ಹಾವೇರಿ: ಸಿಎಂ ಬಸವರಾಜ ಬೊಮ್ಮಾಯಿ ತವರು ಜಿಲ್ಲೆಯಲ್ಲಿ ಬಿಜೆಪಿ ಭಾರೀ ಮುಖಭಂಗ
2023ರ ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಇಂದು (ಶನಿವಾರ, ಮೇ 13) ಪ್ರಕಟವಾಗುತ್ತಿದ್ದು, ಕಾಂಗ್ರೆಸ್‌ನ ಅಭ್ಯರ್ಥಿಗಳು ರಾಜ್ಯಾದ್ಯಂತ ಮುನ್ನಡೆ ಕಾಯ್ದುಕೊಂಡಿದ್ದರೆ, ಬಿಜೆಪಿ ಅಭ್ಯರ್ಥಿಗಳು ಸತತವಾಗಿ ಹಿನ್ನಡೆ ಅನುಭವಿಸುತ್ತಿದ್ದಾರೆ.
ಶನಿವಾರ ಬೆಳಗ್ಗೆ 8 ಗಂಟೆಗೆ ಆರಂಭವಾದ ಮತ ಎಣಿಕೆ ಪ್ರಕ್ರಿಯೆಯಲ್ಲಿ ಮೊದಲು ಅಂಚೆ ಮತಗಳನ್ನು ಎಣಿಸಲಾಯಿತು. ನಂತರ 9.30 ಗಂಟೆಯವರೆಗೆ ಆರಂಭಿಕ ಸುತ್ತುಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಭಾರೀ ಮುನ್ನಡೆ ಪಡೆದುಕೊಂಡಿದ್ದಾರೆ.

ಇನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತವರು ಹಾವೇರಿ ಜಿಲ್ಲೆಯಲ್ಲಿ ಬಿಜೆಪಿಗೆ ಹಿನ್ನಡೆಯಾಗಿದ್ದರೆ, ಕಾಂಗ್ರೆಸ್ ಅಭ್ಯರ್ಥಿಗಳು ಅಧಿಕ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಹಾವೇರಿ ಜಿಲ್ಲೆಯ ಒಟ್ಟು 6 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು 5 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದರೆ, ಬಿಜೆಪಿ ಕೇವಲ 1 ಕ್ಷೇತ್ರದಲ್ಲಿ ಮುನ್ನಡೆ ಪಡೆದುಕೊಂಡಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪರ್ಧಿಸಿರುವ ಹಾವೇರಿ ಜಿಲ್ಲೆಯ ಶಿಗ್ಗಾಂವಿ ಕ್ಷೇತ್ರವನ್ನು ಹೊರತುಪಡಿಸಿ, ರಾಣೇಬೆನ್ನೂರು, ಹಿರೇಕೆರೂರು, ಬ್ಯಾಡಗಿ, ಹಾವೇರಿ, ಹಾನಗಲ್ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ.












Click it and Unblock the Notifications