ಹಾವೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಾದಿಭಾಗ್ಯ ಕೊಟ್ಟ ಸಿದ್ದು ಮನೆಗೆ ಹೋಗೋದು ಪಕ್ಕಾ!

|
Google Oneindia Kannada News

ಹಾವೇರಿ, ನವೆಂಬರ್.28: ಉಪ ಚುನಾವಣೆ ಗೆಲ್ಲಲು ರಾಜ್ಯ ನಾಯಕರು ಜಿದ್ದಿಗೆ ಬಿದ್ದಿದ್ದಾರೆ. ಅನರ್ಹ ಶಾಸಕರಿಗೆ ಮಣ್ಣು ಮುಕ್ಕಿಸಲು ಕಾಂಗ್ರೆಸ್ ನ ಟಗರು ಹೋದ ಬಂದಲ್ಲೆಲ್ಲ ಗುಟುರು ಹಾಕುತ್ತಿದೆ. ಆದರೆ, ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಾಂಗ್ರೆಸ್ ನಲ್ಲಿ ಷಡ್ಯಂತ್ರ ನಡೆದಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಹಾಕಿದ್ದಾರೆ.

ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲೂಕಿನ ಮಾಸೂರು ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ಸಿ.ಪಾಟೀಲ್ ಪರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅಬ್ಬರದ ಪ್ರಚಾರ ಮಾಡಿದರು. ಬಿಜೆಪಿಗೆ ಮತ ನೀಡುವಂತೆ ಮತದಾರರಲ್ಲಿ ಮನವಿ ಮಾಡಿದ ಅವರು, ಕಾಂಗ್ರೆಸ್ ವಿರುದ್ಧ ಕೇಕೆ ಹಾಕಿದರು.

ರಾಜ್ಯದಲ್ಲಿ ಈಗಾಗಲೇ ಕಾಂಗ್ರೆಸ್ ಹೀನಾಯವಾಗಿ ಸೋಲು ಕಂಡಿದೆ. ವಿಧಾನಸಭೆ ಚುನಾವಣೆ ಬಳಿಕ ಕರ್ನಾಟಕದಲ್ಲಿ ಕಾಂಗ್ರೆಸ್ ಹೇಳಹೆಸರಿಲ್ಲದಂತೆ ಆಗುತ್ತದೆ. ಡಿಸೆಂಬರ್.09ರ ಬಳಿ ರಾಜ್ಯದಲ್ಲಿ ಕಾಂಗ್ರೆಸ್ ಇರುವುದೇ ಇಲ್ಲ ಎಂದು ಯತ್ನಾಳ್ ಗುಡುಗಿದ್ದಾರೆ.

Karnataka By-Poll: BJP MLA Basanagowda Patil Yatnala Attaked On Siddaramaiah

ಸಿದ್ದರಾಮಯ್ಯ ಮನೆಗೆ ಹೋಗೋದು ಗ್ಯಾರೆಂಟಿ!

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾಂಗ್ರೆಸ್ ನಲ್ಲಿಯೇ ಷಡ್ಯಂತ್ರ ನಡೆಯುತ್ತಿದೆ. ವಿಧಾನಸಭೆ ಉಪ ಚುನಾವಣೆ ಫಲಿತಾಂಶ ಹೊರ ಬೀಳುತ್ತಿದ್ದಂತೆ ಸಿದ್ದರಾಮಯ್ಯರನ್ನು ಮನೆಗೆ ಕಳುಹಿಸಲಾಗುತ್ತದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ಶಾದಿಭಾಗ್ಯ ನೀಡಿದ್ದಷ್ಟೇ ಸಿದ್ದು ಸಾಧನೆ

ಕರ್ನಾಟಕದಲ್ಲಿ ಮುಖ್ಯಮಂತ್ರಿಯಾಗಿ ಐದು ವರ್ಷ ಕೆಲಸ ಮಾಡಿರುವ ಸಿದ್ದರಾಮಯ್ಯನವರು ರಾಜ್ಯದ ಜನರಿಗಾಗಿ ಏನನ್ನೂ ಮಾಡಿಲ್ಲ. ಶಾದಿಭಾಗ್ಯ ಯೋಜನೆ ಜಾರಿಗೊಳಿಸಿದ್ದು ಅಷ್ಟೇ ಅವರ ಸಾಧನೆ ಎಂದು ಯತ್ನಾಳ್ ಟೀಕಿಸಿದ್ದಾರೆ.

English summary
Karnataka By-Poll: MLA Basanagowda Patil Yatnala Campaign For BJP Candidate B.C.Patil.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X