ಹಾವೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಮುಂದುವರಿದ ಪಕ್ಷಾಂತರ ಪರ್ವ

|
Google Oneindia Kannada News

ಹಾವೇರಿ, ಏಪ್ರಿಲ್ 15: ದೇಶದ ಎಲ್ಲಾ ವರ್ಗದ ಜನರ ಅಭಿವೃದ್ದಿಗೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಹೆಚ್ ಕೆ ಪಾಟೀಲ ಮನವಿ ಮಾಡಿದ್ದಾರೆ.

ಹಾವೇರಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಲಕ್ಷ್ಮೇಶ್ವರದಲ್ಲಿಂದು ಬಿಜೆಪಿ ಯ ಯುವ ಮುಖಂಡರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಮಾತನಾಡಿದರು.

Lok Sabha Elections 2019: HK Patil campaigns for Haveri candidate D R Patil

ದೇಶದಲ್ಲಿ ಕೋಮುವಾದಿಗಳ ಸಂಸ್ಕೃತಿ ಹೆಚ್ಚಾಗುತ್ತಿದೆ. ಯಾವುದೇ ಭರವಸೆಗಳನ್ನು ಈಡೇರಿಸದ ಪ್ರಧಾನಿ ಮೋದಿ, ವಿಪಕ್ಷಗಳ ಮೇಲೆ ವಾಗ್ದಾಳಿ ನಡೆಸುವುದರಲ್ಲೆ ಮಗ್ನರಾಗಿದ್ದಾರೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಕಳೆದ 65 ವರ್ಷಗಳ ಕಾಂಗ್ರೆಸ್ ತನ್ನ ಆಡಳಿತದಲ್ಲಿ ಸಮಾಜದ ಎಲ್ಲಾ ವರ್ಗಗಳ ಅಭಿವೃದ್ದಿಗೆ ತನ್ನದೇ ಆದ ವಿಶಿಷ್ಟ ಕೊಡುಗೆಗಳನ್ನು ನೀಡಿದೆ.

ಯಾವುದೆ ಧರ್ಮ ಅಥವಾ ಜಾತಿ ಆಧಾರದ ಮೇಲೆ ಮತ ಕೇಳದೆ, ಎಲ್ಲಾ ವರ್ಗದ ಅಭಿವೃದ್ದಿಗೂ ಬೇಕಾಗಿರುವ ಯೋಜನೆಗಳನ್ನು ಅನುಷ್ಠಾನಗೊಳಿಸಿ ಮತ ಕೇಳಿದೆ. ಇಂತಹ ಅಭಿವೃದ್ದಿ ಪರ ಪಕ್ಷವನ್ನು ಮೆಚ್ಚಿ ಹಲವಾರು ಜನರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿರುವುದು ಸಂತಸದ ವಿಷಯವಾಗಿದೆ.

ಅಮಿತ್ ಶಾ ಮೇಲೆ ನೋಟು ವಿನಿಮಯ ಆರೋಪ ಹೊರೆಸಿದ ಪಾಟೀಲ್ ಅಮಿತ್ ಶಾ ಮೇಲೆ ನೋಟು ವಿನಿಮಯ ಆರೋಪ ಹೊರೆಸಿದ ಪಾಟೀಲ್

ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಅನೇಕ ಅಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳಬೇಕಾಗಿದೆ. ಇದಕ್ಕಾಗಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಿ ಆರ್ ಪಾಟೀಲ್ ಅವರಿಗೆ ಮತ ನೀಡುವಂತೆ ಮನವಿ ಮಾಡಿದರು. ಇಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರು ಗದಗ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಚುನಾವನಾ ಪ್ರಚಾರ ನಡೆಸಿದರು.

English summary
Elections 2019: KPCC campaign Committee chairman HK Patil campaigned for Gadag-Haveri candidate D.R Patil and he also welcomed local BJP leaders who joined Congress.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X