ಉಕ್ರೇನ್‌ನಲ್ಲಿ ಸಾವನ್ನಪ್ಪಿದ್ದ ನವೀನ್ ಮೃತದೇಹ ಸಿಕ್ಕಿದೆ: ಸಿಎಂ ಬೊಮ್ಮಾಯಿ
ಹಾವೇರಿ, ಮಾರ್ಚ್ 8: ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧದ ವೇಳೆ ರಷ್ಯಾದ ಶೆಲ್ ದಾಳಿಗೆ ಸಿಲುಕಿ ಸಾವನ್ನಪ್ಪಿದ್ದ ಕರ್ನಾಟಕದ ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲ್ಲೂಕಿನ ಚಳಗೇರಿಯ ನವೀನ್ ಮೃತದೇಹ ಸಿಕ್ಕಿದೆ ಎಂದು ಖುದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಂಗಳವಾರ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಸಿಎಂ ಬೊಮ್ಮಾಯಿ, "ಉಕ್ರೇನ್‌ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಚಳಗೇರಿಯ ವೈದ್ಯಕೀಯ ವಿದ್ಯಾರ್ಥಿ ನವೀನ್ ಮೃತದೇಹ ಸಿಕ್ಕಿದೆ. ಉಕ್ರೇನಿನ ಶವಾಗಾರದಲ್ಲಿ ಮೃತದೇಹ ಇರಿಸಲಾಗಿದೆ. ಯುದ್ಧ ಇನ್ನೂ ನಡೆಯುತ್ತಿದೆ," ಎಂದು ಹೇಳಿದರು.
"ನವೀನ್ ಮೃತ ದೇಹವನ್ನು ತರುವ ಬಗ್ಗೆ ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರ ಜತೆ ಮಾತಾಡಿದ್ದೇನೆ. ರಾಯಭಾರಿ ಕಚೇರಿ ಅಧಿಕಾರಿಗಳ ಜೊತೆ ಸಂಪರ್ಕದಲ್ಲಿದ್ದೇವೆ. ಮೃತದೇಹ ತರುವ ಬಗ್ಗೆ ಮಾತುಕತೆ ನಡೆಸುತ್ತೇವೆ," ಎಂದು ತಿಳಿಸಿದರು.

ಹದಿಮೂರನೇ ದಿನವೂ ಉಕ್ರೇನ್- ರಷ್ಯಾ ಯುದ್ಧ ನಡೆಯುತ್ತಿದೆ. ಜೊತೆಗೆ ಉಕ್ರೇನ್‌ನಲ್ಲಿ ರಷ್ಯಾ ಶೆಲ್ ದಾಳಿ ನಡೆಸುತ್ತಿದೆ. ಅದು ನಿಂತ ಮೇಲೆ ಮೃತ ದೇಹ ತರುವ ಬಗ್ಗೆ ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.
ಸಿಎಂ ಬಸವರಾಜ ಬೊಮ್ಮಾಯಿ ಮಾತ್ರವಲ್ಲದೆ, ಬಿ.ಎಸ್. ಯಡಿಯೂರಪ್ಪ ಸೇರಿದಂತೆ ವಿವಿಧ ರಾಜಕೀಯ ನಾಯಕರು ಚಳಗೇರಿಯ ನವೀನ್ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದರು. ನವೀನ್ ಕುಟುಂಬಸ್ಥರು ಮಾತ್ರ ನವೀನ್ ಮೃತದೇಹವಾದರೂ ಭಾರತಕ್ಕೆ ಮರಳಬೇಕು ಎಂಬ ಇಚ್ಛೆ ವ್ಯಕ್ತಪಡಿಸಿದ್ದಾರೆ. ಆದರೆ, ಅದು ಸಾಧ್ಯವೇ ಇಲ್ಲವೇ ಎಂಬ ಬಗ್ಗೆ ಹಲವು ರಾಜಕಾರಣಿಗಳು ಹೇಳಿಕೆ ನೀಡುತ್ತಿದ್ದರು. ಸರ್ಕಾರ ತನ್ನ ಪ್ರಯತ್ನ ತಾನು ಮಾಡುತ್ತಿದೆ ಎಂದು ಹೇಳುತ್ತಲೇ ಬಂದಿತ್ತು.

ಉಕ್ರೇನ್‌ನಲ್ಲಿ ಮೃತಪಟ್ಟ ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲ್ಲೂಕಿನ ನವೀನ್ ನಿವಾಸಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನೀಡಿ, ನವೀನ್ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದರು. ಜೊತೆಗೆ ನವೀನ್ ತಂದೆಗೆ 25 ಲಕ್ಷ ರೂ. ಪರಿಹಾರ ಚೆಕ್ ನೀಡಿದ್ದರು.
ಉಕ್ರೇನ್ ಹಾಗೂ ರಷ್ಯಾ ನಡುವಿನ ಯುದ್ಧದಲ್ಲಿ ಶೆಲ್ ದಾಳಿಗೆ ಮೃತರಾದ ಚಳಗೇರಿ ಗ್ರಾಮದ ನವೀನ್ ಗ್ಯಾನಗೌಡ್ರ ನಿವಾಸಕ್ಕೆ ಸಿರಿಗೆರೆ ಡಾ. ಶಿವಮೂರ್ತಿ ಶಿವಾಚಾರ್ಯ ಶ್ರೀಗಳು ಭೇಟಿ ನೀಡಿ ನವೀನ್ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸಿ, ಕುಟುಂಬದವರಿಗೆ ಸಾಂತ್ವನ ಮತ್ತು ಧೈರ್ಯ ತುಂಬಿದ್ದಾರೆ.

ಉಕ್ರೇನ್ ದೇಶದ ಕಾರ್ಕಿವ್‌ನಲ್ಲಿ 4ನೇ ವರ್ಷದ ವೈದ್ಯಕೀಯ ಶಿಕ್ಷಣ ವ್ಯಾಸಂಗ ಮಾಡುತ್ತಿದ್ದ ನವೀನ್ ಗ್ಯಾನಗೌಡ್ರ, ದಿನಸಿ ಸೇರಿದಂತೆ ಅಗತ್ಯ ವಸ್ತುಗಳನ್ನು ತರಲು ಹೋಗಿದ್ದ ಸಂದರ್ಭದಲ್ಲಿ ರಷ್ಯಾ ಸೇನೆಯ ಶೆಲ್ ದಾಳಿಗೆ ಬಲಿಯಾಗಿದ್ದರು.
-
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
PUC Results: 2026ರ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
Rain in Karnataka: ಕರ್ನಾಟಕದ ಕರಾವಳಿಯಲ್ಲಿ ಭಾರೀ ಬಿಸಿಲು; ಬೆಂಗಳೂರು ಸೇರಿ ಈ ಭಾಗಗಳಲ್ಲಿ ಮಳೆ: ಐಎಂಡಿ -
Election Commission: ಚುನಾವಣೆ ಸಮಯದಲ್ಲೇ ಭಾರತೀಯ ಚುನಾವಣಾ ಆಯೋಗದ ಟ್ವೀಟ್ ಎಡವಟ್ಟು, ಬಿಜೆಪಿ ಪರ ಎಂದ ವಿರೋಧ ಪಕ್ಷಗಳು -
Dhurandhar 2: ದುರಂಧರ್ 2 ಸಿನಿಮಾ: ಬಾಕ್ಸ್ ಆಫೀಸ್ನಲ್ಲಿ 1,000 ಕೋಟಿ ದಾಖಲೆಯ ನಡುವೆ ಹೊಸ ಸಂಕಷ್ಟ -
Zombis Drug: ಬೆಂಗಳೂರಲ್ಲಿ ಜಾಂಬಿ ಡ್ರಗ್ಸ್ ಸೇವಿಸಿ ಯುವಕನ ವಿಚಿತ್ರ ವರ್ತನೆ: ನಟ ದುನಿಯಾ ವಿಜಯ್ ವಿಡಿಯೋ ವೈರಲ್ -
Assembly Elections 2026: ಕೇರಳಂ, ಅಸ್ಸಾಂ, ಪುದುಚೇರಿ ವಿಧಾನಸಭೆ ಚುನಾವಣೆ ಮತದಾನ ಪ್ರಾರಂಭ -
Karnataka 2nd Puc Results 2026: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ ಯಾವ ಜಿಲ್ಲೆ ಎಷ್ಟನೇ ಸ್ಥಾನ?












Click it and Unblock the Notifications