ಹಾವೇರಿ: ಅಪ್ರಾಪ್ತ ಬಾಲಕಿ ಮೇಲೆ ನಾಲ್ವರು ಯುವಕರಿಂದ ಅತ್ಯಾಚಾರ
ಹಾವೇರಿ, ಡಿಸೆಂಬರ್ 1 : ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು ಬಳಿಕ ಆಕೆಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಮಾಸನಕಟ್ಟಿ ಗ್ರಾಮದಲ್ಲಿ ನಡೆದಿದೆ.
ಈದ್ ಮಿಲಾದ್ ಹಬ್ಬದ ಪ್ರಯುಕ್ತ ಊಟವಿದೆ ಎಂದು ಬಾಲಕಿಯನ್ನು ನಂಬಿಸಿ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ. ಈ ಕೃತ್ಯದ ಸಂಬಂಧ ನಾಲ್ವರ ವಿರುದ್ಧ ಬಾಲಕಿಯ ತಾಯಿ ಆಡೂರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಯಾಸೀನ್ ನೆಗಳೂರ, ಹಜರತ ಅಲಿ ಮಲ್ಲಿಗಾರ, ಕಾಂತೇಶ ಹೆಳವರ ಮತ್ತು ಸಲೀಂ ಎಂಬುವರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.












Click it and Unblock the Notifications