• search
 • Live TV
ಹಾವೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಸಿದ್ದರಾಮಯ್ಯ ಸರ್ಕಾರದ ಯೋಜನೆಗಳಿಂದಲೇ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ: ಸತೀಶ್ ಜಾರಕಿಹೊಳಿ

|
Google Oneindia Kannada News

ಹಾವೇರಿ, ಮಾರ್ಚ್ 13: ಸಿದ್ದರಾಮಯ್ಯ ಆರಂಭಿಸಿದ ಯೋಜನೆಗಳಿಂದಲೇ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಶನಿವಾರ ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ನೇತೃತ್ವದ ಸರ್ಕಾರ ರಚಿಸಿದ ಯೋಜನೆಗಳಿಂದಲೇ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ.

ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಶಾಸಕಾಂಗ ಸಭೆ ನಿರ್ಣಯಗಳುಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಶಾಸಕಾಂಗ ಸಭೆ ನಿರ್ಣಯಗಳು

ಸಿದ್ದರಾಮಯ್ಯ ಅವರು ಐದು ವರ್ಷಗಳ ಕಾಲ ಜನಪರ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ರಾಜ್ಯದ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಅವರ ಶ್ರಮ ಎಂದಿಗೂ ವ್ಯರ್ಥವಾಗುವುದಿಲ್ಲ ಎಂದರು.

ಹಾವೇರಿಯು ಕಾಂಗ್ರೆಸ್‌ನ ಭದ್ರಕೋಟೆ ಮುಂದೆಯೂ ಹೀಗೆಯೇ ಇರಲಿದೆ, ರಾಜಕೀಯ ಬದಲಾವಣೆಗಳಿಂದಾಗಿ ಬಿಜೆಪಿ ಅಧಿಕಾರದಲ್ಲಿದೆ ಆದರೆ ಜನರ ಮನಸ್ಸಿನಲ್ಲಿ ಇನ್ನೂ ಕಾಂಗ್ರೆಸ್ ಪಕ್ಷವೇ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮುಂದಿನ ದಿನಗಳಲ್ಲಿ ಮತ್ತೆ ಹಾವೇರಿ ಕಾಂಗ್ರೆಸ್ ಪಾಲಾಗಲಿದೆ, ಬಿಜೆಪಿಯ ಜನ ವಿರೋಧಿ-ರೈತ ವಿರೋಧಿ ನೀತಿಗಳಿಂದ ಆಕ್ರೋಶಗೊಂಡಿರುವ ಮತದಾರರು ಮತ್ತೊಮ್ಮೆ ಕಾಂಗ್ರೆಸ್ ಆಶೀರ್ವದಿಸುವ ಮೂಲಕ ರಾಜ್ಯದಲ್ಲಿ ಅಧಿಕಾರಕ್ಕೆ ತರಲಿದ್ದಾರೆ ಎಂದರು.

   ಕೊರೋನಾ ಎರಡನೇ ಅಲೆ ಆತಂಕದಲ್ಲಿ ರಾಜ್ಯ..! ಕಟ್ಟುನಿಟ್ಟಿನ ಕ್ರಮಕ್ಕೆ ಚಿಂತನ | Oneindia Kannada

   ನಿನ್ನೆಯಷ್ಟೇ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ವಿಚಾರವಾಗಿ ಮಾತನಾಡಿದ್ದ ಅವರು, ಮಾಜಿ ಸಚಿವ ಸಿಡಿ ಪ್ರಕರಣ ತನಿಖೆಗೆ ಎಸ್‌ಐಟಿ ರಚನೆ ಮಾಡಿರುವುದು ಸ್ವಾಗತಾರ್ಹ, ಆದರೆ, ಯಾವುದೇ ಪ್ರಕರಣದಲ್ಲಿ ಎಸ್‌ಐಟಿ ವರದಿಯನ್ನಷ್ಟೇ ನೀಡುತ್ತದೆ. ಎಫ್‌ಐಆರ್ ದಾಖಲಾದರೆ ಮಾತ್ರ ಅಪರಾಧಿಗಳಿಗೆ ಶಿಕ್ಷೆ ನೀಡಲು ಸಾಧ್ಯ ಎಂದು ಹೇಳಿದ್ದರು.

   English summary
   Satish Jarkiholi said that Congress Will come back to power with the initiatives by the Siddaramaiah Government.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X