ಹಾವೇರಿ ; ಉಪ ಚುನಾವಣೆಗೆ ಒಟ್ಟು 28 ನಾಮಪತ್ರಗಳು

ಹಾವೇರಿ, ನವೆಂಬರ್ 18 : ಹಾವೇರಿ ಜಿಲ್ಲೆಯ ಹಿರೇಕೆರೂರು, ರಾಣೆಬೆನ್ನೂರು ಕ್ಷೇತ್ರದ ಉಪ ಚುನಾವಣೆಗೆ ನಾಮಪತ್ರ ಸಲ್ಲಿಕೆ ಅಂತ್ಯಗೊಂಡಿದೆ. ಡಿಸೆಂಬರ್ 5ರಂದು ಚುನಾವಣೆ ನಡೆಯಲಿದ್ದು, 9ರಂದು ಫಲಿತಾಂಶ ಪ್ರಕಟವಾಗಲಿದೆ.

ಹಿರೇಕೆರೂರು ವಿಧಾನಸಭಾ ಕ್ಷೇತ್ರದಲ್ಲಿ 14 ಅಭ್ಯರ್ಥಿಗಳಿಂದ 18 ನಾಮಪತ್ರ ಸಲ್ಲಿಕೆಯಾಗಿವೆ.
ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರದಿಂದ 14 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಪರಿಶೀಲನೆ ಕಾರ್ಯ ನವಂಬರ್ 19ರ ಮಂಗಳವಾರ ನಡೆಯಲಿದೆ. ನಾಮಪತ್ರ ವಾಪಸ್ ಪಡೆಯಲು ನವಂಬರ್ 21 ಕೊನೆ ದಿನವಾಗಿದೆ.

ಈಗಾಗಲೇ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಚುನಾವಣಾ ಅಕ್ರಮ ತಡೆಯಲು ಚೆಕ್ ಪೋಸ್ಟ್ ನಿರ್ಮಾಣ ಮಾಡಲಾಗಿದೆ. ಹಿರೇಕೊರೂರು ವಿಧಾನ ಸಭಾಕ್ಷೇತ್ರದ ಕೇಂದ್ರ ಸಾಮಾನ್ಯ ವೀಕ್ಷಕರಾದ ಹಿರಿಯ ಐಎಎಸ್ ಅಧಿಕಾರಿ ಚಕ್ರವತಿ೯ ಸೋಮವಾರ ಬ್ಯಾಡಗಿ ಚೆಕ್ ಪೋಸ್ಟ್‌ಗೆ ಭೇಟಿ ಮಾಡಿ ಪರಿಶೀಲನೆ ನಡೆಸಿದರು.

Haveri District 2 Seat By Elections : Candidates List

ಕಣದಲ್ಲಿರುವ ಪ್ರಮುಖ ಅಭ್ಯರ್ಥಿಗಳು

* ಹಿರೇಕೆರೂರು : ಬಿ. ಸಿ. ಪಾಟೀಲ್ (ಬಿಜೆಪಿ), ಬಿ. ಎಚ್. ಬನ್ನಿಕೋಡ್ (ಕಾಂಗ್ರೆಸ್), ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ (ಜೆಡಿಎಸ್)

* ರಾಣೆಬೆನ್ನೂರು : ಅರುಣ್ ಕುಮಾರ್ ಪೂಜಾರಿ (ಬಿಜೆಪಿ), ಕೆ. ಬಿ. ಕೋಳಿವಾಡ (ಕಾಂಗ್ರೆಸ್), ಮಲ್ಲಿಕಾರ್ಜುನ ಹಲಗೇರಿ (ಜೆಡಿಎಸ್).

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+