'ಕಡಿಮೆ ಹಣಕ್ಕೆ ಔಷಧಿ ನೀಡುವ 'ಜನೌಷಧಿ ಕೇಂದ್ರ' ಸ್ಥಗಿತ ನಿರ್ಧಾರ ಹಿಂಪಡೆಯಿರಿ: ಸರ್ಕಾರಕ್ಕೆ ಪತ್ರ''
ಹಾವೇರಿ, ಮೇ 22: ಹಾವೇರಿ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಪ್ರಾರಂಭಿಸಲಾದ ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಕೇಂದ್ರಗಳನ್ನು ಸ್ಥಗಿತಗೊಳಿಸುವಂತೆ ರಾಜ್ಯ ಸರ್ಕಾರ ಹೊರಡಿಸಿದ ಆದೇಶ ರದ್ದುಗೊಳಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.
ಕರ್ನಾಟಕ ರಾಜ್ಯದಲ್ಲಿ ಜನರಿಗೆ ಕಡಿಮೆ ಬೆಲೆಯಲ್ಲಿ ಔಷಧಿಗಳನ್ನು ವಿತರಿಸುತ್ತಿದ್ದ ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳನ್ನು ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ. ಇನ್ನು ಮುಂದೆ ಸರ್ಕಾರ ಆಸ್ಪತ್ರೆಗಳ ಆವರಣದಲ್ಲಿ ಜನೌಷಧಿ ಕೇಂದ್ರ ತೆರೆಯಲು ಅನುಮತಿ ನೀಡದಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದರ ವಿರುದ್ಧ ಬಿಜೆಪಿ ನಾಯಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜನೌಷಧಿ ಕೇಂದ್ರ ಸ್ಥಗಿತಗೊಳಿಸುವಂತೆ ಹೊರಡಿಸಿರುವ ಆದೇಶ ರದ್ದು ಪಡಿಸಲು ಬಸವರಾಜ ಬೊಮ್ಮಾಯಿ ಅವರು ಪತ್ರ ಬರೆದಿದ್ದಾರೆ.

ಹಾವೇರಿ ಜಿಲ್ಲಾ ಪ್ರಧಾನ ಮಂತ್ರಿ ಜನೌಷಧಿ ಕೇಂದ್ರದ ಮಾಲೀಕರ ಸಂಘದವರು, ಹಾವೇರಿ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಪ್ರಾರಂಭಿಸಲಾದ ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಕೇಂದ್ರಗಳನ್ನು ಸ್ಥಗಿತಗೊಳಿಸುವಂತೆ ರಾಜ್ಯ ಸರ್ಕಾರ ಹೊರಡಿಸಿದ ಆದೇಶ ರದ್ದುಗೊಳಿಸಬೇಕು.
ಪ್ರಧಾನ ಮಂತ್ರಿ ಜನೌಷಧಿ ಕೇಂದ್ರಗಳನ್ನು ಸರ್ಕಾರಿ ಆಸ್ಪತ್ರೆಗಳ ಆವರಣಗಳಲ್ಲಿ ಸ್ಥಗಿತಗೊಳಿಸುವುದರಿಂದ ಸಾಮಾನ್ಯ ಬಡ ಜನರಿಗೆ ಉತ್ತಮ ಗುಣಮಟ್ಟದ ಜನರಿಕ್ ಔಷಧಿಗಳನ್ನು ಕಡಿಮೆ ಹಾಗೂ ಕೈಗೆಟುಕುವ ದರಗಳಲ್ಲಿ ದೊರಕಿಸುವ ಕೇಂದ್ರ ಸರ್ಕಾರದ ಉದ್ದೇಶಕ್ಕೆ ಅಡ್ಡಿಪಡಿಸಿದಂತಾಗುತ್ತದೆ. ಆದುದ್ದರಿಂದ, ಸದರಿ ವಿಷಯದ ಬಗ್ಗೆ ಪರಿಶೀಲಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಕೂಡಲೇ ಅಗತ್ಯ ಕ್ರಮಕೈಗೊಳ್ಳಲು ಸೂಚಿಸುವಂತೆ ಅವರು ಪತ್ರದಲ್ಲಿ ಕೋರಿದ್ದಾರೆ.
ಜನೌಷಧಿ ಕೇಂದ್ರ ಮುಚ್ಚುವುದು ತಪ್ಪು
ಇದೇ ವಿಚಾರವಾಗಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸಹಿತ ಪ್ರತಿಕ್ರಿಯಿಸಿ ಸರ್ಕಾರದ ನಡೆ ಖಂಡಿಸಿದ್ದರು. ಪಿಎಂ ಜನೌಷಧಿ ಕೇಂದ್ರ ಮುಚ್ಚುವುದು ಸರಿಯಲ್ಲ. ಜನರಿಗೆ ಕಡಿಮೆ ಬೆಲೆಯಲ್ಲಿ ಉತ್ತಮ ಔಷಧಿ ಸೌಲಭ್ಯ ಸಿಗುತ್ತಿತ್ತು. ಅದನ್ನು ಮುಚ್ಚುವುದರಿಂದ ಬಡವರಿಗೆ ತೊಂದರೆ ಆಗಲಿದೆ ಎಂದು ಅವರು ಒತ್ತಾಯಿಸಿದ್ದಾರೆ.
ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಜನೌಷಧಿ ಕೇಂದ್ರಗಳನ್ನು ಸ್ಥಾಪಿಸಲು ಅನುಮೋದನೆ ನೀಡಕೂಡದು. ಸದ್ಯ 31 ಜನೌಷಧಿಕ ಕೇಂದ್ರ ತೆರೆಯಲು ಅರ್ಜಿಗಳನ್ನು ಸಲ್ಲಿಸಲಾಗಿದೆ. ಆದರೆ ಅವು ಬಾಕಿ ಉಳಿದಿವೆ. ಈ ಮಧ್ಯೆ ಹೊಸದಾಗಿ ಅನುಮತಿ ನೀಡದಂತೆ, ಸ್ಥಗಿತಕ್ಕೆ ಸರ್ಕಾರ ಆದೇಶಿಸಿದ್ದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಸರ್ಕಾರ ನಿರ್ಧಾರದಿಂದ ಹಿಂದೆ ಸರಿಯುತ್ತಾ? ಕಾದು ನೋಡಬೇಕಿದೆ.












Click it and Unblock the Notifications