ರಾಜ್ಯ ಹೆದ್ದಾರಿ ಅಗಲೀಕರಣ; ಧರೆಗುರುಳಿದ ಶತಮಾನದ ಮರಗಳು
ರಾಣೆಬೆನ್ನೂರು, ಜನವರಿ 28: ರಾಜ್ಯ ಹೆದ್ದಾರಿ ಅಗಲೀಕರಣದ ಹಿನ್ನೆಲೆಯಲ್ಲಿ ರಸ್ತೆಯ ಬದಿಯಲ್ಲಿ ಬೆಳೆದು ನಿಂತಿದ್ದ ಶತಮಾನದ ನೂರಾರು ಮರಗಳನ್ನು ಕಡಿಯಲಾಗಿದೆ. ಒಂದು ಕಡೆ ಸರ್ಕಾರ ಅರಣ್ಯ ಕಾಪಾಡಬೇಕು, ಸಸ್ಯಗಳನ್ನು ನೆಡಬೇಕು ಎಂದು ಹೇಳುತ್ತಿದ್ದರೆ, ಇತ್ತ ಅದೇ ಸರ್ಕಾರ ರಸ್ತೆ ಅಗಲೀಕರಣ ನೆಪದಲ್ಲಿ ಮರಗಳಿಗೆ ಕೊಡಲಿ ಏಟು ನೀಡಿದೆ.
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಮಾರ್ಗವಾಗಿ ತೆರಳುವ ಸಮ್ಮಸಗಿ-ಬಿಳಗಿರಿರಂಗನಬೆಟ್ಟ ರಾಜ್ಯ ಹೆದ್ದಾರಿ ಅಗಲೀಕರಣದ ಹಿನ್ನೆಲೆಯಲ್ಲಿ ರಾಣೇಬೆನ್ನೂರು ತಾಲ್ಲೂಕಿನ ದೇರವರಗುಡ್ಡ ಹತ್ತಿರದ ರಸ್ತೆಯ ಬದಿಯಲ್ಲಿದ್ದ ನೂರಾರು ಗಿಡಗಳನ್ನು ಧರೆಗುರುಳಿಸಲಾಗಿದೆ.
ರಾಣೇಬೆನ್ನೂರು ಮಾರ್ಗವಾಗಿ ದೇವರಗುಡ್ಡ, ಹೊನ್ನತ್ತಿ, ಗುತ್ತಲ ಹಾಗೂ ಮೈಲಾರ ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಈ ರಸ್ತೆಯಲ್ಲಿ ಗಿಡಗಳನ್ನು ಹಲವು ಸುಮಾರು ವರ್ಷಗಳ ಹಿಂದೆ ನೆಡಲಾಗಿತ್ತು.

ಇವುಗಳಿಂದ ದೇವರಗುಡ್ಡ, ಹೊನ್ನತ್ತಿ ಹಾಗೂ ಮೈಲಾರಲಿಂಗೇಶ್ವರ ದೇವಸ್ಥಾನಗಳಿಗೆ ಹೋಗುವ ಭಕ್ತರು ಮರಗಳ ಕೆಳಗೆ ವಿಶ್ರಾಂತಿಗೆ ನಿಲ್ಲುತ್ತಿದ್ದರು. ಆದರೆ ಈಗ ರಸ್ತೆ ನಿರ್ಮಾಣದ ನೆಪದಲ್ಲಿ ನೂರಾರು ಗಿಡಗಳನ್ನು ಕಡಿಯುವ ಮೂಲಕ ರಸ್ತೆಯ ಪಕ್ಕದಲ್ಲಿ ನೆರಳು ಕಾಣದಾಗಿದೆ. ಈ ರೀತಿಯಾಗಿ ಪರಿಸರವನ್ನು ಹಾಳು ಮಾಡುತ್ತಿರುವ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಈಗಾಗಲೇ ಹಲವು ಮರಗಳನ್ನು ಕಡಿದು ಸಾಗಿಸಲಾಗಿದ್ದು, ಉಳಿದ ಮರಗಳನ್ನು ಸ್ಥಳಾಂತರ ಅಥವಾ ಮರಗಳನ್ನು ಮಧ್ಯ ಭಾಗದಲ್ಲಿ ಬರುವ ರೀತಿಯಾಗಿ ಮಾಡಬೇಕು ಎಂದು ಕೆಲ ಪರಿಸರ ಪ್ರೇಮಿಗಳು ಸಾಮಾಜಿಕ ಜಾಲತಾಣದಲ್ಲಿ ಮನವಿ ಮಾಡುತ್ತಿದ್ದಾರೆ. ಆದರೆ ಈಗಾಗಲೇ ಮರಗಳನ್ನು ಗುತ್ತಿಗೆ ತೆಗೆದುಕೊಂಡು ಸರ್ಕಾರಕ್ಕೆ ಹಣ ನೀಡಿ ತೆರವು ಮಾಡಲಾಗುತ್ತಿದೆ ಎಂದು ರಸ್ತೆ ಉಸ್ತುವಾರಿ ಎಂಜಿನಿಯರ್ ಹೇಳಿದ್ದಾರೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications