ಜೈಲಿಗೆ ಹೋಗಿ ಬಂದ ಡಿಕೆಶಿ ಆಟ ಹಾವೇರಿಯಲ್ಲಿ ನಡೆಯಲ್ಲ: ಬಿ.ಸಿ.ಪಾಟೀಲ್
ಹಾವೇರಿ, ಡಿಸೆಂಬರ್ 02: ಡಿ.ಕೆ.ಶಿವಕುಮಾರ್ ಜೈಲಿಗೆ ಹೋಗಿ ಬಂದವರು, ಅವರ ಆಟ ನಮ್ಮ ಹಾವೇರಿ ಜಿಲ್ಲೆಯಲ್ಲಿ ನಡೆಯುವುದಿಲ್ಲ ಎಂದು ಹಿರೇಕೆರೂರು ಬಿಜೆಪಿ ಅಭ್ಯರ್ಥಿ ಬಿ.ಸಿ.ಪಾಟೀಲ್ ಹೇಳಿದ್ದಾರೆ.
ಹಿರೇಕೆರೂರಿನಲ್ಲಿ ಮಾತನಾಡಿದ ಬಿ.ಸಿ.ಪಾಟೀಲ್ ಅವರು ಡಿ.ಕೆ.ಶಿವಕುಮಾರ್ ಅವರು ಇಷ್ಟು ದಿನ ಜೈಲಿಗೆ ಹೋಗಿ ಕರ್ನಾಟಕದ ಕೀರ್ತಿ ಪತಾಕೆ ಹಾರಿಸಿ ಬಂದಿದ್ದಾರೆ, ಅವರ ಹಿನ್ನೆಲೆ ಏನು ಎಂಬುದು ಗೊತ್ತಿದೆ ಎಂದು ಟೀಕಿಸಿದ್ದಾರೆ.
ಈಗಾಗಲೇ ಎಲ್ಲಾ ಗ್ರಾಮಗಳಲ್ಲಿ ಪ್ರಚಾರ ಮುಗಿಸಲಾಗಿದೆ, ಈ ಉಪ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಜಯಗಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಡಿಕೆಶಿಯಂತಹ ಹತ್ತು ಮಂದಿ ಬಂದರೂ ಏನು ಮಾಡಲಾಗುವುದಿಲ್ಲ ಎಂದರು.

ಪಾಟೀಲ್ ನೋಟು, ಬನ್ನಿಕೋಡಗೆ ಓಟು ಎಂದು ಹೇಳಲು ಕನಕಪುರದಿಂದ ಬರಬೇಕಾಯಿತು, ಅವರು ಆಚಾರ, ವಿಚಾರದ ಬಗ್ಗೆ ಮಾತನಾಡುವಷ್ಟು ದೊಡ್ಡವರಲ್ಲ, ಅದನ್ನು ಅವರು ಕಳೆದಿಕೊಂಡಿದ್ದಾರೆ. ಅವರ ಹಿನ್ನೆಲೆ ಏನು ಎಂಬುದು ರಾಜ್ಯದ ಜನಕ್ಕೆ ಗೊತ್ತಾಗಿದೆ ಎಂದು ಹರಿಹಾಯ್ದರು.
ಕಾಂಗ್ರೆಸ್ ಮತ್ತು ಜೆಡಿಎಸ್ ನದು ದಿನಕ್ಕೊಂದು ನಾಟಕ, ಇವರ ನಾಟಕ ನೋಡಿ ಜನರು ನಗುತ್ತಿದ್ದಾರೆ, ಇವರ ನಾಟಕಕ್ಕೆ ಜನರಿಗೆ ಟೈಟಲ್ ಕೊಡಲು ಆಗುತ್ತಿಲ್ಲ ಎಂದರು. ಯು.ಬಿ.ಬಣಕಾರ್ ಹಾಗೂ ನನ್ನ ನಡುವೆ ಜಗಳ ಹಚ್ಚಿ ಲಾಭ ಪಡೆಯಲು ನೋಡುತ್ತಿದ್ದಾರೆ, ಅದು ಶಿವಕುಮಾರ್ ಭ್ರಮೆಯಲ್ಲಿದ್ದಾರೆ.
ಆದರೆ ಯು.ಬಿ.ಬಣಕಾರ್ ಬಹಳ ಬುದ್ದಿವಂತರು, ಇಂತವರ ಹೇಳಿಕೆಗಳಿಗೆ ತಲೆಕೆಡಿಸಿಕೊಳ್ಳವವರಲ್ಲ ಎಂದರು. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಎರಡು ಬಾರಿ ಈ ರಾಜ್ಯದ ಮುಖ್ಯಮಂತ್ರಿಯಾದವರು ನಾಲಿಗೆ ಮೇಲೆ ಹಿಡಿತವಿರಬೇಕು, ಅವರ ಹಿತಿಹಾಸವೇ ಸರಿಯಾಗಿಲ್ಲ, ಅವರ ಘನತೆ, ಗೌರವಕ್ಕೆ ತಕ್ಕುದ್ದಾದ ಮಾತನಾಡಬೇಕು ಎಂದು ಛೇಡಿಸಿದರು.
ಹಿರೇಕೆರೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಬಿ.ಸಿ.ಪಾಟೀಲ್, ಕಾಂಗ್ರೆಸ್ ಅಭ್ಯರ್ಥಿಯಾಗಿ ಬಿ.ಹೆಚ್.ಬನ್ನಿಕೋಡ್ ಉಪ ಚುನಾವಣಾ ಆಖಾಡದಲ್ಲಿದ್ದಾರೆ. ಡಿಸೆಂಬರ್ 05 ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 09 ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.
-
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ











Click it and Unblock the Notifications