Get Updates
Get notified of breaking news, exclusive insights, and must-see stories!

NWKRTC: ಪ್ರಯಾಣಿಕರಿದ್ದ ಬಸ್ ನಿಲ್ಲಿಸಿ ಚಾಲಕ ನಮಾಜ್! ಆಕ್ಷೇಪಿಸಿದ ರಾಮಲಿಂಗಾ ರೆಡ್ಡಿ ಕೊಟ್ಟ ಸೂಚನೆಯೇನು?

ಹಾವೇರಿ/ಬೆಂಗಳೂರು, ಮೇ 01: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ವ್ಯಾಪ್ತಿಯಲ್ಲಿ ಇತ್ತೀಚೆಗೆ ಬಸ್‌ಗಳಲ್ಲಿ ಅಪರೂಪದ ಪ್ರಕರಣಗಳು ನಡೆಯುತ್ತಿವೆ. ಇತ್ತೀಚೆಗೆ ಮಂಗಳೂರು ಬಸ್ ನಿರ್ವಾಹಕ ಮಹಿಳೆ ಮೇಲಿನ ಲೈಂಗಿಕ ಕಿರುಕುಳ ಅಪರಾಧ ಕೃತ್ಯಕ್ಕೆ ಸಂಬಂಧಿಸಿದಂತೆ ಸುದ್ದಿಯಾಗಿದ್ದ ಸಾರಿಗೆ ಇಲಾಖೆ ಇದೀಗ ಚಾಲಕ ಕಂ-ನಿರ್ವಾಹಕರೊಬ್ಬರು ಪ್ರಯಾಣಿಕರಿದ್ದ ಬಸ್ ಅನ್ನು ಮಾರ್ಗ ಮಧ್ಯೆ ನಿಲ್ಲಿಸಿ ನಮಾಜ್ ಮಾಡಿದ ಘಟನೆಗೆ ಸಾಕ್ಷಿಯಾಗಿದೆ. ಮೊನ್ನೆ ಏಪ್ರಿಲ್ 29ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಶಿಸ್ತು ಕ್ರಮಕ್ಕೆ ಸೂಚನೆ ನೀಡಿದ್ದಾರೆ.

ಏಪ್ರಿಲ್ 29 ರಂದು ಸಂಜೆ ವಾಯವ್ಯ ರಸ್ತೆ ಸಾರಿಗೆ ಸಂಸ್ಥೆ (NWKRTC) ಬಸ್ ಹುಬ್ಬಳ್ಳಿಯಿಂದ ಹಾವೇರಿಗೆ ಕಾರ್ಯಾಚರಣೆ ಮಾಡುತ್ತಿತ್ತು. ಈ ವಾಯವ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ, ಚಾಲಕ-ಕಂ-ನಿರ್ವಾಹಕಮಾರ್ಗ ಮಧ್ಯೆ ಬಸ್ ನಿಲ್ಲಿಸಿ ನಮಾಜ್ ಮಾಡಿದ್ದಾರೆ.

Ramalinga Reddy Instruction to Action Against Driver Who Stopped Bus for Namaz video viral

ಬಸ್‌ನಲ್ಲಿದ್ದ ಪ್ರಯಾಣಿಕರೊಬ್ಬರು ಚಾಲಕ ಬಸ್ ಸೈಡ್‌ಗೆ ಹಾಕಿ ನಮಾಜ್ ಮಾಡಿದ ವಿಡಿಯೋ ಅನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋ ಹರಿದಾಡುತ್ತಿದ್ದಾರೆ. ಸರ್ಕಾರಿ, ಸೇವೆ, ಸಾರ್ವಜನಿಕ ಸೇವೆ ದೇವರಿಗೆ ಸಮಾನ ಎನ್ನುತ್ತಾರೆ. ಇಲ್ಲಿ ನೋಡಿದರೆ ಬಸ್ ನಿಲ್ಲಿಸಿ ಧಾರ್ಮಿಕ ಆಚರಣೆ ಮಾಡಿದ್ದು ಎಷ್ಟು ಸರಿ ಎಂಬ ಚರ್ಚೆಯು ನೆಟ್ಟಿಗರು ಶುರು ಮಾಡಿದ್ದಾರೆ.

Take a Poll

ಕರ್ತವ್ಯದಲ್ಲಿ ನಿಯಮ ಪಾಲಿಸಿ: ನಮಾಜ್ ಮಾಡಿದ್ದು ಆಕ್ಷೇಪಾರ್ಹ

ಸರ್ಕಾರಿ ಸೇವೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳು ಕೆಲವೊಂದು ನೀತಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಲೇಬೇಕಾಗಿರುತ್ತದೆ. ಪ್ರತಿಯೊಬ್ಬ ವ್ಯಕ್ತಿಗೂ ಧಾರ್ಮಿಕ ಸ್ವಾತಂತ್ರ್ಯದ‌ ಹಕ್ಕಿದೆ. ಹೀಗಿದ್ದರೂ ಸಹ ಸಾರ್ವಜನಿಕ ಸೇವೆಯಲ್ಲಿರುವವರು, ಕರ್ತವ್ಯದ ವೇಳೆ ಹೊರತುಪಡಿಸಿ ತಮ್ಮ‌ ತಮ್ಮ ಧರ್ಮವನ್ನು ಪಾಲಿಸಬಹುದಾಗಿರುತ್ತದೆ. ಆದರೆ, ಕರ್ತವ್ಯದ ಸಮಯದಲ್ಲಿ ಮಾರ್ಗ ಮಧ್ಯದಲ್ಲಿ ಬಸ್ ನಿಲ್ಲಿಸಿ, ಬಸ್ ನಲ್ಲಿ ಪ್ರಯಾಣಿಕರು‌ ಇದ್ದಾಗ್ಯೂ ಸಹ ನಮಾಜ್ ಮಾಡಿರುವುದು ಆಕ್ಷೇಪಾರ್ಹ ಎಂದು ರಾಜ್ಯ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಹೇಳಿದ್ದಾರೆ.

ಈ ಕುರಿತ ವಿಡಿಯೋ ನೋಡಿರುವ ಅವರು, ಕೂಡಲೇ ಈ ಬಗ್ಗೆ ತನಿಖೆ ನಡೆಸಬೇಕು. ಸಂಬಂಧಪಟ್ಟ‌ ಸಿಬ್ಬಂದಿಯು ತಪ್ಪಿತಸ್ಥರೆಂದು ಕಂಡುಬಂದಲ್ಲಿ, ಸೂಕ್ತ ಶಿಸ್ತಿನ‌ ಕ್ರಮ ಜರುಗಿಸಲು ಅವರು ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಇಂಥಹ ಘಟನೆ ಮರುಕಳಿಸದಂತೆ ಎಚ್ಚರಿಕೆ ವಹಿಸುವಂತೆ ಅವರು ಎಚ್ಚರಿಕೆ ನೀಡಿದ್ದಾರೆ.

ಮಹಿಳಾ ಪ್ರಯಾಣಿಕಳ ಮೇಲೆ ಲೈಂಗಿಕ ಕಿರುಕುಳ

ಇತ್ತೀಚೆಗೆ ಮಂಗಳೂರಿನಿಂದ ಎಂದಿನಂತೆ ತೆರಳುತ್ತಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಬಸ್‌ನಲ್ಲಿ ನಿರ್ವಾಹಕನು ಸೀಟಿನಲ್ಲೇ ಕೂತು ನಿದ್ದೆಗೆ ಜಾರಿದ್ದ ಮಹಿಳಾ ಪ್ರಯಾಣಿಕಳ ಮೇಲೆ ಲೈಂಗಿಕ ದೌರ್ಜನ್ಯ ಮಾಡಿದ್ದ. ಮಹಿಳೆ ಖಾಸಗಿ ಅಂಗ ಮುಟ್ಟಲು ಯತ್ನಿಸಿದ ವಿಡಿಯೋ ಸಹ ಪ್ರಯಾಣಿಕರು ಸೆರೆ ಹಿಡಿದಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದ ಕ್ರಮ ಕೈಗೊಂಡ ರಾಮಲಿಂಗಾ ರೆಡ್ಡಿ ಅವರು ತನಿಖೆ ನಡೆಸುವಂತೆ ಸೂಚಿಸಿದರಲ್ಲದೇ, ಆ ತಪ್ಪಿತಸ್ಥ ನಿರ್ವಾಹಕನ ವಜಾಗೊಳಿಸುವಂತೆ ಅವರು ಆದೇಶಿಸಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+