ಹಾವೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಮೇಶ್ ಕುಮಾರ್‌ರನ್ನು ಜೈಲಿಗೆ ಕಳುಹಿಸುತ್ತೇನೆಂದು ಹೇಳಿಲ್ಲ: ಡಾ.ಕೆ.ಸುಧಾಕರ್ ಸ್ಪಷ್ಟನೆ

|
Google Oneindia Kannada News

ಹಾನಗಲ್, ಅಕ್ಟೋಬರ್ 21: ರಾಜ್ಯದಲ್ಲಿ ಹಾನಗಲ್ ಮತ್ತು ಸಿಂದಗಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಗೆಲ್ಲಲು ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಸಾಕಷ್ಟು ಪ್ರಯತ್ನ ನಡೆಸುತ್ತಿವೆ. ಈ ಮಧ್ಯೆ ಪರಸ್ಪರ ವಾಕ್ಸಮರವೂ ಜೋರಾಗಿದೆ. ಕಳೆದ ಕೆಲ ದಿನಗಳಿಂದ ಆರೋಗ್ಯ ಸಚಿವ ಕೆ. ಸುಧಾಕರ್ ಹಾಗೂ ವಿರೋಧ ಪಕ್ಷದ ನಾಯಕರ ನಡುವೆ ಮಾತಿನ ಸಮರ ಜೋರಾಗಿದೆ. ಅದ್ರಲ್ಲೂ ಡಾ. ಸುಧಾಕರ್ ಅವರು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಜೈಲಿಗೆ ಕಳುಹಿಸುತ್ತೇನೆ ಎಂದಿದ್ದಾರೆನ್ನುವ ಆರೋಪ ಕೇಳಿ ಬಂದಿದೆ. ಇದರ ಬೆನ್ನಲ್ಲೆ ಡಾ. ಸುಧಾಕರ್ ತಮ್ಮ ಹೇಳಿಕೆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಇಂದು ಮಾದ್ಯಮದವರೊಂದಿಗೆ ಮಾತನಾಡಿದ ಸಚಿವರು, 'ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಜೈಲಿಗೆ ಕಳುಹಿಸುತ್ತೇನೆ ಎಂದು ನಾನು ಎಲ್ಲೂ ಹೇಳಿಲ್ಲ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಾನು ಏನು ಹೇಳಿದ್ದೇನೆ ಎಂದು ಅರ್ಥ ಮಾಡಿಕೊಳ್ಳಬೇಕಿತ್ತು' ಎಂದು ಹೇಳಿದ್ದಾರೆ.

ತನಿಖೆಯಾದರೆ ರಮೇಶ್ ಕುಮಾರ್ ಜೈಲಿಗೆ; ಡಾ. ಕೆ. ಸುಧಾಕರ್ತನಿಖೆಯಾದರೆ ರಮೇಶ್ ಕುಮಾರ್ ಜೈಲಿಗೆ; ಡಾ. ಕೆ. ಸುಧಾಕರ್

ಬುಧವಾರ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್ ನಡಿ ಸಾಲ ವಿತರಣೆಗೆ ಚಾಲನೆ ನೀಡಿದ ಬಳಿಕ ಅವರು ಮಾತನಾಡಿ, "ಜಿಲ್ಲಾ ಸಹಕಾರಿ ಬ್ಯಾಂಕಿನಲ್ಲಿ ಶಾಸಕ ರಮೇಶ್ ಕುಮಾರ್ ರಿಂಗ್ ಮಾಸ್ಟರ್ ಆಗಿದ್ದಾರೆ. ಶ್ರೀನಿವಾಸಗೌಡರು ರಮೇಶ್ ಕುಮಾರ್ ಅವರಿಂದ ಮಕ್ಮಲ್ ಟೋಪಿ ಹಾಕಿಸಿಕೊಳ್ಳುತ್ತಿದ್ದಾರೆ. ಸಹಕಾರ ಕ್ಷೇತ್ರದಲ್ಲೂ ರಾಜಕೀಯ ಬೆರೆಸಲಾಗುತ್ತಿದೆ. ಇದರಲ್ಲಿ ಪಾರದರ್ಶಕ ತನಿಖೆಯಾಗಬೇಕಿದ್ದು, ತನಿಖೆಗೆ ಒಪ್ಪದೆ ತಡೆಯಾಜ್ಞೆ ತಂದಿದ್ದಾರೆ" ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ, ಚಿಕ್ಕಬಳ್ಳಾಪುರ ಉಸ್ತುವಾರಿ ಸಚಿವ ಡಾ. ಕೆ. ಸುಧಾಕರ್ ಹೇಳಿದರು. "ಶಾಸಕರಾದ ಶಿವಶಂಕರ ರೆಡ್ಡಿ, ರಮೇಶ್ ಕುಮಾರ್ ಅವರಂತಹ ನೂರು ಜನ ಅಡ್ಡ ಬಂದರೂ ಕೋಮುಲ್ ವಿಭಜಿಸುವುದಂತೂ ಖಚಿತ" ಎಂದು ಸಚಿವರು ಘೋಷಣೆ ಮಾಡಿದರು.

 I did not say I would send Ramesh Kumar to jail,: Dr K Sudhakar

'ಪ್ರತಿ ಬಾರಿ ಕೋಲಾರದಲ್ಲಿರುವ ಡಿಸಿಸಿ ಬ್ಯಾಂಕ್, ಹಾಲು ಒಕ್ಕೂಟಕ್ಕೆ ಚಿಕ್ಕಬಳ್ಳಾಪುರದ ರೈತರು ಹೋಗಬೇಕೆಂದರೆ ಸಾಧ್ಯವಿಲ್ಲ. ಇದರಲ್ಲಿ ಶಿವಶಂಕರರೆಡ್ಡಿ ಅವರು ರಾಜಕೀಯ ಮಾಡಬಾರದು. ಜಿಲ್ಲಾ ಸಹಕಾರಿ ಬ್ಯಾಂಕಿನಲ್ಲಿ ಶಾಸಕ ರಮೇಶ್ ಕುಮಾರ್ ರಿಂಗ್ ಮಾಸ್ಟರ್ ಆಗಿದ್ದಾರೆ. ಅವರ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ವಿಭಜನೆಗೆ ಬಿಡುತ್ತಿಲ್ಲ" ಎಂದು ಸುಧಾಕರ್ ಆರೋಪಿಸಿದರು. ಮಾಜಿ ಸ್ಪೀಕರ್ ರಮೇಶ್ ಕುಮಾರ್ ಮತ್ತು ಆರೋಗ್ಯ ಸಚಿವ ಸುಧಾಕರ್ ನಡುವೆ ಶೀತಲ ಸಮರ "ಸಹಕಾರ ಕ್ಷೇತ್ರದಲ್ಲೂ ರಾಜಕೀಯ ಬೆರೆಸಲಾಗುತ್ತಿದೆ. ಇದರಲ್ಲಿ ಪಾರದರ್ಶಕ ತನಿಖೆಯಾಗಬೇಕಿದ್ದು, ತನಿಖೆಗೆ ಒಪ್ಪದೆ ತಡೆಯಾಜ್ಞೆ ತಂದಿದ್ದಾರೆ. ಇದರಲ್ಲೇ ಕಳ್ಳರು ಯಾರು ಎಂದು ಗೊತ್ತಾಗುತ್ತದೆ. ಸಾಚ ಆಗಿದ್ದರೆ ತನಿಖೆ ಆಗಿ ಸತ್ಯ ಎಂದು ಹೇಳುತ್ತಿದ್ದರು. ಸತ್ಯ ಹೊರಗೆ ಬಂದರೆ ಜೈಲಿಗೆ ಹೋಗುತ್ತೀರಿ ಎಂದು ಗೊತ್ತಿದೆ" ಎಂದು ಸುಧಾಕರ್ ವಾಗ್ದಾಳಿ ನಡೆಸಿದರು.

ಡಿಸಿಸಿ ಬ್ಯಾಂಕ್ ರಮೇಶ್ ಕುಮಾರ್ ಅವರದ್ದಲ್ಲ; ಸುಧಾಕರ್ಡಿಸಿಸಿ ಬ್ಯಾಂಕ್ ರಮೇಶ್ ಕುಮಾರ್ ಅವರದ್ದಲ್ಲ; ಸುಧಾಕರ್

ಈ ಹೇಳಿಕೆಯನ್ನು ಗುರಿಯಾಗಿಸಿಕೊಂಡು ವಿಪಕ್ಷ ನಾಯಕ ಇಂದು ಸಚಿವ ಡಾ. ಕೆ ಸುಧಾಕರ್ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಸುಧಾಕರ್​ಗೆ ಅಧಿಕಾರದ ಮದ. ಹಾಗಾಗಿ ದುರಹಂಕಾರದಲ್ಲಿ ಮಾತನಾಡುತ್ತಿದ್ದಾರೆ ಅಂತ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಅಧಿಕಾರವನ್ನು ಸುಧಾಕರ್ ಶಾಶ್ವತ ಅಂದುಕೊಂಡಿದ್ದಾರೆ. 2023ಕ್ಕೆ ಅವರೆಲ್ಲರೂ ಮನೆಗೆ ಹೋಗುತ್ತಾರೆ. ಆಗ ಯಾರು ಜೈಲಿಗೆ ಹೋಗುತ್ತಾರೆಂದು ಗೊತ್ತಾಗುತ್ತದೆ ಅಂತ ರಮೇಶ್ ಕುಮಾರ್‌ರನ್ನು ಜೈಲಿಗೆ ಕಳಿಸುತ್ತೇನೆಂಬ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

 I did not say I would send Ramesh Kumar to jail,: Dr K Sudhakar

ಈ ಮಾತಿಗೆ ಪ್ರತಿಕ್ರಿಯಿಸಿದ ಸುಧಾಕರ್ ವಾಗ್ದಾಳಿ ಮಾಡಿದ್ದಾರೆ. ನಾನು 'ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಜೈಲಿಗೆ ಕಳುಹಿಸುತ್ತೇನೆ ಎಂದು ನಾನು ಎಲ್ಲೂ ಹೇಳಿಲ್ಲ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಾನು ಏನು ಹೇಳಿದ್ದೇನೆ ಎಂದು ಅರ್ಥ ಮಾಡಿಕೊಳ್ಳಬೇಕಿತ್ತು' ಎಂದು ಹೇಳಿದ್ದಾರೆ.

ಸಹಕಾರ ಕ್ಷೇತ್ರದಲ್ಲಿ 'ಸರ್ವರಿಗೂ ಸಮಬಾಳು' ಎಂಬ ಪರಿಕಲ್ಪನೆಯಿದೆ. ಆದರೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕೋಮುಲ್ ಹಾಗೂ ಡಿಸಿಸಿ ಬ್ಯಾಂಕ್ ಅನ್ನು ಕಪಿಮುಷ್ಠಿಯಲ್ಲಿ ಇಟ್ಟುಕೊಂಡು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಡಿಸಿಸಿ ಬ್ಯಾಂಕ್ ನಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಕಾಂಗ್ರೆಸ್ ನಾಯಕರೇ ಆದ ಕೆ.ಎಚ್.ಮುನಿಯಪ್ಪ ಹೇಳಿದ್ದರು. ಆಗಿನ ಸಿಎಂ ಸಿದ್ದರಾಮಯ್ಯನವರಿಗೆ ಅವರೇ ಈ ಬಗ್ಗೆ ಪತ್ರ ನೀಡಿದ್ದರು. ಆಗ ಮುಖ್ಯಮಂತ್ರಿಗಳಾಗಿದ್ದವರು ತನಿಖೆಗೆ ಆದೇಶ ನೀಡಬಹುದಿತ್ತು ಎಂದರು.

 I did not say I would send Ramesh Kumar to jail,: Dr K Sudhakar

ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈಗ ತನಿಖೆಗೆ ಆದೇಶಿಸಿದ್ದಾರೆ. ಆದ್ದರಿಂದ ತಪ್ಪಿತಸ್ಥರು ಶಿಕ್ಷೆ ಅನುಭವಿಸುತ್ತಾರೆ ಎಂದು ಹೇಳಿದ್ದೇನೆ. ಆದರೆ ರಮೇಶ್ ಕುಮಾರ್ ಅವರನ್ನು ಜೈಲಿಗೆ ಕಳುಹಿಸುತ್ತೇನೆ ಎಂದು ಎಲ್ಲೂ ಹೇಳಿಲ್ಲ. ಆದರೆ ಅವರೇ ರಿಂಗ್ ಮಾಸ್ಟರ್ ಆಗಿದ್ದು, ರಾಜಕೀಯ ಲಾಭಕ್ಕಾಗಿ ಎರಡೂ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಹೇಳಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಹಾನಗಲ್‌ನ ಜನರು ಪ್ರತಿ ನಾಯಕರ ಮಾತು ಗಮನಿಸುತ್ತಿದ್ದಾರೆ. ವೈಯಕ್ತಿಕ ನಿಂದನೆ, ಏಕವಚನ ಪ್ರಯೋಗವನ್ನು ನೋಡುತ್ತಿದ್ದಾರೆ. ಪ್ರಧಾನಿಗಳನ್ನು ಕೂಡ ಏಕವಚನದಲ್ಲಿ ಕರೆಯಲಾಗುತ್ತಿದೆ. ಗ್ರಾಮೀಣ ಜನರು ಸ್ವಾಭಿಮಾನಿಗಳಾಗಿದ್ದು, ಅವರು ಬಿಜೆಪಿ ಅಭ್ಯರ್ಥಿಗೆ ಬೆಂಬಲಿಸಲಿದ್ದಾರೆ. ಬಿಜೆಪಿ ಅಭ್ಯರ್ಥಿ ಶಿವರಾಜ ಸಜ್ಜನರ ಮಾಜಿ ಶಾಸಕರ ಬಳಗಕ್ಕೆ ಸೇರಿದವರಾಗಿದ್ದಾರೆ. ಆದ್ದರಿಂದ ಭಾವನಾತ್ಮಕ ಸಂಬಂಧವಾಗಿದೆ. ಬಿಜೆಪಿ ಸುಲಭವಾಗಿ ಗೆಲ್ಲಲಿದೆ ಎಂದರು.

Recommended Video

ರಿಷಬ್ ಪಂತ್ ಗೆ ಧೋನಿಯಿಂದ ಸಖತ್ ಕ್ಲಾಸ್:ವಿಡಿಯೋ ವೈರಲ್ | Oneindia Kannada

ವಿಧಾನಸಭೆ ಅಧಿವೇಶನದಲ್ಲಿ ವಿರೋಧ ಪಕ್ಷದವರು ಕೋವಿಡ್ ಚರ್ಚೆಗೆ ಉತ್ತರ ಕೇಳದೆ ಪಲಾಯನ ಮಾಡಿದರು. ಅವರೆಲ್ಲ ಸುಳ್ಳು ಆಪಾದನೆ ಮಾಡುತ್ತಿರುವುದನ್ನು ನಾನು ಕಡತಕ್ಕೆ ಕಳುಹಿಸಿಕೊಟ್ಟಿದ್ದೇನೆ. ಸರ್ಕಾರ ಯಾವುದನ್ನೂ ಮುಚ್ಚಿಡುತ್ತಿಲ್ಲ. ಅತ್ಯಂತ ಪಾರದರ್ಶಕ, ಪ್ರಾಮಾಣಿಕತೆಯಿಂದ ಕೋವಿಡ್ ನಿರ್ವಹಣೆಯನ್ನು ಸರ್ಕಾರ ಮಾಡಿದೆ. ಈ ವಿಚಾರದಲ್ಲಿ ಕಾಂಗ್ರೆಸ್ಸಿಗರು ಕೆಸರೆರೆಚಾಟ ಮಾಡಬಾರದು ಎಂದರು.

English summary
Medical education minister Dr. Sudhakar has clarified his statement."I didn't say Ramesh Kumar would be sent to jail," he said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X