ಹಾವೇರಿ: ಪಟಾಕಿ ದಾಸ್ತಾನು ಗೋದಾಮಿಗೆ ಬೆಂಕಿ, ಸುಟ್ಟು ಕರಕಲಾದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು

ಹಾವೇರಿ, ಆಗಸ್ಟ್‌, 29: ಪಟಾಕಿ ದಾಸ್ತಾನಿಗೆ ಬೆಂಕಿ ಹತ್ತಿದ ಘಟನೆ ಹಾವೇರಿ ಗ್ರಾಮಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಗಣಪತಿ ಹಬ್ಬದ ಹಿನ್ನೆಲೆ ಪಟಾಕಿಗಳನ್ನು ದೊಡ್ಡ ಮಟ್ಟದಲ್ಲಿ ದಾಸ್ತಾನು ಮಾಡಲಾಗಿತ್ತು. ಹಾವೇರಿ ನಗರ ಹೊರವಲಯದ ಸಾತೇನಹಳ್ಳಿ ಬಳಿ ಕುಮಾರ್​ ಎಂಬುವವರಿಗೆ ಸೇರಿದ ಭೂಮಿಕಾ ಪಟಾಕಿ ಗೋದಾಮಿನಲ್ಲಿ ಸುಮಾರು ಒಂದು ಕೋಟಿಗೂ ಹೆಚ್ಚು ಮೌಲ್ಯದ ಪಟಾಕಿ ದಾಸ್ತಾನು ಮಾಡಲಾಗಿತ್ತು. ಇದೀಗ ಏಕಾಎಕಿ ಅದಕ್ಕೆ ಬೆಂಕಿ ತಗುಲಿದ್ದು, ಅಪಾರ ಪ್ರಮಾಣ ವಸ್ತುಗಳು ಬೆಂಕಿಗಾಹುತಿಯಾಗಿದೆ.

massive-fire-breaks-out

ನಂತರ ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಧಾವಿಸಿದ ಎಂಟು ಆಗ್ನಿಶಾಮಕ ವಾನಗಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ವೇಳೆ ಅದೃಷ್ಟವಶಾತ್​ ಒಳಗಡೆ ಇದ್ದ ಸಿಲಿಂಡರ್ ಹೊರಗಡೆ ತಂದಿದ್ದಕ್ಕೆ ಯಾವುದೇ ಅವಘಡ ಸಂಭವಿಸಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ.

ರೈಲಿನಲ್ಲಿ ಅಗ್ನಿ ಅವಘಡ

ಇನ್ನು ಇತ್ತೀಚೆಗಷ್ಟೇ ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಉದ್ಯಾನ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಅಗ್ನಿ ಅವಘಡ ಸಂಭವಿಸಿತ್ತು. ರೈಲಿನ ಇಂಜಿನ್‌ನಲ್ಲಿ ದಿಢೀರ್ ಕಾಣಿಸಿಕೊಂಡ ಬೆಂಕಿಯಿಂದ ದಟ್ಟ ಹೊಗೆ ಆವರಿಸಿದ್ದು ಪ್ರಯಾಣಿಕರು ಆತಂಕಗೊಂಡಿದ್ದರು.

ತಾಂತ್ರಿಕ ಸಮಸ್ಯೆಯಿಂದ ರೈಲ್ವೆ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಈ ಬೆಂಕಿ ರೈಲಿನ ಎರಡು ಕೋಚ್‌ಗಳಿಗೆ ಆವರಿಸಿತ್ತು. ವಿಷಯ ತಿಳಿಯುತ್ತಿದ್ದಂತೆ ಅಗ್ನಿ ಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದರು. ನಾಲ್ಕೈದು ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದರು. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿರಲಿಲ್ಲ. ಇನ್ನು ಘಟನಾ ಸ್ಥಳಕ್ಕೆ ರೈಲ್ವೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+