Hangal Assembly Constituency Analysis: ಕಾಂಗ್ರೆಸ್ ತೆಕ್ಕೆಯಿಂದ ಅಧಿಕಾರ ಕಸಿದುಕೊಳ್ಳುತ್ತಾ ಬಿಜೆಪಿ?
ಮಂಡ್ಯ, ಮಾರ್ಚ್ 20: ಹಾನಗಲ್ ಕ್ಷೇತ್ರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತವರು ಜಿಲ್ಲೆಯ ಹಾವೇರಿ ಜಿಲ್ಲೆಯ ಪ್ರಮುಖ ವಿಧಾನಸಭಾ ಕ್ಷೇತ್ರಗಳಲ್ಲಿ ಒಂದು. ಖ್ಯಾತ ಹಿಂದೂಸ್ತಾನಿ ಗಾಯಕಿ ಗಂಗೂಬಾಯಿ ಹಾನಗಲ್ ಅವರ ಹುಟ್ಟೂರು ಹಾನಗಲ್. ರಾಜಕೀಯ ಸೇರಿದಂತೆ ಇತರ ವಿಚಾರಗಳಿಂದಲೂ ಕ್ಷೇತ್ರ ಕರ್ನಾಟಕದಲ್ಲಿ ಜನಪ್ರಿಯತೆ ಗಳಿಸಿದೆ.
ಇತಿಹಾಸ ಪ್ರಸಿದ್ಧವಾದ ಜಕಣಾಚಾರಿ ಕಟ್ಟಿಸಿದ ಶ್ರೀ ತಾರಕೇಶ್ವರ ದೇವಾಲಯ ಕ್ಷೇತ್ರದ ಪ್ರಮುಖ ಆಕರ್ಷಣೆಯಾಗಿದ್ದು, ಹಾನಗಲ್ ತಾಲೂಕು ಹಾವೇರಿ ಜಿಲ್ಲೆಯ ಮಲೆನಾಡು ಪ್ರದೇಶಕ್ಕೆ ಸೇರಿದೆ. ವರದಾ ನದಿಯು ಇಲ್ಲಿನ ರೈತರಿಗೆ ವರವಾಗಿದ್ದು, ಭತ್ತ, ಅಡಿಕೆ, ಮೆಣಸಿನಕಾಯಿ ಜೊತೆಗೆ ಶ್ರೀಗಂಧವನ್ನು ಸಹ ಇಲ್ಲಿ ಬೆಳೆಯಲಾಗುತ್ತದೆ.

ಬಿಜೆಪಿ ಭದ್ರಕೋಟೆಯಾಗಿದ್ದ ಹಾನಗಲ್ ಕ್ಷೇತ್ರ ಸದ್ಯ ಕಾಂಗ್ರೆಸ್ ತೆಕ್ಕೆಯಲ್ಲಿದ್ದು, ಹಾನಗಲ್ ಕ್ಷೇತ್ರದ ಜನತೆ ಸದ್ಯ ಎರಡೂ ಪಕ್ಷಗಳ ಅಧಿಕಾರವಧಿಯನ್ನು ಕಂಡಂತಾಗಿದೆ. ಹಾನಗಲ್ ಎಂದರೆ ಸಿಎಂ ಉದಾಸಿ ಎನ್ನುವ ಮಟ್ಟಿಗೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ಆಪ್ತ ಹಿರಿಯ ರಾಜಕಾರಣಿಯಾಗಿದ್ದ ಸಿಎಂ ಉದಾಸಿ ಅವರು ಕ್ಷೇತ್ರದಲ್ಲಿ ಜನಪ್ರಿಯತೆ ಪಡೆದಿದ್ದರು. ಇವರು 1985ರಿಂದ ಹಾನಗಲ್ ಕ್ಷೇತ್ರದಲ್ಲಿ ರಾಜಕೀಯ ಮಾಡುತ್ತಿದ್ದು, 2021ರಲ್ಲಿ ಅಧಿಕಾರದಲ್ಲಿರುವಾಗಲೇ ನಿಧನರಾದರು.
ಸಿಎಂ ಉದಾಸಿ ನಿಧನದ ನಂತರ ಹಾನಗಲ್ ಕ್ಷೇತ್ರದ ಶಾಸಕ ಸ್ಥಾನ ತೆರವಾಗಿತ್ತು. ಹೀಗಾಗಿ 2021ರ ಅಕ್ಟೋಬರ್‌ನಲ್ಲಿ ಹಾನಗಲ್‌ನಲ್ಲಿ ಉಪ ಚುನಾವಣೆ ನಡೆಯಿತು. ಈ ಚುನಾವಣೆಯಲ್ಲಿ ಕಾಂಗ್ರೆಸ್‌ನ ಶ್ರೀನಿವಾಸ ಮಾನೆ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಿ ವಿಧಾನಸಭೆ ಪ್ರವೇಶಿಸಿದರು.
ಶ್ರೀನಿವಾಸ ಮಾನೆ 2010 ರಿಂದ 2021 ರವರೆಗೆ ಕರ್ನಾಟಕ ವಿಧಾನ ಪರಿಷತ್ತಿನಲ್ಲಿ ಧಾರವಾಡ ಸ್ಥಳೀಯ ಪ್ರಾಧಿಕಾರಗಳ ಕ್ಷೇತ್ರವನ್ನು ಪ್ರತಿನಿಧಿಸುವ ವಿಧಾನ ಪರಿಷತ್ ಸದಸ್ಯ ಮತ್ತು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರಾಗಿದ್ದರು. ಎರಡು ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದರು.
ಶ್ರೀನಿವಾಸ ಮಾನೆ ಅವರು ಕಾಂಗ್ರೆಸ್‌ನ ಪ್ರಮುಖ ಮುಖಂಡರಾಗಿದ್ದು, ಎಐಸಿಸಿ ಮತ್ತು ಕೆಪಿಸಿಸಿಯ ವಿವಿಧ ಹುದ್ದೆಗಳಲ್ಲಿ ಕೆಲಸ ಮಾಡಿ ಜನಪ್ರಿಯತೆಗಳಿಸಿದ್ದರು. 2018ರ ವಿಧಾನಸಭಾ ಚುನಾವಣೆಯಲ್ಲಿ ಹಾನಗಲ್ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅವರು, ಬಿಜೆಪಿ ಅಭ್ಯರ್ಥಿ ಸಿ.ಎಂ.ಉದಾಸಿ ವಿರುದ್ಧ ಕೆಲವೇ ಕೆಲವೇ ಅಂತರದಲ್ಲಿ ಸೋತಿದ್ದರು.
ಸಿಎಂ ಉದಾಸಿ ನಿಧನದ ತೆರವಾಗಿದ್ದ ಹಾನಗಲ್ ಕ್ಷೇತ್ರದ ಉಪ ಚುನಾವಣೆಯಲ್ಲಿ ಗೆದ್ದು ಶ್ರೀನಿವಾಸ ಮಾನೆ ಕ್ಷೇತ್ರದ ಶಾಸಕರಾಗಿದ್ದಾರೆ. ಸದ್ಯ ಶಾಸಕರಾಗಿ ಕ್ಷೇತ್ರದಲ್ಲಿ ತಳ ಮಟ್ಟದಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿರುವ ಹಾಲಿ ಶಾಸಕರಾಗಿರುವ ಶ್ರೀನಿವಾಸ ಮಾನೆ ಈ ಬಾರಿಯೂ ಕಾಂಗ್ರೆಸ್‌ನಿಂದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.
ಇನ್ನು ಕಾಂಗ್ರೆಸ್‌ನಿಂದ ಮಾಜಿ ಸಚಿವ ಮನೋಹರ್ ತಹಶೀಲ್ದಾರ್ ಕೂಡ ಈ ಬಾರಿ ಕಾಂಗ್ರೆಸ್‌ನಿಂದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಇನ್ನು ಕಾಂಗ್ರೆಸ್ ತೆಕ್ಕೆಯಲ್ಲಿರುವ ಹಾನಗಲ್ ಕ್ಷೇತ್ರದಲ್ಲಿ ಮತ್ತೆ ಅಧಿಕಾರಕ್ಕೆ ಬರಲು ಬಿಜೆಪಿ ಹವಣಿಸುತ್ತಿದೆ. ಹೀಗಾಗಿ ಈ ಬಾರಿ ಬಿಜೆಪಿಯಲ್ಲಿ ಮಾಜಿ ಶಾಸಕ ಶಿವರಾಜ್ ಸಜ್ಜನರ್, ಹಾವೇರಿ ಬಿಜೆಪಿ ಜಿಲ್ಲಾಧ್ಯಕ್ಷ ಕಲ್ಯಾಣ್ ಕುಮಾರ್ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ. ಬಿಜೆಪಿ ಹಾಗೂ ಕಾಂಗ್ರೆಸ್ ಜಿದ್ದಾಜಿದ್ದಿಯ ಪೈಟ್ ನಡುವೆ ಜೆಡಿಎಸ್ ಕೂಡ ಪ್ರಚಾರ ಆರಂಭಿಸಿದ್ದು, ಸಮರ್ಥ ಅಭ್ಯರ್ಥಿಗಾಗಿ ಹುಡುಕಾಟ ನಡೆಸುತ್ತಿದೆ.
ಹಾನಗಲ್ ಕ್ಷೇತ್ರದ ಮತದಾರರ ವಿವರ
ಹಾನಗಲ್ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2,07,411 ಮತದಾರರಿದ್ದು, ಇಲ್ಲಿ ಲಿಂಗಾಯತ ಸಮುದಾಯದ ಮತವೇ ನಿರ್ಣಾಯಕವಾಗಿದೆ.ಹಾನಗಲ್ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 73,000 ಲಿಂಗಾಯತರು ಮತದಾರರಿದ್ದು, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದಿಂದ 38,000 ಮಂದಿ ಮತದಾರರಿದ್ದಾರೆ.
ಇನ್ನು ಹಾನಗಲ್ ಕ್ಷೇತ್ರದಲ್ಲಿ 35,000 ಮತಗಳಿದ್ದು, 10,600 ಮರಾಠ ಮತಗಳಿವೆ. ಗಂಗಾಮತಸ್ಥ 25,000 ಮತದಾರರಿದ್ದು, ಒಟ್ಟು 15,000 ಇತರ ಸಮುದಾಯದ ಮತಗಳಿವೆ ಎನ್ನುವ ಮಾಹಿತಿ ಲಭ್ಯವಿದೆ.
-
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್: ಕಾಂಗ್ರೆಸ್ ಉಗ್ರರಿಗೆ 'ಗ್ಯಾರಂಟಿ ಭಾಗ್ಯ' ನೀಡಿದರೂ ಅಚ್ಚರಿಯಿಲ್ಲ; ವಿಜಯೇಂದ್ರ -
Vijay Thalapathi: ಟಿವಿಕೆ ಸಂಸ್ಥಾಪಕ, ನಟ ವಿಜಯ್ ದಳಪತಿ ವಿರುದ್ಧ ಪ್ರಕರಣ ದಾಖಲು -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್‌ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
Thalapathy Vijay Assets: ನಾಮಪತ್ರ ಸಲ್ಲಿಸಿದ ವಿಜಯ್, ಇವರ ಒಟ್ಟು ಆಸ್ತಿ ಎಷ್ಟು? ಇಲ್ಲಿದೆ ಮಾಹಿತಿ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ತಮಿಳುನಾಡು ಚುನಾವಣೆ 2026: ಟಿವಿಎಕೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಎರಡು ಕ್ಷೇತ್ರಗಳಿಂದ ನಟ ದಳಪತಿ ವಿಜಯ್ ಸ್ಪರ್ಧೆ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ












Click it and Unblock the Notifications