ಲೋಕಸಭಾ ಚುನಾವಣೆ : ಹಾವೇರಿಯಲ್ಲಿ ಹ್ಯಾಟ್ರಿಕ್ ಬಾರಿಸಿದ ಉದಾಸಿ

ಹಾವೇರಿ, ಮೇ 23 : ಹಾವೇರಿ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿಯ ಶಿವಕುಮಾರ ಉದಾಸಿ ಅವರು ಗೆಲುವು ಸಾಧಿಸಿದರು. ಸತತವಾಗಿ ಮೂರು ಬಾರಿ ಗೆಲುವು ಸಾಧಿಸುವ ಮೂಲಕ ಹ್ಯಾಟ್ರಿಕ್ ಬಾರಿಸಿದರು.

ಹಾವೇರಿ-ಗದಗ ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಸಂಸದ ಶಿವಕುಮಾರ್ ಉದಾಸಿ ಅವರು ಬಿಜೆಪಿ ಅಭ್ಯರ್ಥಿಯಾಗಿದ್ದರು. ಕಾಂಗ್ರೆಸ್‌-ಜೆಡಿಎಸ್‌ನಿಂದ ಡಿ.ಆರ್.ಪಾಟೀಲ್ ಅವರು ಕಣದಲ್ಲಿದ್ದರು.

Haveri Lok Sabha Election Result 2019

ಶಿವಕುಮಾರ್ ಉದಾಸಿ ಅವರು 6,83,660 ಮತಗಳನ್ನು ಪಡೆದು ಜಯಗಳಿಸಿದರು. ಡಿ.ಆರ್.ಪಾಟೀಲ ಅವರು 5,42,778 ಮತಗಳನ್ನು ಪಡೆದು ಸೋಲು ಅನುಭವಿಸಿದರು. ಗೆಲುವಿನ ಅಂತರ 1,40,882 ಮತಗಳು.

2009ರಲ್ಲಿ ಮೊದಲ ಬಾರಿಗೆ ಹಾವೇರಿ-ಗದಗ ಲೋಕಸಭಾ ಕ್ಷೇತ್ರವನ್ನು ರಚನೆ ಮಾಡಲಾಯಿತು. ಮೊದಲ ಚುನಾವಣೆಯಲ್ಲಿ ಬಿಜೆಪಿಯ ಶಿವಕುಮಾರ್ ಉದಾಸಿ ಅವರು 430293 ಮತಗಳನ್ನು ಪಡೆದು ಗೆಲುವು ಸಾಧಿಸಿದರು.

2014ರ ಚುನಾವಣೆಯಲ್ಲಿ ಬಿಜೆಪಿಯಿಂದ ಶಿವಕುಮಾರ್ ಉದಾಸಿ ಅವರಿಗೆ ಟಿಕೆಟ್ ನೀಡಲಾಯಿತು. 7,51,673 ಮತಗಳನ್ನು ಪಡೆದು ಅವರು 2ನೇ ಬಾರಿಗೆ ಸಂಸತ್ ಪ್ರವೇಶಿಸಿದರು.

2018ರ ಚುನಾವಣೆಯಲ್ಲಿಯೂ ಶಿವಕುಮಾರ್ ಉದಾಸಿ ಅವರಿಗೆ ಟಿಕೆಟ್ ನೀಡಲಾಯಿತು. 6,83,660 ಮತಗಳನ್ನು ಪಡೆಯುವ ಮೂಲಕ ಅವರು ಹ್ಯಾಟ್ರಿಕ್ ಜಯ ದಾಖಲು ಮಾಡಿದರು. ಕೇಂದ್ರದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದ್ದು, ಶಿವಕುಮಾರ್ ಉದಾಸಿ ಸಚಿವರಾಗಲಿದ್ದಾರೆಯೇ? ಕಾದು ನೋಡಬೇಕು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+