ಹಾವೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಿಡಿ ಸಂತ್ರಸ್ತೆಯ ಮೌನ, ಷಡ್ಯಂತ್ರದ ಅನುಮಾನಕ್ಕೆ ಕಾರಣ: ಬೊಮ್ಮಾಯಿ

|
Google Oneindia Kannada News

ಹಾವೇರಿ, ಮಾರ್ಚ್ 06: ಸಂತ್ರಸ್ತೆ ಇನ್ನೂ ದೂರು ನೀಡದಿರುವುದರಿಂದ ರಮೇಶ್ ಜಾರಕಿಹೊಳಿ ವಿರುದ್ಧದ ವಿಡಿಯೋ ಸುತ್ತ ಸಾಕಷ್ಟು ಅನುಮಾನ ಮೂಡುತ್ತಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಹಾವೇರಿಯಲ್ಲಿ ಮಾತನಾಡಿದ ಅವರು, ರಮೇಶ ಜಾರಕಿಹೊಳಿ ಪ್ರಕರಣ ಆದ ಬಳಿಕ ಬಹಳ‌ಷ್ಟು ಊಹಾಪೋಹಗಳು, ಸಂಶಯಾಸ್ಪದ ಷಡ್ಯಂತ್ರಗಳು, ಪೂರ್ವಭಾವಿ ಹನಿಟ್ರ್ಯಾಪ್ ಸೇರಿದಂತೆ ಬಹಳಷ್ಟು ವಿಚಾರಗಳು ಬೆಳಕಿಗೆ ಬಂದಿವೆ.

ದಿಢೀರ್ ಕೋರ್ಟ್ ಮೆಟ್ಟಿಲೇರಿದ್ದಕ್ಕೆ ಕಾರಣ ನೀಡಿದ ಸಚಿವ ಕೆ. ಸುಧಾಕರ್ದಿಢೀರ್ ಕೋರ್ಟ್ ಮೆಟ್ಟಿಲೇರಿದ್ದಕ್ಕೆ ಕಾರಣ ನೀಡಿದ ಸಚಿವ ಕೆ. ಸುಧಾಕರ್

ಹೀಗಾಗಿ ಕೆಲವು ಸಚಿವರು, ಶಾಸಕರಾಗಲಿ ಅವರ ತೇಜೋವಧೆ ಆಗುವ ಸಾಧ್ಯತೆಗಳು ಹೆಚ್ಚಿವೆ. ತೇಜೋವಧೆ, ವೈಯಕ್ತಿಕ ಜೀವನದಲ್ಲಿ ಹಸ್ತಕ್ಷೇಪ ಮಾಡುವಂಥದ್ದು ಮತ್ತು ರಾಜಕೀಯವಾಗಿ ಅಸ್ಥಿರತೆಯನ್ನು ರಾಜ್ಯದಲ್ಲಿ ಮಾಡಬೇಕು ಎನ್ನುವ ಹಿನ್ನೆಲೆ ಕಂಡು ಕೆಲವರು ನ್ಯಾಯಾಂಗದ ರಕ್ಷಣೆ ಕೋರಿದ್ದಾರೆ.

Home Minister Statement Over Ramesh Jarkiholi CD Row

ಅಲ್ಲದೆ ರಮೇಶ್ ಜಾರಕಿಹೊಳಿ ಮೇಲೆ ದೂರು ಬಂದಿದೆ. ಅದರ ಆಧಾರದ‌ ಮೇಲೆ ತನಿಖೆ ನಡೆಯುತ್ತಿದೆ, ಆ ಮಹಿಳೆ ಬಂದು ಹೇಳಿಕೆ ಕೊಡಬೇಕಾಗಿತ್ತು ಇದುವರೆಗೆ ಕೊಟ್ಟಿಲ್ಲ. ಇಂಥಾ ಪ್ರಕರಣಗಳಲ್ಲಿ ಮುಂದೆ ಬಂದು ದೂರು ಕೊಡದಿರುವುದು, ಹೇಳಿಕೆ ಕೊಡದಿರುವುದು ಸಂಶಯಗಳಿಗೆ ಕಾರಣವಾಗಿದೆ.

ಈ ವಿಷಯದಲ್ಲಿ ಸಾಕಷ್ಟು ಮಂದಿ ಹಲವಾರು ಹೇಳಿಕೆ ಕೊಟ್ಟಿದ್ದಾರೆ. ಕೆಲವರು ಹತ್ತೊಂಬತ್ತು ಜನ ಇದ್ದಾರೆ ಅಂತಿದ್ದಾರೆ. ಕೆಲವರು ಡೀಲ್ ಆಗಿದೆ ಅಂತಿದ್ದಾರೆ. ಎಲ್ಲ ವಿಚಾರಗಳನ್ನು ಗಮನಿಸಿದ್ದೇವೆ.

ಎಲ್ಲೆಲ್ಲಿ ತನಿಖೆ ಮಾಡಬೇಕೋ ಅಲ್ಲಿ ಎಲ್ಲ ತನಿಖೆ ಮಾಡುತ್ತೇವೆ, ದಿನೇಶ ಕಲ್ಲಹಳ್ಳಿ ಬಿಜೆಪಿ ಜೊತೆ ಗುರ್ತಿಸಿಕೊಂಡಿರೋ ವಿಚಾರದ ಕುರಿತು ಮಾತನಾಡಿ, ಎಲ್ಲರು ಯಾವ್ಯಾವ ಪಕ್ಷದಲ್ಲಿ ಇದ್ದಾರೆ ಯಾರಿಗೆ ಗೊತ್ತು, ಏನು ದೂರು ಕೊಟ್ಟಿದ್ದಾರೆ.

ಅದರ ಬಗ್ಗೆ ಎರಡು ಬಾರಿ ಕರೆದಿದ್ದೇವೆ, ಎರಡು ಬಾರಿ ಕರೆದಾಗಲೂ ಅವರು ಏನು ಹೇಳಿಕೆ ಕೊಟ್ಟಿದ್ದಾರೆ ಮಾಧ್ಯಮಗಳ ಮುಂದೆಯೇ ಇದೆ. ಅದರ ಆಧಾರದ ಮೇಲೆ ತನಿಖೆ ಮಾಡುತ್ತೇವೆ ಎಂದು ಹೇಳಿದರು.

English summary
Home Minister Basavaraj Bommai appraise that victim not yet submitted the complaint, it leads towards suspicious.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X