ ಈ ಘಟನೆ ನಡೆದಿದೆ. ಲೋಕಸಭಾ ಚುನಾವಣೆ ಪ್ರಚಾರಕ್ಕಾಗಿ ಡಿಸಿಎಂ ಡಿಕೆ ಶಿವಕುಮಾರ್ ಸವಣೂರಿಗೆ ಆಗಮಿಸಿದ್ದರು. ಡಿ.ಕೆ ಶಿವಕುಮಾರ್ ಅವರನ್ನು ನೋಡಲು ದೊಡ್ಡ ಜನರ ಗುಂಪೇ ಸೇರಿತ್ತು.

ಧಾರವಾಡ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ ಪರ ಪ್ರಚಾರ ನಡೆಸಲೆಂದು ಸವಣೂರಿನಲ್ಲಿ ಕಾರಿನಿಂದ ಇಳಿಯುತ್ತಿದ್ದಂತೆ ಸ್ಥಳೀಯ ಮುಖಂಡ ಪುರಸಭೆ ಸದಸ್ಯ ಅಲ್ಲಾವುದ್ದೀನ್ ಮನಿಯಾರ್ ಹೆಗಲ ಮೇಲೆ ಕೈ ಹಾಕಿದ್ದಾರೆ. ಇದರಿಂದ ಕೋಪಗೊಂಡ ಡಿಕೆ ಶಿವಕುಮಾರ್ ಹಿಂದು ಮುಂದು ನೋಡದೇ ಕಪಾಳಕ್ಕೆ ಹೊಡೆದಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಬಿಜೆಪಿ ಮುಖಂಡನ ಮೇಲೆ ಹಲ್ಲೆ
ಈ ನಡುವೆ ಬಿಜೆಪಿ ಮುಖಂಡನ ಮೇಲೆ ಹಲ್ಲೆ ಮಾಡಿದ ಆರೋಪ ಕೇಳಿ ಬಂದಿದೆ. ಕಾಂಗ್ರೆಸ್‌ಗೆ ಏಕೆ ಮತ ಹಾಕೋದಿಲ್ಲ ಎಂದು ಪ್ರಶ್ನಿಸಿ ಬಿಜೆಪಿ ಮುಖಂಡನ ಮೇಲೆ ಹಲ್ಲೆ ನಡೆಸಲಾಗಿದೆ. ಕೊಪ್ಪಳ ತಾಲೂಕಿನ ಯಲಮಗೇರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಬಿಜೆಪಿ ಮುಖಂಡ ದ್ಯಾಮಣ್ಣ ಬಾಲನಗೌಡರ್ ಮೇಲೆ ಕಾಂಗ್ರೆಸ್ ಮುಖಂಡರು ಹಲ್ಲೆ ಮಾಡಿದ್ದಾರೆ. ಗವಿಸಿದ್ದ, ಬಾಳಪ್ಪ, ನೀಲಪ್ಪ, ಗಂಗಣ್ಣ ಎಂಬುವವರ ವಿರುದ್ಧ ಹಲ್ಲೆ ಆರೋಪ ಮಾಡಲಾಗಿದೆ.
ಮತಯಾಚನೆಗೆಂದು ನಿನ್ನೆ ರಾತ್ರಿ ದ್ಯಾಮಣ್ಣ ಮನೆಗೆ ಕಾಂಗ್ರೆಸ್ ಮುಖಂಡರು ತೆರಳಿದ್ರು. ಈ ವೇಳೆ ದ್ಯಾಮಣ್ಣ ಕಾಂಗ್ರೆಸ್‌ಗೆ ಮತ ಹಾಕೋಲ್ಲ , ಬಿಜೆಪಿಗೆ ಮತ ಹಾಕುತ್ತೇವೆ ಎಂದು ಹೇಳಿದ್ದಾರೆ. ಕಾಂಗ್ರೆಸ್‌ಗೆ ಯಾಕೆ ಮತ ಹಾಕೋದಿಲ್ಲ ಎಂದು ದ್ಯಾಮಣ್ಣನ ಮೇಲೆ ಕಟ್ಟಿಗೆಯಿಂದ ಹಲ್ಲೆ ಮಾಡಲಾಗಿದೆ.












Click it and Unblock the Notifications