Karnataka By Elections 2024: ಶಿಗ್ಗಾಂವಿಯಲ್ಲಿ ಬಿಜೆಪಿ ಅಭ್ಯರ್ಥಿಗೆ ಭಾರೀ ಮುನ್ನಡೆ
Karnataka By Election 2024: ಕರ್ನಾಟಕದ ಮೂರು ಕ್ಷೇತ್ರಗಳಿಗೆ ನವೆಂಬರ್ 13ರಂದು ಉಪಚುನಾವಣೆ ನಡೆದಿದ್ದು, ಇಂದು (ನವೆಂಬರ್ 23) ಮತ ಎಣಿಕೆ ನಡೆಯುತ್ತಿದೆ. ಇನ್ನು ರಾಜ್ಯದ ಮೂರು ಕ್ಷೇತ್ರಗಳ ಪೈಕಿ ಶಿಗ್ಗಾಂವಿಯಲ್ಲಿ 5ನೇ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಯಿ 1,835 ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ ಪಠಾಣ್ ಅವರು ಹಿನ್ನಡೆಯಲ್ಲಿದ್ದಾರೆ.

ಶಿಗ್ಗಾಂವಿಯಲ್ಲಿ ನಾಲ್ಕನೇ ಸುತ್ತಿನಲ್ಲೂ ಕೂಡ ಭರತ್ ಬೊಮ್ಮಾಯಿ ಮುನ್ನಡೆ ಸಾಧಿಸಿದ್ದರು. ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಅಹಮದ್ ಖಾನ್ ಪಠಾಣ್ಗಿಂತ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ 1,219 ಮತಗಳಿಂದ ಮುನ್ನಡೆ ಸಾಧಿಸಿದ್ದರು.
ನಾಲ್ಕನೇ ಸುತ್ತಿನ ಮತ ಎಣಿಕೆಯಲ್ಲಿ ಸಂಡೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಮುನ್ನಡೆ ಕಾಯ್ದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ 1,001 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. 20,128 ಮತಗಳು ಬಂದಿವೆ. ಸಂಡೂರು ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತುಗೆ 19,127 ಮತಗಳು ಬಂದಿವೆ.
ಸಿ.ಪಿ.ವೈ ಮತ್ತು ನಿಖಿಲ್ ನಡುವೆ ಹಾವು ಏಣಿ ಆಟ: ತೀವ್ರ ಕುತೂಹಲ ಮೂಡಿಸಿದ್ದ ಉಪಚುನಾವಣೆ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ಚನ್ನಪಟ್ಟಣದಲ್ಲಿ ಜಿದ್ದಾಜಿದ್ದಿನ ಫೈಟ್ ನಡೆಯುತ್ತಿದೆ. ಸಿ.ಪಿ. ಯೋಗೇಶ್ವರ್ ಮತ್ತು ನಿಖಿಲ್ ಕುಮಾರಸ್ವಾಮಿ ಅವರ ನಡುವೆ ಹಾವು ಏಣಿ ಆಟ ನಡೆಯುತ್ತಿದ್ದು, ತೀವ್ರ ಪೈಪೋಟಿ ಏರ್ಪಟ್ಟಿದ್ದೆ.
ಮೊದಲ ಒಂದು ಸುತ್ತಿನಲ್ಲಿ ನಿಖಿಲ್ ಮುಂದಿದ್ದರೆ, ಇನ್ನೊಂದು ಸುತ್ತಿನಲ್ಲಿ ಯೋಗೇಶ್ವರ್ ಮುನ್ನಡೆ ಕಾಯ್ದುಕೊಳ್ಳುತ್ತಿದ್ದರು. ಚುನಾವಣೆಯಲ್ಲಿ ಇದು ಸಿ.ಪಿ. ಯೋಗೇಶ್ವರ್ ಮತ್ತು ನಿಖಿಲ್ ಕುಮಾರಸ್ವಾಮಿ ನಡುವಿನ ಫೈಟ್ ಆದರೆ, ಇದು ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ನಡುವಿನ ಪೈಪೋಟಿ ಎಂದು ಹೇಳಲಾಗುತ್ತಿದೆ.
ಭರತ್ ಬೊಮ್ಮಾಯಿ ಹೇಳಿದ್ದೇನು?: 3 ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಹೊರಬಿದ್ದಿದೆ. ಎಲ್ಲಾ ಎಕ್ಸಿಟ್‌ಪೋಲ್‌ಗಳ ಭವಿಷ್ಯ ತಲೆಕೆಳಗಾಗಿದೆ. ಚನ್ನಪಟ್ಟಣದಲ್ಲಿ ಸಿ.ಪಿ.ಯೋಗೇಶ್ವರ್ ಭರ್ಜರಿ ಗೆಲುವು ದಾಖಲಿಸಿದರೆ, ಸಂಡೂರಿನಲ್ಲಿ ಕಾಂಗ್ರೆಸ್‌ನ ಅನ್ನಪೂರ್ಣ ತುಕಾರಾಂ ಗೆದ್ದಿದ್ದಾರೆ. ಶಿಗ್ಗಾವಿಯಲ್ಲಿ ಕಾಂಗ್ರೆಸ್‌ನ ಯಾಸೀರ್ ಖಾನ್ ಪಠಣ ಜಯಭೇರಿ ಬಾರಿಸಿದ್ದಾರೆ.
ಶಿಗ್ಗಾವಿಯಲ್ಲಿ ಹೀನಾಯ ಸೋಲು ಕಂಡಿರುವ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ. ಮೊದಲನೆಯದಾಗಿ ಶಿಗ್ಗಾವಿ ಸವಣೂರು ಜನತೆಗೆ, ಬಿಜೆಪಿ ಕಾರ್ಯಕರ್ತರಿಗೆ ಧನ್ಯವಾದಗಳು. ಕಾಂಗ್ರೆಸ್ ಸರ್ಕಾರ ಇಲ್ಲಿ ಹಣದ ಹೊಳೆಯನ್ನೇ ಹರಿಸಿದೆ. ಆದ್ದರಿಂದ ಶಿಗ್ಗಾವಿಯಲ್ಲಿ ಕಾಂಗ್ರೆಸ್ ಗೆದ್ದಿದೆ. ನಾನು ಯಾವತ್ತಿದ್ದರೂ ಶಿಗ್ಗಾಂವಿ ಸವಣೂರು ಕ್ಷೇತ್ರದ ಜನರಿಗೆ ಒಳಿತು ಆಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಕ್ಷೇತ್ರದ ಜನರ ಜೊತೆಗೆ ಎಂದೆಂದಿಗೂ ಇರುತ್ತೇನೆ. ಸೋಲಿನ ಬಗ್ಗೆ ಅವಲೋಕನ ಮಾಡುತ್ತೇವೆ ಎಂದರು.
-
ನಾಸೀರ್ ಅಹ್ಮದ್ ವಜಾ; ಪಕ್ಷದಲ್ಲಿ ಶಿಸ್ತಿಲ್ಲದಿದ್ದರೆ ಕ್ರಮ ಎಂದ ಡಿಕೆ ಶಿವಕುಮಾರ್ -
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
Siddaramaiah: ಜನರ ದಾರಿತಪ್ಪಿಸುವ ಬಿಜೆಪಿಯನ್ನು ನಂಬಬೇಡಿ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾರಣವೇನು -
“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ -
Vijay: ಪ್ರಚಾರದ ವೇಳೆ ಹೂವಿನ ಚೆಂಡು ಎಸೆದ ಅಭಿಮಾನಿ; ಸೈಕಲ್ನಿಂದ ಇಳಿದು ಗಾಡಿ ಹತ್ತಿದ ದಳಪತಿ ವಿಜಯ್, ವಿಡಿಯೋ ವೈರಲ್ -
Upendra: ನಟ ಉಪೇಂದ್ರ ಅವರ "ಪ್ರಜಾಕೀಯ" ಪಕ್ಷದ ವೆಬ್ಸೈಟ್ ಲೋಕಾರ್ಪಣೆ, ಟಿಕೆಟ್ ಆಕಾಂಕ್ಷಿಗಳಿಗೆ ಹೊಸ ರೂಲ್ಸ್ -
Bihar: ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ, ನೂತನ ಸಿಎಂ ಆಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಆಯ್ಕೆ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ












Click it and Unblock the Notifications