Breaking: ಮಗನಿಗೆ ಚುನಾವಣೆ ಕ್ಷೇತ್ರ ಬಿಟ್ಟು ಕೊಟ್ಟ ಕೆ.ಬಿ.ಕೋಳಿವಾಡ

ಹಾವೇರಿ ಜುಲೈ 22: ಮಾಜಿ ಮುಖ್ಯಮಂತ್ರಿ ಬಿ.ಬಿಎಸ್ ಯಡಿಯೂರಪ್ಪ ಅವರು ಚುನಾವಣೆ ಕ್ಷೇತ್ರದಿಂದ ಹಿಂದೆ ಸರಿದ ಬೆನ್ನಲ್ಲೆ ಮತ್ತೊಬ್ಬ ನಾಯಕ ತಮ್ಮ ಮಗನಿಗಾಗಿ ಚುನಾವಣೆ ಕ್ಷೇತ್ರದಿಂದ ಹಿಂದೆ ಸರಿಯುವುದಾಗಿ ಘೋಷಣೆ ಮಾಡಿದ್ದಾರೆ.

"ಚುನಾವಣೆಗಳಿಂದ ನಿವೃತ್ತಿ ಆಗಿದ್ದು, ಇನ್ನು ಮುಂದೆ ಯಾವುದೇ ಚುನಾವಣೆಗಳಲ್ಲಿ ನಾನು ಸ್ಪರ್ಧಿಸುವುದಿಲ್ಲ. ಹಾವೇರಿ ಜಿಲ್ಲೆಯ ರಾಣಿಬೆನ್ನೂರು ಚುನಾವಣೆ ಕ್ಷೇತ್ರದಿಂದ ಹಿಂದೆ ಸರಿದು ಮಗನಿವೆ ಆ ಅವಕಾಶ ಮಾಡಿಕೊಡುತ್ತೇನೆ," ಎಂದು ಮಾಜಿ ಸ್ಪೀಕರ್ ಹಾಗೂ ಕಾಂಗ್ರೆಸ್‌ನ ನಾಯಕ ಕೆ.ಬಿ.ಕೋಳಿವಾಡ ಘೋಷಿಸಿದ್ದಾರೆ.

ಈ ಕುರಿತು ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನಲ್ಲಿ ಸುದ್ದಿಗಾರರಿಗೆ ಮಾಹಿತಿ ನೀಡಿರುವ ಅವರು, ಚುಣಾವಣಾ ಕ್ಷೇತ್ರದಿಂದ ಹಿಂದೆ ಸರಿದು, ಆಕ್ಷೇತ್ರವನ್ನು ಮಗನಿಗೆ ಬಿಟ್ಟುಕೊಟ್ಟಿದ್ದೇನೆ. ಪಕ್ಷದ ಹೈಕಮಾಂಡ್ ಸೂಚನೆಯಂತೆ ನಿರ್ಧಾರ ಕೈಗೊಂಡಿರುವುದಾಗಿ ಅವರು ತಿಳಿಸಿದ್ದಾರೆ.

Former Speaker KB Koliwada left the constituency to his son

"ಕಳೆದ ಐದು ದಶಕಗಳಿಂದಲೂ ರಾಜಕೀಯದಲ್ಲಿ ಸಕ್ರಿಯವಾಗಿದ್ದೇನೆ. ನಾನು ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರು ಸಮಕಾಲೀನರು. ನನಗಿಂತಲೂ ಸಿದ್ದರಾಮಯ್ಯ ಹನ್ನೊಂದು ವರ್ಷ ಹಾಗೂ ಅವರಿಗಿಂತಲೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ಕಿರಿಯರು. ಪಕ್ಷದ ಹೈಕಮಾಂಡ ಬಯಸಿದರೆ ಕರ್ನಾಟಕದಿಂದ ಲೋಕಸಭೆ ಹಾಗೂ ರಾಜ್ಯಸಭೆಗೆ ಸ್ಪರ್ಧಿಸಲು ಸಿದ್ಧನಿದ್ದೇನೆ," ಎಂದು ಅವರು ತಿಳಿಸಿದ್ದಾರೆ.

ಬಿಜೆಪಿ ಬಿ.ವೈ. ವಿಜಯೇಂದ್ರ ಅವರು ಪರಿಷತ್‌ಗೆ ಪ್ರಯತ್ನಿಸಿದ್ದರು. ಆದರೆ ಆಗಿರಲಿಲ್ಲ. ಇದೀಗ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಹ ಮಗ ಬಿ.ವೈ .ವಿಜಯೇಂದ್ರನಿಗಾಗಿ ಶಿಕಾರಿಪುರ ವಿಧಾನಸಭಾ ಕ್ಷೇತ್ರ ಬಿಟ್ಟುಕೊಟ್ಟಿದ್ದಾರೆ. ಈ ಬಗ್ಗೆ ಬಿಜೆಪಿ ಹೈಕಮಾಂಡ್​ ಹೇಗೆ ಪ್ರತಿಕ್ರಿಯಿಸುತ್ತದೆ ಎಂಬುದರ ಬಗ್ಗೆ ಏನು ಹೇಳುವುದಿಲ್ಲ ಎಂದರು.

Former Speaker KB Koliwada left the constituency to his son

ಕಾಂಗ್ರೆಸ್‌ನಲ್ಲಿ ನಾಯಕರು ಕಚ್ಚಾಡುವುದನ್ನು ಬಿಟ್ಟು ಪಕ್ಷಕ್ಕಾಗಿ, ಪಕ್ಷದ ಹಿತಕ್ಕಾಗಿ ಶ್ರಮಿಸಬೇಕು. ಕೈ ನಾಯಕರ ಹೇಳಿಕೆಗಳನ್ನೇ ಬಿಜೆಪಿಯವರು ಬಂಡವಾಳ ಮಾಡಿಕೊಳ್ಳುತ್ತಿದ್ದಾರೆ ಎಂದು ಸ್ವಪಕ್ಷದ ನಾಯಕರುನ್ನು ಕೆ.ಬಿ.ಕೋಳಿವಾಡ ಎಚ್ಚರಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+