ಕರ್ನಾಟಕದಲ್ಲಿ ಬಿಜೆಪಿ 25 ಸೀಟು ಗೆಲ್ಲಲಿದೆ: ಅಂಕಿ ಅಂಶ ಕೊಟ್ಟ ಬಸವರಾಜ ಬೊಮ್ಮಾಯಿ
ಹಾವೇರಿ, ಜೂನ್ 04: ಭಾರತದಲ್ಲಿ ಸದರಿ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಗೆದ್ದು ಮೂರನೇ ಬಾರಿಗೆ ಮತ್ತೆ ಅಧಿಕಾರ ಹಿಡಿಯಲಿದ್ದಾರೆ. ಅದಾದ ಬಳಿಕ ಮೂರು ತಿಂಗಳಲ್ಲಿ ಕಾಂಗ್ರೆಸ್ ಇಬ್ಬಾಗವಾಗಲಿದೆ. ಕರ್ನಾಟಕದಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗೆಲ್ಲಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಭವಿಷ್ಯ ನುಡಿದರು.
ಹಾವೇರಿಯ ಭಾರತೀಯ ಜನತಾ ಪಕ್ಷದ ಕಾರ್ಯಾಲಯದಲ್ಲಿ ಏರ್ಪಡಿಸಲಾಗಿದ್ದ , ಮತ ಏಣಿಕೆಯ ಏಜೆಂಟರ ಕಾರ್ಯಾಗಾರದಲ್ಲಿ ಕರ್ನಾಟಕ ಸರ್ಕಾರದ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿರವರು ಭಾಗವಹಿಸಿ ಮಾತನಾಡಿದರು.

ಈ ವೇಳೆ ರಾಜ್ಯ ಕಾಂಗ್ರೆಸ್ ಇಬ್ಬಾಗವಾಗುವ ಕುರಿತು ಅವರು ಭವಿಷ್ಯ ನುಡಿದರು. ಈ ಚುನಾವಣೆ ಫಲಿತಾಂಶದ ನಂತರ ರಾಜ್ಯದಲ್ಲಿಯು ರಾಜಕಾರಣ ಬದಲಾವಣೆಯಾಗಲಿದೆ ಎಂದರು.
ರಾಜ್ಯ ಸರ್ಕಾರ ಬದಲಾವಣೆಗೆ ನಂಬರ್ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ರಾಜಕಾರಣದಲ್ಲಿ ನಂಬರ್ ಮಹತ್ವ ಅಲ್ಲ. ಮಾಜಿ ಪ್ರಧಾನಿ ದಿ.ಇಂದಿರಾಗಾಂಧಿ ಹಾಗೂ ದೇವರಾಜ್ ಅರಸ್ ನಡುವೆ ವ್ಯತ್ಯಾಸ ಬಂದಾಗ ರಾತ್ರೋ ರಾತ್ರಿ ಎಲ್ಲರೂ ಆರ್. ಗುಂಡುರಾವ್ ಕಡೆಗೆ ಹೋದರು ಎಂದು ಇತಿಹಾಸವನ್ನು ಅವರು ನೆನಪಿಸಿದರು.

ಕರ್ನಾಟಕದಲ್ಲಿ ಬಿಜೆಪಿಗೆ 25 ಸೀಟ್
ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ಭರ್ತಿ 25 ಸೀಟ್ ಗೇಲ್ಲುತ್ತದೆ. ಕೇಂದ್ರದಲ್ಲಿ 400ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ. ಕರ್ನಾಟದಲ್ಲಿ ಮತ್ತೆ ಬಿಜೆಪಿ ಹ್ಯಾಟ್ರಿಕ್ ಭಾರಿಸಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಈ ಸಂಧರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್. ನವೀನ, ಭಾರತೀಯ ಜನತಾ ಪಕ್ಷದ ಜಿಲ್ಲಾ ಅಧ್ಯಕ್ಷರಾದ ಅರುಣಕುಮಾರ ಪೂಜಾರ, ಶಾಸಕರಾದ ಚಂದ್ರು ಲಮಾಣಿ, ಮಾಜಿ ಶಾಸಕರಾದ ಶಿವರಾಜ ಸಜ್ಜನ ಸೇರಿದಂತೆ ಪಕ್ಷದ ಹಲವಾರು ಕಾರ್ಯಕರ್ತರು ಮುಖಂಡರು ಭಾಗವಹಿಸಿದ್ದರು.
ಮುಂಗಾರು ಸಿದ್ಧತೆಯಲ್ಲಿ ಸರ್ಕಾರ ವಿಫಲ
ಇತ್ತಿಚೆಗೆ ಬೀಜ, ರಸಗೊಬ್ಬರ ಬಗ್ಗೆ ಮಾತನಾಡಿದ್ದ ಬಸವರಾಜ ಬೊಮ್ಮಾಯಿ ಅವರು, ಉತ್ತರ ಕರ್ನಾಟಕದಲ್ಲಿ ರೈತರು ಬಿತ್ತನೆ ಪ್ರಾರಂಭ ಮಾಡಿದ್ದಾರೆ. ಬಿತ್ತನೆ ಬೀಜ, ಗೊಬ್ಬರದ ಕೊರತೆ ಆಗಿದೆ. ಬೀಜದ ದರ ಹೆಚ್ಚಾಗಿದೆ, ಮಳೆ ಬಿದ್ದರೂ ರೈತರು ಬಿತ್ತನೆ ಮಾಡಲು ಸಾಧ್ಯವಾಗಿಲ್ಲ. ರಾಜ್ಯ ಸರ್ಕಾರ ಮುಂಗಾರು ಸಿದ್ದತೆಯಲ್ಲಿ ವಿಫಲವಾಗಿದೆ ಎಂದು ಆರೋಪಿಸಿದ್ದರು.
ಕರ್ನಾಟಕದಲ್ಲಿ ಬರಗಾಲ ಇದ್ದರೂ ಕೃಷಿ ಇಲಾಖೆಯ ಫಾರ್ಮ್ ಗಳು, ಕೃಷಿ ಹಾಗೂ ತೋಟಗಾರಿಕೆ ವಿವಿಗಳ ಮೂಲಕ ಬೀಜೊತ್ಪಾದನೆಗೆ ಕ್ರಮ ಕೈಗೊಳ್ಳಬೇಕಿತ್ತು. ಉತ್ಪಾದನೆ ಮಾಡದಿದ್ದರೂ ಅಗತ್ಯ ಬಿತ್ತನೆ ಬೀಜಗಳನ್ನು ಆಮದು ಮಾಡಿಕೊಳ್ಳಬಹುದಿತ್ತು. ಆದರೆ ಈ ಕೆಲಸವನ್ನೂ ಸರ್ಕಾರ ಮಾಡಿಲ್ಲ.
ಸರ್ಕಾರ ವೈಫಲ್ಯತೆಯಿಂದ ರಾಜ್ಯದಲ್ಲಿ ಬಿತ್ತನೆ ಬೀಜದ ದರ ಹೆಚ್ಚಾಗಿದೆ. ದರ ಹೆಚ್ಚಾಗಿದೆ ಎಂದು ರೈತರು ಬಿತ್ತನೆ ಮಾಡುವುದನ್ನು ನಿಲ್ಲಿಸಲು ಸಾಧ್ಯವಿಲ್ಲ. ಇದರಿಂದ ಆಹಾರ ಉತ್ಪಾದನೆ ಕುಂಠಿತವಾಗುತ್ತದೆ. ಇವರು ಅನ್ನಭಾಗ್ಯ ಅಂತ ಹೇಳುತ್ತಾರೆ. ಅನ್ನಕ್ಕೆ ಮೊದಲು ಬೇಕಾಗಿರುವುದು ಬಿತ್ತನೆ ಬೀಜ ಎಂದು ಅವರು ತಿಳಿಸಿದರು.
ಮತ ಎಣಿಕೆ ಮುನ್ನ ದೇಗುಲಕ್ಕೆ ಬೊಮ್ಮಾಯಿ ಭೇಟಿ
ಇಂದು (ಜೂನ್ 4) ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಮತ ಎಣಿಕೆ ಆರಂಭವಾಗಿದೆ. ಇದಕ್ಕೆ ಒಂದು ದಿನ ಮೊದಲು ಸೋಮವಾರ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕುಟುಂಬ ಸಮೇತ ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಶ್ರಿ ಸಿದ್ಧರೂಢ ಮಠಕ್ಕೂ ಇದೇ ವೇಳೆ ಭೇಟಿ ನೀಡಿ ದೇವರ ಆಶೀರ್ವಾ ಪಡೆದರು.












Click it and Unblock the Notifications