ಹಾವೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಷ್ಟ್ರೀಯ ಹೆದ್ದಾರಿ-4ರಲ್ಲಿ KSRTC ಬಸ್ ಪಲ್ಟಿ; ಉಳಿಯಿತು 35ಕ್ಕೂ ಹೆಚ್ಚು ಪ್ರಯಾಣಿಕರ ಜೀವ

|
Google Oneindia Kannada News

ಹಾವೇರಿ, ಮಾರ್ಚ್ 18: ಬ್ರೇಕ್ ಫೇಲ್ ಆಗಿ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾದ ಪರಿಣಾಮ 35 ಪ್ರಯಾಣಿಕರಿಗೆ ಗಾಯಗಳಾದ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಛತ್ರ ಗ್ರಾಮದ ಬಳಿ ನಡೆದಿದೆ.

ಛತ್ರ ಗ್ರಾಮದ ಬಳಿ ಇರುವ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ದುರ್ಘಟನೆ ನಡೆದಿದೆ. ಗಾಯಗೊಂಡಿರುವ 35 ಪ್ರಯಾಣಿಕರನ್ನು ಬ್ಯಾಡಗಿ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅಂಬುಲೆನ್ಸ್ ಇಲ್ಲದೆ ಗಾಯಾಳುಗಳು ಕೆಲಕಾಲ ಪರದಾಡುವ ಪರಸ್ಥಿತಿ ನಿರ್ಮಾಣವಾಗಿತ್ತು. ಬ್ಯಾಡಗಿ ಡಿಪೋಗೆ ಸೇರಿದ ಬಸ್ ಆಗಿದ್ದು, ಗದಗನಿಂದ ರಾಣೇಬೆನ್ನೂರಿಗೆ ತೆರಳುತ್ತಿದ್ದ ವೇಳೆ ಬಸ್ ಬ್ರೇಕ್ ಫೇಲ್ ಆಗಿ ಈ ದುರ್ಘಟನೆ ಸಂಭವಿಸಿದೆ.

KSRTC Bus Accident On NH-4 Near Chatra; 35 Passengers Injured

Recommended Video

Modi's best 3 advise to avoid covid 19 | Oneindia Kannada

ಬಸ್‌ನಲ್ಲಿ ದೊಡ್ಡದಾಗಿ ಶಬ್ದ ಬಂದ ಕೂಡಲೇ ಚಾಲಕ ಬಸ್ ನಿಲ್ಲಿಸಲು ಪ್ರಯತ್ನಿಸಿದ್ದಾನೆ. ಈ ವೇಳೆ ಬ್ರೇಕ್ ಫೇಲ್ ಆಗಿದ್ದು, ತುಳಿದು ನಿಲ್ಲಿಸಲು ಪ್ರಯತ್ನಿಸಿದಾಗ ಬಸ್ ರಸ್ತೆಯ ಪಕ್ಕಕ್ಕೆ ಪಲ್ಟಿಯಾಗಿದೆ. ವಿಷಯ ತಿಳಿಯುತ್ತಿದ್ದಂತೆ ಬ್ಯಾಡಗಿ ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಬ್ಯಾಡಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

English summary
KSRTC Bus Accident in NH-4 near Chatra village of Badagi Taluk in Haveri district, injured 35 passengers.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X