ಕರ್ನಾಟಕ ಬಯಲಾಟ ಅಕಾಡೆಮಿ ಅಧ್ಯಕ್ಷ, ಕಲಾವಿದ ಡಾ.ಟಿ.ಬಿ.‌ಸೊಲಬಕ್ಕನವರ ನಿಧನ

ಹಾವೇರಿ, ನವೆಂಬರ್ 19: ಕರ್ನಾಟಕ ಬಯಲಾಟ ಅಕಾಡೆಮಿ ಅಧ್ಯಕ್ಷರು ಹಾಗೂ ಶಿಗ್ಗಾಂವಿಯ ಗೊಟಗೋಡಿಯ ಉತ್ಸವ ರಾಕ್ ಗಾರ್ಡನ್ ರೂವಾರಿ, ಹಿರಿಯ ರಂಗಕರ್ಮಿ ಡಾ.ಟಿ.ಬಿ. ಸೊಲಬಕ್ಕನವರ (73) ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಬುಧವಾರ ಮಧ್ಯರಾತ್ರಿ 2.45ರ ಸುಮಾರಿಗೆ ನಿಧನರಾಗಿರುವುದಾಗಿ ತಿಳಿದುಬಂದಿದೆ. ಕಳೆದ ಕೆಲವು ದಿನಗಳಿಂದ ಸೊಲಬಕ್ಕನವರ ಅವರು ಅನಾರೋಗ್ಯಕ್ಕೆ ತುತ್ತಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು.

ಅಂತರರಾಷ್ಟ್ರೀಯ ಕಲಾವಿದರಾಗಿ ಖ್ಯಾತರಾಗಿದ್ದ ಸೊಲಬಕ್ಕನವರ ಅವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳು ಸಂದಿವೆ. ಬೆಂಗಳೂರಿನ ಜಕ್ಕೂರಿನಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆ ವತಿಯಿಂದ ನಿರ್ಮಿಸಲಾಗಿರುವ ಮಾದರಿ ಗ್ರಾಮದ ಪರಿಕಲ್ಪನೆಯನ್ನು ಸಾಕಾರಗೊಳಿಸಿದ್ದರು. ಈಚೆಗೆ ಮುಖ್ಯಮಂತ್ರಿಗಳು ಮಾದರಿ ಗ್ರಾಮವನ್ನು ಉದ್ಘಾಟಿಸಿ ಕಲಾವಿದ ಸೊಲಬಕ್ಕನವರ ಕಲೆ ಮತ್ತು ಕಾರ್ಯವನ್ನು ಶ್ಲಾಘಿಸಿದ್ದರು.

Karnataka Bayalata Academy President And Artist Dr TB Solabakkanavara Passes Away

ಸೊಲಬಕ್ಕನವರ ಅವರು ಪತ್ನಿ ಸಾವಿತ್ರಮ್ಮ, ಮಗ ರಾಜಹರ್ಷ, ಮಗಳು ವೇದಾರಾಣಿ ಹಾಗೂ ಅಳಿಯ ಉದ್ಯಮಿ ಪ್ರಕಾಶ ದಾಸನೂರ ಅವರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯು ಗುರುವಾರ ಮಧ್ಯಾಹ್ನ 12 ಗಂಟೆಗೆ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ದುಂಡಸಿ ಗ್ರಾಮದ ಸಮೀಪದ ಜಮೀನಿನಲ್ಲಿ ನೆರವೇರಲಿದೆ.

ಸಚಿವ ರಮೇಶ್ ಜಾರಕಿಹೊಳಿ ಸಂತಾಪ: ಸೊಲಬಕ್ಕನವರ ಅವರ ನಿಧನಕ್ಕೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. "ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿದ್ದ ಸೊಲಬಕ್ಕನವರ್ ಅಂತರರಾಷ್ಟ್ರೀಯ ಮಟ್ಟದ ಕಲಾವಿದರಾಗಿದ್ದರು. ದೇಶೀ ಕಲೆಯ ಪ್ರಚಾರಕರಾಗಿದ್ದರು, ಇವರ ಕಲಾಪ್ರತಿಭೆಯನ್ನು ಗಮನಿಸಿ ಬಯಲಾಟ ಅಕಾಡೆಮಿಗೆ ಅಧ್ಯಕ್ಷರನ್ನಾಗಿ ಮಾಡಲಾಗಿತ್ತು" ಎಂದು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Recommended Video

      Chinaಗೆ ತಕ್ಕ ಪಾಠ ಕಲಿಸಲು ಮುಂದಾದ Ratan Tata | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+