ಹಾವೇರಿಯಲ್ಲಿ ಪ್ರವಾಹ ಸಂತ್ರಸ್ತರಿಗೆ 20*14 ಅಳತೆಯ ಶೆಡ್

ಹಾವೇರಿ, ಆಗಸ್ಟ್ 25 : ಹಾವೇರಿ ಜಿಲ್ಲಾಡಳಿತ ಪ್ರವಾಹದಿಂದ ಮನೆ ಕಳೆದುಕೊಂಡವರಿಗೆ ತಾತ್ಕಾಲಿಕ ಶೆಡ್ ನಿರ್ಮಾಣ ಮಾಡುವ ಕಾರ್ಯ ಆರಂಭಿಸಿದೆ. ಜಿಲ್ಲೆಯಲ್ಲಿ 7384 ಮನೆಗಳಿಗೆ ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ.

ಅತಿವೃಷ್ಠಿ ಹಾಗೂ ನೆರೆಯಿಂದ ಮನೆ ಕಳೆದುಕೊಂಡು ಸಂತ್ರಸ್ತರಾಗಿರುವ ಕುಟುಂಬಗಳಿಗಾಗಿ ತಾತ್ಕಾಲಿಕವಾಗಿ ಶೆಡ್ ನಿರ್ಮಾಣ ಕಾರ್ಯಕ್ಕೆ ಜಿಲ್ಲಾಡಳಿತ ಚಾಲನೆ ನೀಡಿದೆ. ನಾಗನೂರು, ನಾಗೇಂದ್ರನಮಟ್ಟಿ, ಮೇಲ್ಮುರಿ, ಕುಣಿಮೆಳ್ಳಿಹಳ್ಳಿ ಗ್ರಾಮಗಳಲ್ಲಿ ಪ್ರತಿ ಕುಟುಂಬಕ್ಕೆ 20*14 ಅಳತೆಯ ತಗಡಿನ ಶೆಡ್‍ಗಳನ್ನು ನಿರ್ಮಿಸಿಕೊಡಲಾಗುತ್ತದೆ.

ನಾಗನೂರಿನಲ್ಲಿ 20, ನಾಗೇಂದ್ರನಮಟ್ಟಿಯಲ್ಲಿ 28, ಮೇಲ್ಮುರಿಯಲ್ಲಿ 50, ಕುಣಿಮೆಳ್ಳಿಹಳ್ಳಿಯಲ್ಲಿ 15 ಶೆಡ್‍ ಸೇರಿದಂತೆ 113 ತಗಡಿನ ಶೆಡ್‍ಗಳನ್ನು ನಿರ್ಮಿಸಲು ಉದ್ದೇಶಿಸಿದ್ದು, ಮೂರು ದಿನಗಳ ಒಳಗಾಗಿ ಶೆಡ್ ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದೆ.

Flood : 113 Temporary Shed Construction In Haveri

ಶೆಡ್‌ಗಳಲ್ಲಿ ಸಂತ್ರಸ್ತರ ವಾಸ್ತವ್ಯಕ್ಕೆ ಅಗತ್ಯವಾದ ಕುಡಿಯುವ ನೀರು, ಬೆಳಕಿನ ವ್ಯವಸ್ಥೆ ಸೇರಿದಂತೆ ತಾತ್ಕಾಲಿಕವಾಗಿ ಮೂಲ ಸೌಕರ್ಯಗಳನ್ನು ಕಲ್ಪಿಸಿಕೊಡಲಾಗುತ್ತದೆ. ಪ್ರವಾಹ ಪೀಡಿತ ಪ್ರದೇಶಗಳ ಎಲ್ಲಾ ಶೌಚಾಲಯಗಳನ್ನು ಪುನರ್ ನಿರ್ಮಾಣ ಮಾಡಬೇಕು ಹಾಗೂ ಅಗತ್ಯವಿದ್ದಲ್ಲಿ ತಾತ್ಕಾಲಿಕ ಶೌಚಾಲಯಗಳನ್ನು ನಿರ್ಮಿಸಿ ಅಗತ್ಯ ನೀರಿನ ವ್ಯವಸ್ಥೆ ಮಾಡುವ ಮೂಲಕ ಬಯಲು ಶೌಚವನ್ನು ತಡೆಗಟ್ಟಲು ಯೋಜನೆ ರೂಪಿಸಲಾಗಿದೆ.

ಹಾವೇರಿ ಜಿಲ್ಲೆಯಲ್ಲಿ ಪ್ರವಾಹದಿಂದಾಗಿ 7384 ಮನೆಗಳಿಗೆ ಹಾನಿಯಾಗಿದ್ದು, ಅಂದಾಜು 46 ಕೋಟಿ ರೂ. ಪರಿಹಾರ ಅಗತ್ಯವಾಗಿದೆ. 126 ರಾಸುಗಳ ಜೀವಹಾನಿಯಾಗಿದ್ದು 14.20 ಲಕ್ಷ ರೂ. ಪರಿಹಾರ ನೀಡಬೇಕಾಗಿದೆ.

ಪ್ರವಾಹದಿಂದಾಗಿ ಕರ್ನಾಟಕದಲ್ಲಿ 2.3 ಲಕ್ಷ ಮನೆಗಳಿಗೆ ಹಾನಿಯಾಗಿದೆ. ಇವುಗಳಲ್ಲಿ 1.79 ಲಕ್ಷ ಮನೆಗಳಿಗೆ ಸಂಪೂರ್ಣ ಅಥವ ತೀವ್ರವಾಗಿ ಹಾನಿಯಾಗಿದೆ ಎಂದು ಕರ್ನಾಟಕ ಸರ್ಕಾರ ಹೇಳಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+