ಹಾವೇರಿ: ಸೇವಾಭದ್ರತೆಗೆ ಒತ್ತಾಯಿಸಿ ಅತಿಥಿ ಉಪನ್ಯಾಸಕರ ಪ್ರತಿಭಟನೆ
ಹಾವೇರಿ, ಜನವರಿ 04 : ಸೇವಾಭದ್ರತೆ ಮತ್ತು ಶಾಶ್ವತ ನಿಯಮಾವಳಿ ರಚನೆಗೆ ಒತ್ತಾಯಿಸಿ ಅತಿಥಿ ಉಪನ್ಯಾಸಕರು ಹಾವೇರಿಯಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.
ಸೇವಾಭದ್ರತೆ ಮತ್ತು ಶಾಶ್ವತ ನಿಯಮಾವಳಿ ರಚನೆಗೆ ಒತ್ತಾಯಿಸಿ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರ ಕಾರ್ಯಾಲಯದ ಮುಂದೆ ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸಿದರು. ರಾಜ್ಯದ 411 ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರ ಕೆಲಸ ಖಾಯಂಗೊಳಿಸುವಂತೆ ಒತ್ತಾಯಿಸಿದರು.

ಅತಿಥಿ ಉಪನ್ಯಾಸಕರ ವೇತನ ಕೂಡ ಕಡಿಮೆ ಇದೆ. ಜತೆಗೆ ತಮ್ಮ ಕೆಲಸಕ್ಕೆ ಭದ್ರತೆಯಿಲ್ಲ. ಕೂಡಲೆ ಶಾಶ್ವತ ನಿಯಮಾವಳಿ ರಚನೆಗೆ ಸಂಭಂದಿಸಿ ಸಚಿವ ಸಂಪುಟದಲ್ಲಿ ಮಂಡನೆ ಮಾಡಬೇಕೆಂದು ಆಗ್ರಹಿಸಿದರು. ಸಚಿವರ ಕಾರ್ಯಾಲಯದ ಎದುರು ಮೌನ ಪ್ರತಿಭಟನೆ. ಹಾವೇರಿ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.












Click it and Unblock the Notifications