ಹಾವೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಚಿವ ಬಿ.ಸಿ ಪಾಟೀಲ್ ಕುಟುಂಬಕ್ಕೂ ತಗುಲಿದ ಕೊರೊನಾ ಸೋಂಕು

|
Google Oneindia Kannada News

ಹಾವೇರಿ, ಜುಲೈ 31: ಕೃಷಿ ಸಚಿವ ಬಿ.ಸಿ ಪಾಟೀಲ್ ಅವರ ಪತ್ನಿ, ಅಳಿಯ ಹಾಗೂ ಅವರ ನಿವಾಸದ ಸಿಬ್ಬಂದಿಗಳನ್ನು ಸೇರಿ ಒಟ್ಟು ಐವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಈ ಕುರಿತು ಟ್ವೀಟ್ ಮಾಡುವ ಮೂಲಕ ಸಚಿವ ಬಿ.ಸಿ ಪಾಟೀಲ್ ಸ್ಪಷ್ಟಪಡಿಸಿದ್ದು, ನನ್ನ ಶ್ರೀಮತಿ, ಅಳಿಯ ಹಾಗೂ ಹಿರೇಕೆರೂರಿನ ನಿವಾಸದ ಸಿಬ್ಬಂದಿ ವರ್ಗ ಸೇರಿದಂತೆ ಒಟ್ಟು ಐದು ಜನರಿಗೆ ಕೊರೊನಾ ವೈರಸ್ ಪಾಸಿಟಿವ್ ಎಂದು ದೃಢಪಟ್ಟಿದೆ.

ವಿಡಿಯೋ ಕಾಲ್ ಮೂಲಕ ಹೆರಿಗೆ ಮಾಡಿದ ಹಾವೇರಿ ಮಹಿಳೆಯರುವಿಡಿಯೋ ಕಾಲ್ ಮೂಲಕ ಹೆರಿಗೆ ಮಾಡಿದ ಹಾವೇರಿ ಮಹಿಳೆಯರು

ಅವರನ್ನು ನಿರ್ದಿಷ್ಟವಾದ ಕೋವಿಡ್ ಕೇರ್ ಸೆಂಟರ್ ಗೆ ಸೇರಿಸಲಾಗಿದ್ದು, ಅವರೆಲ್ಲ ಬೇಗ ಗುಣಮುಖರಾಗಿ ಬರಲಿ ಎಂದು ಪ್ರಾರ್ಥಿಸುತ್ತೇನೆ. ನಿಮ್ಮೆಲ್ಲರ ಹಾರೈಕೆಯೂ ಇರಲಿ ಎಂದು ಕೋರಿದ್ದಾರೆ.

Minister BC Patil Family Members Tested Coronavirus Positive

ಹಾವೇರಿ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಹಿರೇಕೆರೂರು ತಾಲೂಕಿನಲ್ಲಿ ಸಹ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಳವಾಗಿವೆ. ಜಿಲ್ಲೆಯಲ್ಲಿ ಈವರೆಗೆ 935 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಇಂದು ಸಹ 86 ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗುವ ಸಾಧ್ಯತೆ ಇದೆ. ಹಿರೇಕೆರೂರು ತಾಲೂಕಿನಲ್ಲೇ ಒಟ್ಟು 101 ಜನರಿಗೆ ಕೊರೊನಾ ಸೋಂಕು ತಗುಲಿದೆ.

English summary
A total of five people, including Agriculture Minister BC Patil's wife, son-in-law and his staff, have been confirmed Coronavirus infected.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X