ಹಾವೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪಡಿತರ ದಾಸ್ತಾನಿಗೆ ಪ್ರತ್ಯೇಕ ಗೋಡೌನ್: ಆಹಾರ ಸಚಿವ

|
Google Oneindia Kannada News

ಹಾವೇರಿ, ಎಪ್ರಿಲ್ 29: ಹಾವೇರಿ ನಗರದಲ್ಲಿರುವ ಕೆ.ಎಫ್.ಸಿ.ಎಸ್.ಸಿ. ಗೋಡೌನ್‍ಗೆ ಭೇಟಿ ನೀಡಿದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಖಾತೆ ಸಚಿವರಾದ ಕೆ.ಗೋಪಾಲಯ್ಯ ಅವರು ಪಡಿತರ ಅಕ್ಕಿ ಹಾಗೂ ತೊಗರಿಬೇಳೆ ದಾಸ್ತಾನು ಪರಿಶೀಲನೆ ನಡೆಸಿದರು.

Recommended Video

BC Patil remembers his good old days at Hiriyuru | BC Patil | Hiriyur | Chitradurga

ಕರೋನಾ ಲಾಕ್‌ಡೌನ್ ಹಿನ್ನೆಲೆಯಲ್ಲಿ ಪಡಿತರದಾರರಿಗೆ ಆಹಾರ ಸಾಮಗ್ರಿಗಳ ವಿತರಣೆ ಕುರಿತಂತೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪರಿಶೀಲನಾ ಸಭೆ ನಡೆಸಿದ ನಂತರ, ಅಕ್ಕಿ ಮತ್ತು ತೊಗರಿಬೇಳೆಯ ಗುಣಮಟ್ಟ ಕುರಿತಂತೆ ಖುದ್ದಾಗಿ ಪರಿಶೀಲಿಸಲು ಗೋಡೌನ್‍ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಆಹಾರ ಇಲಾಖೆಯ ಪಡಿತರ ದಾಸ್ತಾನಿಗಾಗಿ ಪ್ರತ್ಯೇಕವಾದ ಗೋಡೌನ್ ನಿರ್ಮಾಣದ ಅವಶ್ಯಕತೆ ಇದ್ದು, ಕನಿಷ್ಟ ಐದಾರು ಎಕರೆ ಭೂಮಿಯನ್ನು ಗುರುತಿಸಿ ಕೊಡುವಂತೆ ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.

Separate Godown For Ration: Karnataka Food Supply Minister

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ, ಹಾವೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ನೆಹರು ಓಲೇಕಾರ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ವಿನೋದಕುಮಾರ ಹೆಗ್ಗಳಗಿ ಇತರರು ಉಪಸ್ಥಿತರಿದ್ದರು.

English summary
Separate Godown For Ration: Karnataka Food Supply Minister K Gopalayya Siad at Haveri.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X