ಹಾವೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಏಲಕ್ಕಿ ನಾಡು ಹಾವೇರಿಯಲ್ಲಿ ಗೆದ್ದು ಬೀಗಿದ ಬಿಜೆಪಿ!

|
Google Oneindia Kannada News

ಹಾವೇರಿ, ಮೇ 16 : ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ಏಲಕ್ಕಿ ನಾಡು ಹಾವೇರಿ ಜಿಲ್ಲೆಯ 6 ಕ್ಷೇತ್ರಗಳ ಪೈಕಿ 4 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಕಾಂಗ್ರೆಸ್ ಪಕ್ಷ 1 ಕ್ಷೇತ್ರದಲ್ಲಿ ಮಾತ್ರ ಜಯಗಳಿಸಿದೆ.

ಹಾವೇರಿ ಜಿಲ್ಲೆ ಕರ್ನಾಟಕ ರಾಜ್ಯದ ಮಧ್ಯಭಾಗದಲ್ಲಿದ್ದು ಉತ್ತರದ ಬೀದರ್ ಮತ್ತು ದಕ್ಷಿಣದ ಕೊಳ್ಳೆಗಾಲ ಇವುಗಳಿಗೆ ಸಮಾನ ಅಂತರದಲ್ಲಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಹೆಬ್ಬಾಗಿಲು ಜಿಲ್ಲೆ ಎಂದು ಸಹ ಪ್ರಸಿದ್ಧಿಯಾಗಿದೆ.

ಹಾವೇರಿ ಜಿಲ್ಲೆಯು ಸಾಂಸ್ಕೃತಿಕವಾಗಿ ಶ್ರೀಮಂತ ಜಿಲ್ಲೆಯಾಗಿದೆ. ಸಂತ ಶಿಶುನಾಳ ಶರೀಫರು, ಕನಕದಾಸರು, ವರಕವಿ ಸರ್ವಜ್ಞ, ಹಾನಗಲ್ ಕುಮಾರ ಶಿವಯೋಗಿಗಳು, ಕಾದಂಬರಿ ಪಿತಾಮಹ ಗಳಗನಾಥರು, ಗಾನಯೋಗಿ ಪಂಚಾಕ್ಷರಿ ಗವಾಯಿಗಳು, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ.ವಿ.ಕೃ.ಗೋಕಾಕ್ ಮುಂತಾದ ಮಹನಿಯರುಗಳಿಗೆ ಜನ್ಮನೀಡಿದ ಹೆಮ್ಮೆಯ ಜಿಲ್ಲೆ ಹಾವೇರಿ.

Karnataka elections results 2018 : Haveri district winners and losers

ಹಾವೇರಿ ಜಿಲ್ಲೆಯು ಗದಗ ಜಿಲ್ಲೆಯನ್ನು ಒಳಗೊಂಡಂತೆ ಮೊದಲು ಧಾರವಾಡ ಜಿಲ್ಲೆಯ ಭಾಗವಾಗಿತ್ತು. ಇಲ್ಲಿನ ಜನರ ಬೇಡಿಕೆಯಂತೆ ಬಹುದಿನಗಳ ಹೋರಾಟದ ನಂತರ ಧಾರವಾಡ ಜಿಲ್ಲೆಯಿಂದ ವಿಭಜಿಸಲ್ಪಟ್ಟ ಹಾವೇರಿ ಜಿಲ್ಲೆ ದಿನಾಂಕ: 24.08.1997 ರಂದು ಹೊಸ ಜಿಲ್ಲೆಯಾಗಿ ಅಸ್ತಿತ್ವಕ್ಕೆ ಬಂದಿತು.

ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 4ರಲ್ಲಿ ಜಯಗಳಿಸಿದೆ. ಕಾಂಗ್ರೆಸ್ 1 ಕ್ಷೇತ್ರದಲ್ಲಿ ಜಯಸಾಧಿಸಿದೆ. ಅಚ್ಚರಿ ಎಂಬಂತೆ ಕೆಪಿಜೆಪಿಯ ಆರ್.ಶಂಕರ್ ಅವರು ರಾಣೆಬೆನ್ನೂರು ಕ್ಷೇತ್ರದಲ್ಲಿ ಸ್ಪೀಕರ್ ಕೆ.ಬಿ.ಕೋಳಿವಾಡ ಅವರನ್ನು ಸೋಲಿಸಿದ್ದಾರೆ.

ಹಾವೇರಿ ಜಿಲ್ಲೆ ವಿಧಾನಸಭಾ ಕ್ಷೇತ್ರಗಳಲ್ಲಿ: ಗೆದ್ದವರು, ಸೋತವರ ವಿವರ ಹೀಗಿದೆ:

ಕ್ಷೇತ್ರ ಗೆದ್ದವರು ಪಕ್ಷ ಗಳಿಸಿದ ಮತಗಳು ಸೋತವರು ಪಕ್ಷ ಗಳಿಸಿದ ಮತಗಳು
ಹಾನಗಲ್ ಸಿ.ಎಂ.ಉದಾಸಿ ಬಿಜೆಪಿ 80,529 ಶ್ರೀನಿವಾಸ ಮಾನೆ ಕಾಂಗ್ರೆಸ್ 74,015
ಶಿಗ್ಗಾಂವ್ ಬಸವರಾಜ್ ಬೊಮ್ಮಾಯಿ ಬಿಜೆಪಿ 83,868 ಖಾದ್ರಿ ಸೈಯದ್ ಅಜಿಂಪೀರ್ ಬಾಷಾ ಕಾಂಗ್ರೆಸ್ 74,603
ಹಾವೇರಿ ನೆಹರೂ ಓಲೇಕಾರ್ ಬಿಜೆಪಿ 86,565 ರುದ್ರಪ್ಪ ಲಮಾಣಿ ಕಾಂಗ್ರೆಸ್ 75,261
ಬ್ಯಾಡಗಿ ವಿರೂಪಾಕ್ಷಪ್ಪ ಬಳ್ಳಾರಿ ಬಿಜೆಪಿ 91,721 ಎಸ್.ಆರ್.ಪಾಟೀಲ ಕಾಂಗ್ರೆಸ್ 70,450
ಹಿರೇಕೆರೂರು ಬಿ.ಸಿ.ಪಾಟೀಲ್ ಕಾಂಗ್ರೆಸ್ 72,461 ಯು.ಬಿ.ಬಣಕಾರ ಬಿಜೆಪಿ 71,906
ರಾಣೇಬೆನ್ನೂರು ಆರ್.ಶಂಕರ್ ಕೆಪಿಜೆಪಿ 63,910 ಕೆ.ಬಿ.ಕೋಳಿವಾಡ ಕಾಂಗ್ರೆಸ್ 59,575
English summary
Karnataka Election Results 2018 Updates. Here is a list of candidates who won in Karnataka assembly elections 2018 in Haveri district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X