Shiggaon: ಸಮುದಾಯವಾರು ಹಣ ಹಂಚಲು ಕಾಂಗ್ರೆಸ್‌ನಲ್ಲಿಯೇ ಪೈಪೋಟಿ: ಬೊಮ್ಮಾಯಿ
ಹುಬ್ಬಳ್ಳಿ, ನವೆಂಬರ್ 10: ಉಪ ಚುನಾವಣೆಗೆ ದಿನಗಳು ಸಮೀಪಿಸುತ್ತಿದೆ. ಈ ನಡುವೆ ಶಿಗ್ಗಾವಿ ಬಿಜೆಪಿ ಹಾಗೂ ಕಾಂಗ್ರೆಸ್‌ಗೆ ಪ್ರತಿಷ್ಠೆಯ ಕಣವಾಗಿ ಬದಲಾಗುತ್ತಿದೆ. ಹಾಲಿ ಸಿಎಂ ಹಾಗೂ ಮಾಜಿ ಸಿಎಂಗಳ ಮಧ್ಯೆ ಕಣದಲ್ಲಿ ಆರೋಪ, ಪ್ರತ್ಯಾರೋಪಗಳ ಸುರಿಮಳೆ ಕೇಳಿ ಬಂದಿತ್ತು. ವಕ್ಫ್ ಆಸ್ತಿ ವಿಚಾರ ಸದ್ದಿನ ನಡುವೆ, ಕ್ಷೇತ್ರದಲ್ಲಿ ಕಾಂಗ್ರೆಸ್ ಹಣ ಹಂಚಿಕೆಗೆ ಬಗ್ಗೆ ಮಾತನಾಡಿದ್ದ ಸಂಸದ ಬಸವರಾಜ ಬೊಮ್ಮಾಯಿ ಹಾಗೂ ಕಾಂಗ್ರೆಸ್ ಸರ್ಕಾರದ ಮಧ್ಯೆ ನೇರ ಪೈಪೋಟಿ ಉಂಟಾಗಿದೆ.
ಶಿಗ್ಗಾವಿಯಲ್ಲಿ ಸಮುದಾಯವಾರು ಹಣ ಹಂಚಲು ಕಾಂಗ್ರೆಸ್ ಶಾಸಕರ ನಡುವೆ ಪೈಪೋಟಿ ಶುರುವಾಗಿದೆ. ಮುದಾಯ ವಾರು ಶಾಸಕರು ಹಣ ಹಂಚಿಕೆ ಮಾಡುತ್ತಿದ್ದಾರೆ. ಇಷ್ಟು ದೊಡ್ಡ ಪ್ರಮಾಣದಲ್ಲಿ ಹಣ ಹಂಚುವುದನ್ನು ನೋಡಿರಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಬಸವರಾಜ ಬೊಮ್ಮಾಯಿ ಹುಬ್ಬಳ್ಳಿಯಲ್ಲಿ ಸುದ್ದಿಗಾರರೆದು ಆರೋಪಿಸಿದರು.

ಉಪ ಚುನಾವಣೆ ಬಿಜೆಪಿ ವರ್ಸಸ್ ಬೊಮ್ಮಾಯಿ, ಸರ್ಕಾರದಿಂದ ಲೂಟಿ ಮಾಡಿದ ಹಣವನ್ನು ಇಲ್ಲಿ ಹಂಚುತಿದ್ದಾರೆ. ಹಾನಗಲ್ ರೈತ ಆತ್ಮಹತ್ಯೆ ಮಾಡಿಕೊಂಡುವುದನ್ನು ಬಿಜೆಪಿ ರಾಜಕಾರಣ ಮಾಡುತ್ತಿದೆ. ಹೀಗೆಂದು ಕಾಂಗ್ರೆಸ್ ಆರೋಪಿಸಿದ್ದಕ್ಕೆ ಬೊಮ್ಮಾಯಿ ಅವರು ಪ್ರತಿಕ್ರಿಯಿಸಿದರು.
ರೈತನ ಪಹಣಿಯಲ್ಲಿ ವಕ್ಪ್ ಆಸ್ತಿ ಎಂದು ನಮೂದಾಗಿದೆ. ಅದನ್ನು ತೆಗೆಸಲು ಆ ರೈತ ನಾಲ್ಕರಿಂದ ಐದು ವರ್ಷ ಅಲೆದಾಡಬೇಕಾಗುತ್ತದೆ. ಹೋದರೂ ಅಲ್ಲಿ ನ್ಯಾಯ ಸಿಗುವುದಿಲ್ಲ ಎಂದು ಗೊತ್ತಾಗಿ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಕುಟುಂಬದವರು ಇದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಬರೆದುಕೊಟ್ಟಿದ್ದಾರೆ ಎಂದು ತಿಳಿಸಿದರು.
ರೈತರಿಗೆ ನೊಟಿಸ್ ಕೊಟ್ಟಿರುವುದನ್ನು ವಾಪಸ್ ಪಡೆಯುವುದು ನಾಟಕ, ಇದು ಸರ್ಕಾರದ ಕಣ್ಣೊರೆಸುವ ತಂತ್ರ. ಎಲ್ಲಿಯವರೆಗೆ ಗೆಜಟ್ ನೊಟಿಫಿಕೇಶನ್ ವಾಪಸ್ ಪಡೆಯುವುದಿಲ್ಲವೋ ಅಲ್ಲಿಯವರೆಗೆ ರೈತರಿಗೆ ಯಾವುದೇ ಅನುಕೂಲವಾಗುವುದಿಲ್ಲ ಎಂದು ಅವರು ಸರ್ಕಾರದ ವಿರುದ್ಧ ಕಿಡಿ ಕಾರಿದರು.

ಕಾನೂನು ಪ್ರಕಾರ ಪಿಪಿಇ ಕಿಟ್ ಖರೀದಿ
ಬಿಜೆಪಿ ಅವಧಿಯಲ್ಲಿ ಕೊವಿಡ್ ಹಗರಣದ ಕುರಿತ ಆರೋಪಕ್ಕೆ ಉತ್ತರಿಸಿದ ಅವರು,ಕೊವಿಡ್ ಸಂದರ್ಭದಲ್ಲಿ ಪಿಪಿಇ ಕಿಟ್ ಇರಲಿಲ್ಲ. ಜನ ಸಾಯುತ್ತಿದ್ದರು. ಆರೋಗ್ಯ ತುರ್ತುಪರಿಸ್ಥಿತಿ ಇತ್ತು. ವೈದ್ಯರು ಪಿಪಿಇ ಕಿಟ್ ಇಲ್ಲದಿದ್ದರೆ ಕೆಲಸ ಮಾಡಲು ಆಗುತ್ತಿರಲಿಲ್ಲ. ಹೀಗಾಗಿ ಅವು ಎಲ್ಲಿ ಸಿಗುತ್ತವೆ ಎಂದು ತಿಳಿದು ಖರಿದಿ ಮಾಡಿದ್ದೇವು. ರಾಷ್ಟ್ರೀಯ ವಿಪತ್ತು ಅಂತ ಘೊಷಣೆ ಮಾಡಲಾಗಿತ್ತ. ಜನರ ಪ್ರಾಣ ಉಳಿಸಲು ಸರ್ಕಾರ ನಿರ್ಧರಿಸಿ, ನಿಯಮದಂತೆಯೇ ಖರೀದಿ ಮಾಡಲಾಯಿತು ಎಂದು ಅವರು ವಿವರಿಸಿದರು.
ಇದೀಗ ಎಲ್ಲವನ್ನು ಕಾಂಗ್ರೆಸ್ ಚುನಾವಣೆ ಸಂದರ್ಭದಲ್ಲಿ ರಾಜಕೀಯವಾಗಿ ಬಳಕೆ ಮಾಡಿಕೊಳ್ಳಲು ಮುಂದಾಗಿದೆ. ಕಾಂಗ್ರೆಸ್ ಆರೋಪಿಸಿ ಹಗರಣಗಳ ವರದಿ ಸ್ವೀಕರಿಸದಿದ್ದರೂ ಅದರಲ್ಲಿನ ಕೆಲವು ಅಂಶವನ್ನು ಲೀಕ್ ಮಾಡಲಾಗುತ್ತಿದೆ.
ಕಾಂಗ್ರೆಸ್ ನಾಯಕರು ತಮ್ಮ ಮೇಲಿನ ಆರೋಪ ಮರೆಮಾಚಲು ವಿರೊಧ ಪಕ್ಷವನ್ನು ದಮನ ಮಾಡಿ, ವಿರೋಧ ಪಕ್ಷದ ನಾಯಕರ ಧ್ವನಿ ಕುಗ್ಗಿಸುವ ಪ್ರಯತ್ನ ಮಾಡುತ್ತಿದ್ದಾರೆ. ಅದು ಆಗುವುದಿಲ್ಲ ಎಂದು ಅವರು ಎಚ್ಚರಿಕೆ ನೀಡಿದರು.












Click it and Unblock the Notifications