ಕರ್ನಾಟಕದಲ್ಲಿ ಮೂರು ವರ್ಷಗಳಲ್ಲಿ 25,000 ಶಾಲಾ ಕೊಠಡಿ ನಿರ್ಮಾಣ
ಕರ್ನಾಟಕ ರಾಜ್ಯವು ಮುಂದಿನ ಮೂರೇ ವರ್ಷಗಲ್ಲಿ ಅತ್ಯಂತ ಕಡಿಮೆ ಅವಧಿಯಲ್ಲಿ 25,000 ಕ್ಕೂ ಅಧಿಕ ಹೊಸ ಶಾಲಾ ಕೊಠಡಿಗಳನ್ನು ಕಾಣಲಿದೆ, ಎಲ್ಲಿ, ಹೇಗೆ ಎಂದು ವಿವರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ.
ಹಾವೇರಿ, ಮಾರ್ಚ್ 14: ಕರ್ನಾಟಕ ರಾಜ್ಯವು ಮುಂದಿನ ಮೂರೇ ವರ್ಷಗಲ್ಲಿ ಅತ್ಯಂತ ಕಡಿಮೆ ಅವಧಿಯಲ್ಲಿ 25,000 ಕ್ಕೂ ಅಧಿಕ ಹೊಸ ಶಾಲಾ ಕೊಠಡಿಗಳನ್ನು ಕಾಣಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಮಂಗಳವಾರ ಹಾವೇರಿ ಜಿಲ್ಲೆ ಸ್ವಕ್ಷೇತ್ರ ಶಿಗ್ಗಾವಿ ವ್ಯಾಪ್ತಿಯ ಕೋಣನಕೇರಿಯಲ್ಲಿ ಕರ್ನಾಟಕ ಮಾದರಿ ಶಾಲೆಗಳ ಮಾರ್ಗದರ್ಶಿ ಕಾರ್ಯಕ್ರಮದಡಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ವಿಜ್ಞಾನ ಪ್ರಯೋಗಾಲಯ ಉದ್ಘಾಟಿಸಿರು. ವಿವೇಕ ಯೋಜನೆಯಡಿ ಶಾಲಾ ಕೊಠಡಿ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವರಿಸಿ ಅವರು ಮಾತನಾಡಿದರು.

ಶಿಗ್ಗಾವಿಯಲ್ಲಿ ಸಾರ್ವಜನಿಕ ಸಹಭಾಗಿತ್ವದಲ್ಲಿ ಪ್ರಸ್ತುತ ವರ್ಷ 151 ಶಾಲಾ ಕೊಠಡಿ ನಿರ್ಮಾಣ ಮಾಡಲಾಗುತ್ತಿದೆ. ಮುಂದಿನ ಮೂರು ವರ್ಷಗಳ ಅವಧಿಯಲ್ಲಿ 500 ಶಾಲಾ ಕೊಠಡಿ ಇಲ್ಲಿ ತಲೆ ಎತ್ತಲಿವೆ. ಇದೇ ವರ್ಷ ಆಗಸ್ಟ್ 15ರ ಒಳಗಾಗಿ ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಶೌಚಾಲಯ ನಿರ್ಮಿಸಲು 280 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ.
ಅಟಲ್ ಟಿಕರಿಂಗ್ ಮಾದರಿಯಲ್ಲಿ ರಾಜ್ಯದಲ್ಲಿ ಟಿಕರಿಂಗ್ ಲ್ಯಾಬ್ ನಿರ್ಮಿಸಲು ಅನುದಾನ ನೀಡಲಾಗಿದೆ. ಶಿಗ್ಗಾಂವಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಈ ವರ್ಷದ ಬಜೆಟ್‌ನಲ್ಲಿ ಹೊಸ 10 ಪಿಯುಸಿ ಕಾಲೇಜು ಮಂಜೂರು ಮಾಡಲಾಗಿದೆ. ಈ ಕಾಲೇಜುಗಳಲ್ಲಿ ಕಡ್ಡಾಯವಾಗಿ ವಿಜ್ಞಾನ ವಿಷಯ ಭೋಧನೆ ಮಾಡಲು ಸೂಚನೆ ನೀಡಲಾಗಿದೆ. ಜಿಂದಾಲ ಕಂಪನಿಯ ಸಹಭಾಗಿತ್ವದಲ್ಲಿ ಕ್ಷೇತ್ರದಲ್ಲಿ 10 ಶಾಲೆಗಳ ಶೈಕ್ಷಣಿಕ ಸುಧಾರಣೆ ಮಾಡಲಾಗುತ್ತಿದೆ ಎಂದು ಹೇಳಿದರು.

ಬಿಲ್ ಆಂಡ್ ಮಿಲಿಂಡಾ ಗೇಟ್ಸ್ ಸಂಸ್ಥೆಯೊಂದಿಗೆ ರಾಜ್ಯದ ನಾಲ್ಕು ಜಿಲ್ಲೆಗಳ ಹಾವೇರಿ, ದಾವಣಗೆರೆ, ತುಮಕೂರು ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಕರ್ನಾಟಕ ಮಾದರಿ ಶಾಲೆಗಳ ಮಾರ್ಗದರ್ಶಿ ಕಾರ್ಯಕ್ರಮ ಯಶಸ್ವಿಯಾಗಿ ಜಾರಿಗೊಳ್ಳುತ್ತಿದೆ. ನಮ್ಮ ಶೈಕ್ಷಣಿಕ ಚಿಂತನೆಯಲ್ಲಿ ದೊಡ್ಡ ಬದಲಾವಣೆ ತರಲಾಗಿದೆ. ಕರ್ನಾಟಕದ ಆರೋಗ್ಯ ಮತ್ತ ಶಿಕ್ಷಣ ವಲಯದಲ್ಲಿ ಬಹುದೊಡ್ಡ ಬಸಲಾವಣೆ ಮಾಡಲಾಗಿದೆ. ನಾವು ಮಂಡಿಸಿದ ಈ ಹಿಂದಿನ ಎರಡು ಬಜೆಟ್ ನಲ್ಲಿ ಆರೋಗ್ಯ ವಲಯಕ್ಕೆ ಶೇಕಡಾ 11 ಮತ್ತು ಶಿಕ್ಷಣ ವಲಯಕ್ಕೆ ಶೇಕಡಾ 12 ರಷ್ಟು ಅನುದಾನ ಒದಗಿಸಿದ್ದೇನೆ ಎಂದು ತಿಳಿಸಿದರು.












Click it and Unblock the Notifications