ಹಾವೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಲಾಕ್ ಡೌನ್ ಪಾಲಿಸಿ ಎಂದಿದ್ದಕ್ಕೆ ಪೊಲೀಸರ ಮೇಲೆ ಹಲ್ಲೆ

|
Google Oneindia Kannada News

ಹಾವೇರಿ, ಏಪ್ರಿಲ್ 16: ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಬುದ್ಧಿವಾದ ಹೇಳಿದ್ದಕ್ಕೆ ಪೊಲೀಸರ ಮೇಲೆಯೇ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಸವಣೂರು ತಾಲ್ಲೂಕಿನ ತೆಗ್ಗಿಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮನೆಯ ಎದುರು ಗುಂಪಾಗಿ ಕೂತಿದ್ದ 50 ಕ್ಕೂ ಹರಚ್ಚು ಮಂದಿಗೆ ಕೊರೊನಾ ವೈರಸ್ ಹಿನ್ನೆಲೆಯಲ್ಲಿ, ಗುಂಪು ಗುಂಪಾಗಿ ಕುಳಿತುಕೊಳ್ಳಬೇಡಿ ಎಂದು ಪೊಲೀಸರು ಹೇಳಿದ್ದಾರೆ.

ಅಷ್ಟಕ್ಕೇ ಐವರು ಪೊಲೀಸರು ಹಾಗೂ ಒಬ್ಬ ಗೃಹ ರಕ್ಷಕ ದಳದ ಸಿಬ್ಬಂದಿ ಮೇಲೆ ಮಾಡಲಾಗಿದೆ. ಆರೂ ಜನ ಪೊಲೀಸರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಸಂಬಂಧ ಒಟ್ಟು ಹತ್ತು ಜನ ಆರೋಪಿಗಳನ್ನು ಬಂಧಿಸಲಾಗಿದೆ.

People Attacked on police In Savanuru

ಬೀದರ್ ಜಿಲ್ಲೆಯಲ್ಲಿ ಆಶಾ ಕಾರ್ಯಕರ್ತೆಯರಿಗೆ ನಿಂದನೆ

ಹೋಮ್ ಕ್ವಾರಂಟೈನ್ ಉಲ್ಲಂಘಿಸಿದ್ದಲ್ಲದೇ ಇದನ್ನು ಪ್ರಶ್ನಿಸಿದ ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಸಹಾಯಕಿಯರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ ನಾಲ್ವರ ವಿರುದ್ಧ ಬೀದರ್ ಜಿಲ್ಲೆಯ ಕಮಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಕೆಲ ದಿನಗಳ ಹಿಂದೆ ಹೈದ್ರಾಬಾದ್ ನಿಂದ ಸಾವಳಿ ಗ್ರಾಮಕ್ಕೆ ಆಗಮಿಸಿದ್ದ ದಂಪತಿಯ ಆರೋಗ್ಯ ತಪಾಸಣೆ ನಡೆಸಿ, ಕೈಗೆ ಮುದ್ರೆ ಹಾಕಿ ಗೃಹ ಬಂಧನದ್ಲಿಡಲಾಗಿತ್ತು.

ಆದರೂ ಹೊರಗಡೆ ಓಡಾಡುತ್ತಿದ್ದರು. ಆಶಾ ಕಾರ್ಯಕರ್ತೆಯರು ಹೊರಗಡೆ ಬರದಂತೆ ತಿಳಿಸಿದ್ದಾರೆ. ಈ ವೇಳೆ ಕ್ವಾರಂಟೈನ್ ಕುಟುಂಬಸ್ಥರು ಆರೋಗ್ಯ ಸಿಬ್ಬಂದಿಯನ್ನು ನಿಂದಿಸಿದ್ದಾರೆ.

English summary
Deadly assault on the police Reported in Teggihalli village in Savannur taluk.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X