Shiggaon By Election: ಶಿಗ್ಗಾವಿ ಬಂಡಾಯ ಶಮನ, ನಿಟ್ಟುಸಿರು ಬಿಟ್ಟ ಕಾಂಗ್ರೆಸ್ ನಾಯಕರು
ಹಾವೇರಿ, ಅಕ್ಟೋಬರ್ 27: ಕರ್ನಾಟಕದ ಕಾಂಗ್ರೆಸ್ ನಾಯಕರು ನಿಟ್ಟುಸಿರು ಬಿಟ್ಟಿದ್ದಾರೆ. ಹಾವೇರಿ ಜಿಲ್ಲೆಯ ಶಿಗ್ಗಾವಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಪಕ್ಷಕ್ಕೆ ಎದುರಾಗಿದ್ದ ಬಂಡಾಯದ ಬಿಸಿ ತಣ್ಣಗಾಗಿದೆ. ನವೆಂಬರ್ 13ರಂದು ನಡೆಯುವ ಉಪ ಚುನಾವಣೆಗೆ 26 ಅಭ್ಯರ್ಥಿಗಳು ನಾಮಪತ್ರವನ್ನು ಸಲ್ಲಿಕೆ ಮಾಡಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಹಣಾಹಣಿ ಇದೆ. ನವೆಂಬರ್ 23ರಂದು ಫಲಿತಾಂಶ ಪ್ರಕಟವಾಗಲಿದೆ.
ಶಿಗ್ಗಾವಿ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಂಡಾಯ ತಲೆನೋವಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ & ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಈಗ ಬಂಡಾಯವನ್ನು ಶವಮನಗೊಳಿಸುವಲ್ಲಿ ಸಫಲರಾಗಿದ್ದಾರೆ. ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ ಯಾಸೀರ್ ಅಹ್ಮದ್ ಖಾನ್ ಪಠಾಣ.

ಡಿ. ಕೆ. ಶಿವಕುಮಾರ್ ಹೇಳಿಕೆ: ಶಿಗ್ಗಾವಿ ಉಪ ಚುನಾವಣೆಗೆ ಯಾಸೀರ್ ಅಹ್ಮದ್ ಖಾನ್ ಪಠಾಣ ಅಭ್ಯರ್ಥಿ ಎಂದು ಕಾಂಗ್ರೆಸ್ ಪಕ್ಷ ಘೋಷಣೆ ಮಾಡಿತು. ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ ಶುಕ್ರವಾರ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವ ಮೂಲಕ ಬಂಡಾಯದ ಬಾವುಟ ಹಾರಿಸಿದ್ದರು.
ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ. ಕೆ. ಶಿವಕುಮಾರ್ ಅಜ್ಜಂಪೀರ್ ಖಾದ್ರಿ ಜೊತೆ ಸಂಧಾನ ನಡೆಸಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ಸಲ್ಲಿಸಿರುವ ನಾಮಪತ್ರ ವಾಪಸ್ ಪಡೆದು, ಪಕ್ಷದ ಅಧಿಕೃತ ಅಭ್ಯರ್ಥಿ ಪರವಾಗಿ ಕೆಲಸ ಮಾಡಬೇಕು ಎಂದು ಮನವಿ ಮಾಡಿದ್ದಾರೆ ಇದಕ್ಕೆ ಅಜ್ಜಂಪೀರ್ ಖಾದ್ರಿ ಒಪ್ಪಿಯನ್ನೂ ನೀಡಿದ್ದಾರೆ. ಅಕ್ಟೋಬರ್ 28ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ನಾಮಪತ್ರ ವಾಪಸ್ ಪಡೆಯಲು ಅಕ್ಟೋಬರ್ 30 ಕೊನೆಯ ದಿನ.
ಈ ಕುರಿತು ಸದಾಶಿವನಗರದ ನಿವಾಸದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಡಿ. ಕೆ. ಶಿವಕುಮಾರ್ ಮಾಹಿತಿ ನೀಡಿದ್ದಾರೆ. "ಕಳೆದ ಬಾರಿಯ ಚುನಾವಣೆಯಲ್ಲಿ ಅಜ್ಜಂಪೀರ್ ಖಾದ್ರಿ ಅವರಿಗೆ ಟಿಕೆಟ್ ಕೊಡಬೇಕಿತ್ತು. ಆದರೆ ಕಾರಣಾಂತರಗಳಿಂದ ಅದು ಸಾಧ್ಯವಾಗಲಿಲ್ಲ. ಶಿಗ್ಗಾವಿ ಉಪಚುನಾವಣೆಯಲ್ಲಿಯೂ ಅವರ ಹೆಸರು ಪ್ರಮುಖವಾಗಿದ್ದು, ಹೈಕಮಾಂಡ್ ಅವರಿಗೆ ಇದಕ್ಕೆ ಸಮನಾದ ಅಧಿಕಾರವನ್ನು ನೀಡುವ ಭರವಸೆ ನೀಡಿದೆ" ಎಂದರು.
"ಖಾದ್ರಿಯವರು ಪಕ್ಷದ ನಿಲುವಿಗೆ ಬದ್ಧರಾಗಿ ನಮ್ಮ ಜೊತೆ ಇರಲಿದ್ದಾರೆ. ನಾನು ಹಾಗೂ ನಮ್ಮ ಶಾಸಕರು, ಮುಖ್ಯಮಂತ್ರಿಗಳು ಖಾದ್ರಿ ಅವರ ಜೊತೆ ಮಾತನಾಡಿದ್ದು, ಅಕ್ಟೋಬರ್ 30ರಂದು ಅವರು ತಮ್ಮ ಉಮೇದುವಾರಿಕೆಯನ್ನು ಹಿಂಪಡೆದು ಕಾಂಗ್ರೆಸ್ ಅಭ್ಯರ್ಥಿ ಪರ ಕೆಲಸ ಮಾಡಲಿದ್ದಾರೆ" ಎಂದು ಡಿ. ಕೆ. ಶಿವಕುಮಾರ್ ಹೇಳಿದ್ದಾರೆ.
2023ರ ವಿಧಾನಸಭೆ ಚುನಾವಣೆಯಲ್ಲಿ ಶಿಗ್ಗಾವಿ ಕ್ಷೇತ್ರದಿಂದ ಬಿಜೆಪಿಯ ಬಸವರಾಜ ಬೊಮ್ಮಾಯಿ ಶಾಸಕರಾಗಿ ಆಯ್ಕೆಯಾಗಿದ್ದರು. ಆದರೆ ಲೋಕಸಭೆ ಚುನಾವಣೆಯಲ್ಲಿ ಗೆದ್ದ ಬಳಿಕ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆದ್ದರಿಂದ ಉಪ ಚುನಾವಣೆ ಎದುರಾಗಿದೆ.
ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಬಸವರಾಜ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ಕಣಕ್ಕಿಳಿದ್ದಾರೆ. ಕಾಂಗ್ರೆಸ್‌ನಿಂದ ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಪಕ್ಷ ಕಳೆದ ಚುನಾವಣೆಯಲ್ಲಿ ಸೋತಿದ್ದ ಯಾಸೀರ್ ಅಹ್ಮದ್ ಖಾನ್ ಪಠಾಣಗೆ ಟಿಕೆಟ್ ನೀಡಿತ್ತು.
ಅಜ್ಜಂಪೀರ್ ಖಾದ್ರಿ ಪಕ್ಷೇತರ ಅಭ್ಯರ್ಥಿಯಾಗುವುದು ಖಚಿತವಾಗುತ್ತಿದ್ದಂತೆಯೇ ಕಾಂಗ್ರೆಸ್ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಶಿಗ್ಗಾವಿಗೆ ಕಳಿಸಿತ್ತು. ಶುಕ್ರವಾರ ಅವರು ನಾಮಪತ್ರ ಸಲ್ಲಿಕೆ ಮಾಡದಂತೆ ಮನವೊಲಿಕೆ ಮಾಡಲು ಸೂಚನೆ ನೀಡಿತ್ತು.
ಆದರೆ ಶುಕ್ರವಾರ ಜಮೀರ್ ಅಹ್ಮದ್ ಖಾನ್ ಇತರ ನಾಯಕರ ಜೊತೆ ಅಜ್ಜಂಪೀರ್ ಖಾದ್ರಿ ನಡೆಸಿದ ಮಾತುಕತೆ ವಿಫಲವಾಗಿತ್ತು. ಅಜ್ಜಂಪೀರ್ ಖಾದ್ರಿ ಬೆಂಬಲಿಗರು ಜಮೀರ್ ಅಹ್ಮದ್ ಖಾನ್ ಕಾರಿನ ಮೇಲೆ ದಾಳಿ ನಡೆಸಿದ್ದರು. ಗಾಜುಗಳನ್ನು ಒಡೆದು ಹಾಕಿದ್ದರು. ಅಂತಿಮವಾಗಿ ಪಕ್ಷೇತರ ಅಭ್ಯರ್ಥಿಯಾಗಿ ಅಜ್ಜಂಪೀರ್ ಖಾದ್ರಿ ನಾಮಪತ್ರ ಸಲ್ಲಿಕೆ ಮಾಡಿದ್ದರು. ಶನಿವಾರ ಅವರು ಬೆಂಗಳೂರಿಗೆ ಆಗಮಿಸಿ ಸಿದ್ದರಾಮಯ್ಯ, ಡಿ. ಕೆ. ಶಿವಕುಮಾರ್ ಭೇಟಿಯಾಗಿದ್ದರು.
-
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
ಬೆಂಗಳೂರು ಬಂಗಲೆ ವಿವಾದ: ರಾಜೀವ್ ಚಂದ್ರಶೇಖರ್ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ












Click it and Unblock the Notifications