ಉಕ್ರೇನ್‌ನಲ್ಲಿ ಮೃತಪಟ್ಟ ನವೀನ್ ಮೃತದೇಹ ಮೆಡಿಕಲ್ ಕಾಲೇಜಿಗೆ ದಾನ; ಕುಟುಂಬಸ್ಥರ ನಿರ್ಧಾರ
ಹಾವೇರಿ, ಮಾರ್ಚ್ 19: ಉಕ್ರೇನ್‌ನಲ್ಲಿ ಮೃತವಾಗಿರುವ ವೈದ್ಯಕೀಯ ವಿದ್ಯಾರ್ಥಿ ನವೀನ್ ಮೃತದೇಹ ಸೋಮವಾರ ನಸುಕಿನ ಜಾವ ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿದೆ. ಬೆಂಗಳೂರಿನಿಂದ ನೇರವಾಗಿ ಹುಟ್ಟೂರು ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮಕ್ಕೆ ತೆಗೆದುಕೊಂಡು ಹೋಗಲಾಗುತ್ತದೆ.
ನಂತರ ನವೀನ್ ಮೃತದೇಹಕ್ಕೆ ಅಂತಿಮ ವಿಧಿವಿಧಾನಗಳನ್ನು ಸಲ್ಲಿಸಿದ ಬಳಿಕ, ದಾವಣಗೆರೆಯ ಎಸ್.ಎಸ್. ಆಸ್ಪತ್ರೆಗೆ ಮೃತದೇಹವನ್ನು ದಾನ ನೀಡಲು ಕುಟುಂಬಸ್ಥರು ನಿರ್ಧರಿಸಿದ್ದಾರೆ.
Recommended Video

ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ನವೀನ್ ತಂದೆ ಶೇಖರಪ್ಪ ಗ್ಯಾನಗೌಡರ್, "ಮಗನ ಮೃತದೇಹ ಸೋಮವಾರ ಬರಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಅಂತಿಮವಾಗಿ ಸಲ್ಲಿಸಬೇಕಾದ ಪೂಜೆಗಳನ್ನು ಮಾಡುವ ಕುರಿತು ಗ್ರಾಮದ ಹಿರಿಯರು ನಿರ್ಧರಿಸಲಿದ್ದಾರೆ. ಸೋಮವಾರ ಸಂಜೆವರೆಗೂ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುವುದು. ತದನಂತರ ದಾವಣಗೆರೆಯ ಎಸ್.ಎಸ್. ಆಸ್ಪತ್ರೆಗೆ ಪಾರ್ಥಿವ ಶರೀರವನ್ನು ದಾನವಾಗಿ ನೀಡುತ್ತಿದ್ದೇವೆ," ಎಂದು ಹೇಳಿದರು.

"ಮಗ ನವೀನ್‌ಗೆ ವೈದ್ಯಕೀಯ ಲೋಕದಲ್ಲಿ ಏನಾದರೂ ಸಾಧನೆ ಮಾಡಬೇಕೆಂಬ ಮಹಾದಾಸೆ ಇತ್ತು, ಆದರೆ ಅದು ಸಾಧ್ಯವಾಗಲಿಲ್ಲ. ಮಗ ಪಾರ್ಥಿವ ಶರೀರ ಬೇರೆ ವೈದ್ಯಕೀಯ ವಿದ್ಯಾರ್ಥಿಗಳಿಗೆ ಸಹಾಯ ಆಗಲಿ ಎಂದು ನಿರ್ಧಾರ ತೆಗೆದುಕೊಳ್ಳಲಾಗಿದೆ," ಎಂದು ತಂದೆ ಶೇಖರಪ್ಪ ಗ್ಯಾನಗೌಡರ್ ಹೇಳಿದ್ದಾರೆ.
ನವೀನ್ ನಿವಾಸಕ್ಕೆ ಶಾಸಕ ಅರುಣ್‌ಕುಮಾರ್ ಪೂಜಾರ್ ಭೇಟಿ
ಇಂದು ಬೆಳಗ್ಗೆ ಮೃತ ನವೀನ್ ಮನೆಗೆ ರಾಣೆಬೆನ್ನೂರು ಕ್ಷೇತ್ರದ ಶಾಸಕ ಅರುಣ್‌ಕುಮಾರ್ ಪೂಜಾರ್ ಭೇಟಿ ನೀಡಿ, ಮೃತದೇಹವನ್ನು ದಾನ ಮಾಡಬೇಕಾ ಅಥವಾ ಅಂತ್ಯಕ್ರಿಯೆ ಮಾಡಬೇಕಾ ಅನ್ನುವ ಬಗ್ಗೆ ಕುಟುಂಬಸ್ಥರ ಜೊತೆ ಚರ್ಚೆ ನಡೆಸಲಿದ್ದಾರೆ.

ನವೀನ್ ಮೃತಪಟ್ಟು 21 ದಿನ ಆಗುತ್ತಿರುವ ಹಿನ್ನಲೆ ಮೃತದೇಹವನ್ನು ಆಸ್ಪತ್ರೆಗೆ ದಾನ ಮಾಡಲು ಸಾಧ್ಯವೇ ಅನ್ನುವುದರ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಮೃತದೇಹ ಆಗಮಿಸಿದ ನಂತರ ವೈದ್ಯರಿಂದ ತಪಾಸಣೆ ನಡೆಸಿ ನಂತರ ದಾನ ಮಾಡುವುದಾ ಅಥವಾ ಅಂತ್ಯಕ್ರಿಯೆ ಮಾಡುವುದಾ ಎಂಬ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆಗಳಿವೆ.
ಸಾವನ್ನಪ್ಪಿದ ಮೂರು ದಿನಗಳ ಬಳಿಕ ನವೀನ್ ಶವ ಪತ್ತೆ
ನವೀನ್ ಸಾವನ್ನಪ್ಪಿದ ಮೂರು ದಿನಗಳ ಬಳಿಕ ಉಕ್ರೇನ್‌ನಲ್ಲಿ ನವೀನ್ ಮೃತ ದೇಹದ ಗುರುತು ಪತ್ತೆಯಾಗಿರುವ ಕುರಿತು ಕೂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದರು. ನವೀನ್ ಮೃತದೇಹ ಪತ್ತೆಯಾಗಿದ್ದು, ಶೆಲ್ ದಾಳಿಯಿಂದ ಸಾವನ್ನಪ್ಪಿರುವುದು ದೃಢವಾಗಿದೆ. ಉಕ್ರೇನ್ ಶವಾಗಾರದಲ್ಲಿ ಅವರ ಶವವನ್ನು ಇರಿಸಲಾಗಿದ್ದು, ಆದಷ್ಟು ಬೇಗ ವಿದೇಶಾಂಗ ಇಲಾಖೆ ಪಾರ್ಥಿವ ಶರೀರ ತರಿಸುವ ಸಂಬಂಧ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದ್ದರು.

ಸರ್ಕಾರದಿಂದ 25 ಲಕ್ಷ ಪರಿಹಾರ
ಸಾವನ್ನಪ್ಪಿದ ನವೀನ್ ಕುಟುಂಬಕ್ಕೆ ಸಿಎಂ ಬಸವರಾಜ ಬೊಮ್ಮಾಯಿ, ವಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಅನೇಕ ಶಾಸಕರು, ಸಚಿವರು ಸಾಂತ್ವನ ಹೇಳಿದ್ದರು. ಮೃತಪಟ್ಟ ನವೀನ್ ಕುಟುಂಬಕ್ಕೆ ಸಿಎಂ ಬೊಮ್ಮಾಯಿ ರಾಜ್ಯ ಸರ್ಕಾರದಿಂದ 25 ಲಕ್ಷ ಪರಿಹಾರದ ಚೆಕ್ ಅನ್ನು ಕೂಡ ವಿತರಿಸಿದ್ದರು. ಇನ್ನು ಪಾರ್ಥಿವ ಶರೀರ ತರಿಸುವ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯುವುದಾಗಿ ಸಿದ್ದರಾಮಯ್ಯ ಕೂಡ ತಿಳಿಸಿದ್ದರು.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ









Click it and Unblock the Notifications