'ಕಾಂಗ್ರೆಸ್‌ ಪಕ್ಷಕ್ಕೆ ನೀರಿಲ್ಲ, ಜನರಿಗೆ ಹೇಗೆ ನೀರು ಕೊಡುವರು?’

Posted By: Gururaj
Subscribe to Oneindia Kannada

ಹಾವೇರಿ, ಡಿಸೆಂಬರ್ 24 : ಕರ್ನಾಟಕ ಬಿಜೆಪಿ ಪರಿವರ್ತನಾ ಯಾತ್ರೆಯ ಬೃಹತ್ ಸಮಾವೇಶ ಭಾನುವಾರ ಹಾವೇರಿಯಲ್ಲಿ ನಡೆಯಿತು. ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಸಮಾವೇಶದಲ್ಲಿ ಪಾಲ್ಗೊಂಡಿದ್ದರು.

ಯೋಗಿ ಆದಿತ್ಯನಾಥ ಮಾತಿನ ಓಘಕ್ಕೆ ಉಘೇ ಎಂದ ಹುಬ್ಬಳ್ಳಿ ಮಂದಿ

ಭಾನುವಾರ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆದ ರಥಯಾತ್ರೆಯನ್ನು ಸಾಂಪ್ರದಾಯಿಕ ಸ್ವಾಗತದೊಂದಿಗೆ ಬರಮಾಡಿಕೊಳ್ಳಲಾಯಿತು. ಹಾವೇರಿ ಬಿಜೆಪಿ ಘಟಕದ ಜಿಲ್ಲಾ ಕಾರ್ಯಾಲಯ ನಿರ್ಮಾಣಕ್ಕೆ ಭೂಮಿ ಪೂಜೆಯನ್ನು ಮಾಡಲಾಯಿತು.

ಬಿಜೆಪಿ ಸರಕಾರ ಸೂರ್ಯಚಂದ್ರರಷ್ಟೇ ಸತ್ಯ : ಯಡಿಯೂರಪ್ಪ

ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಿದ ಯಡಿಯೂರಪ್ಪ ಅವರು, 'ಬಿಜೆಪಿ ಅಧಿಕಾರಕ್ಕೆ ಬಂದರೆ ಹಾವೇರಿ ಜಿಲ್ಲೆಯಲ್ಲಿ ಜಿಲ್ಲಾ ಡಿಸಿಸಿ ಬ್ಯಾಂಕ್ ಹಾಗು ಕೆಎಂಎಫ್ ಹಾಲಿನ ಘಟಕ ಸ್ಥಾಪನೆಗೆ ಆದ್ಯತೆ ನೀಡಲಾಗುತ್ತದೆ' ಎಂದು ಘೋಷಣೆ ಮಾಡಿದರು.

ಪರಿವರ್ತನಾ ಯಾತ್ರೆ : 17ದಿನದಲ್ಲಿ ಬಿಜೆಪಿ ಸಾಧಿಸಿದ್ದೇನು?

ಸಮಾವೇಶದಲ್ಲಿ ಮಾತನಾಡಿದ ಶಿವರಾಜ್ ಸಿಂಗ್ ಚೌವ್ಹಾಣ್, 'ದೇಶದಲ್ಲಿ ಕಾಂಗ್ರೆಸ್‌ಗೆ ನೀರೇ ಇಲ್ಲದಂತಾಗಿದೆ. ಇನ್ನು ಕಾಂಗ್ರೆಸ್ ಪಕ್ಷದವರು ನೀರೆಲ್ಲಿಂದ ಕೊಡಿಸುತ್ತಾರೆ?' ಎಂದು ಪ್ರಶ್ನಿಸಿದರು...

ಬಿಜೆಪಿ ಅಧಿಕಾರಕ್ಕೆ ಬರಬೇಕು

ಬಿಜೆಪಿ ಅಧಿಕಾರಕ್ಕೆ ಬರಬೇಕು

‘ಕೇಂದ್ರ ಸರ್ಕಾರದ ಯೋಜನೆಗಳು ರಾಜ್ಯದಲ್ಲಿ ಯಶಸ್ವಿಯಾಗಿ ಜಾರಿಗೆ ಬರಬೇಕು ಎಂದರೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರಬೇಕು' ಎಂದು ಶಿವರಾಜ್ ಸಿಂಗ್ ಚೌವ್ಹಾಣ್ ಹೇಳಿದರು.

ತಮ್ಮ ಸಾಧನೆ ಎಂದು ಹೇಳುತ್ತಿದ್ದಾರೆ

ತಮ್ಮ ಸಾಧನೆ ಎಂದು ಹೇಳುತ್ತಿದ್ದಾರೆ

‘ಪ್ರಧಾನಿ ನರೇಂದ್ರ ಮೋದಿ ಅವರ ಕೊಡುಗೆಗಳನ್ನು ತಮ್ಮ ಸಾಧನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಂಬಿಸಿಕೊಳ್ಳುತ್ತಿದ್ದಾರೆ. ದೇಶದಲ್ಲಿಯೇ ಇದು ಅತ್ಯಂತ ಭ್ರಷ್ಟ ಸರ್ಕಾರ' ಎಂದು ಚೌವ್ಹಾಣ್ ಆರೋಪಿಸಿದರು.

ಕರ್ನಾಟಕದ ಹೆಸರು ಕೆಡಿಸುತ್ತಿದ್ದಾರೆ

ಕರ್ನಾಟಕದ ಹೆಸರು ಕೆಡಿಸುತ್ತಿದ್ದಾರೆ

‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀತಿ ಆಯೋಗದ ಸಭೆಗೆ ಹಾಜರಾಗದೆ ದೇಶದಲ್ಲಿಯೇ ಕರ್ನಾಟಕದ ಹೆಸರನ್ನು ಕೆಡಿಸುತ್ತಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ಅತ್ಯಾಚಾರ, ಮರಳು ಮಾಫಿಯಾ, ಭ್ರಷ್ಟಾಚಾರ ಹೆಚ್ಚಾಗಿದೆ' ಎಂದು ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ಪಕ್ಷಕ್ಕೆ ನೀರು ಇಲ್ಲ

ಕಾಂಗ್ರೆಸ್ ಪಕ್ಷಕ್ಕೆ ನೀರು ಇಲ್ಲ

‘ದೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಿರೇ ಇಲ್ಲದಂತಾಗಿದೆ. ಇನ್ನು ಕಾಂಗ್ರೆಸ್‌ ಪಕ್ಷದವರು ಕರ್ನಾಟಕದ ಜನರಿಗೆ ಎಲ್ಲಿಂದ ನೀರು ತಂದು ಕೊಡುತ್ತಾರೆ' ಎಂದು ಲೇವಡಿ ಮಾಡಿದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Madhya Pradesh Chief Minister Shivraj Singh Chouhan addressed Nava Karnataka Parivartan Yatra in Haveri, Karnataka on December 24, 2017.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ