ಹಾವೇರಿ: ಮತಗಟ್ಟೆಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ
ಹಾವೇರಿ, ಮೇ 12: ತಮ್ಮ ಗ್ರಾಮಕ್ಕೆ ಮೂಲಸೌಕರ್ಯಗಳನ್ನು ಕಲ್ಪಿಸಿಲ್ಲ ಎಂದು ಬೇಸರ ವ್ಯಕ್ತಪಡಿಸಿದ ಮಹಿಳೆಯೊಬ್ಬರು ಮತಗಟ್ಟೆಯಲ್ಲಿಯೇ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ದೇವಗಿರಿಯಲ್ಲಿ ಮತಚಲಾಯಿಸಲು ಬಂದಿದ್ದ ಪಾಪಮ್ಮ ಅರ್ಕಾಚಾರಿ ಎಂಬುವವರು ಮೂಲಸೌಕರ್ಯ ಕಲ್ಪಿಸದ ಜನಪ್ರತಿನಿಧಿಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಳಿಕ ಅಲ್ಲಿಯೇ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.
In Pics: ಮತದಾನ ಪರ್ವದಲ್ಲಿ ಮತದಾರ ಮಹಾಪ್ರಭು

ಅಲ್ಲಿದ್ದ ಸ್ಥಳೀಯ ಮುಖಂಡರು ಕೂಡಲೇ ಅವರನ್ನು ತಡೆದು ಸಮಾಧಾನ ಪಡಿಸಿ ಮತಗಟ್ಟೆಯಿಂದ ಹೊರಕ್ಕೆ ಕರೆದೊಯ್ದರು ಎಂದು ಮೂಲಗಳು ತಿಳಿಸಿವೆ.












Click it and Unblock the Notifications