ಹಾವೇರಿಯಲ್ಲಿ ಹೆತ್ತ ತಾಯಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಮಗ

ಹಾವೇರಿ, ನವೆಂಬರ್ 16: ಮಗನೊಬ್ಬ ತನ್ನ ಹೆತ್ತ ತಾಯಿಯ ಮೇಲೆಯೇ ಅತ್ಯಾಚಾರ ಎಸಗಿ ನಂತರ ಆಕೆಯ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಗಂಗಿಬಾವಿ ರಸ್ತೆಯಲ್ಲಿ ನಡೆದಿದೆ.

ಹತ್ಯೆಯಾದ ಮಹಿಳೆಯನ್ನು ಮೂವತ್ತೈದು ವರ್ಷದ ಪಾರವ್ವ ಲಮಾಣಿ ಎಂದು ಗುರುತಿಸಲಾಗಿದೆ. ಆಕೆಯ ಮಗ ಶಿವಪ್ಪ ಲಮಾಣಿ (21) ಎಂಬಾತನೇ ತಾಯಿಯನ್ನು ಹತ್ಯೆ ಮಾಡಿ ಅತ್ಯಾಚಾರ ಎಸಗಿದಾತ.

ನವೆಂಬರ್ 12ರಂದು ಪಾರವ್ವಳನ್ನು ಕರೆದುಕೊಂಡು ಬಂದಿದ್ದ ಶಿವಪ್ಪ ಗಂಗಿಬಾವಿ ರಸ್ತೆಯ ನಿರ್ಜನ ಪ್ರದೇಶದಲ್ಲಿ ಆಕೆಯ ಮೇಲೆ ಅತ್ಯಾಚಾರ ಮಾಡಿದ್ದಾನೆ. ನಂತರ ಆಕೆಯನ್ನು ಹತ್ಯೆ ಮಾಡಿ ಪರಾರಿಯಾಗಿದ್ದಾನೆ. ಮರುದಿನ ಆಕೆಯ ಮೃತದೇಹ ಪತ್ತೆಯಾಗಿ, ಪೊಲೀಸರು ಪ್ರಕರಣದ ಬೆನ್ನು ಬಿದ್ದಾಗ ಮಗನೇ ತಾಯಿಯ ಮೇಲೆ ಅತ್ಯಾಚಾರ ಮಾಡಿ ಹತ್ಯೆ ಮಾಡಿದ್ದಾನೆ ಎನ್ನುವ ವಿಷಯ ಬೆಳಕಿಗೆ ಬಂದಿದೆ. ಮಗನನ್ನು ಬಂಧಿಸಿ ಪೊಲೀಸರು ಜೈಲಿಗೆ ಅಟ್ಟಿದ್ದಾರೆ.

Haveri: Son Raped And Killed His Mother At Shiggavi

ಆರು ವರ್ಷಗಳ ಹಿಂದೆ ಪಾರವ್ವಳ ಪತಿ ಮೃತಪಟ್ಟಿದ್ದ. ಮಗನೊಂದಿಗೆ ವಾಸವಾಗಿದ್ದ ಪಾರವ್ವ ಬೇರೊಬ್ಬ ಪುರುಷನ ಜೊತೆ ಅನೈತಿಕ ಸಂಬಂಧ ಹೊಂದಿದ್ದಳು ಎನ್ನಲಾಗಿದೆ. ಇದರಿಂದ ರೋಸಿ ಹೋಗಿದ್ದ ಮಗ ತಾಯಿಯೊಂದಿಗೆ ಸೇರಿ ಸಾರಾಯಿ ಸೇವನೆ ಮಾಡಿದ್ದಾನೆ. ನಂತರ ಆಕೆ ಮೇಲೆ ಅತ್ಯಾಚಾರ ಮಾಡಿ, ಕೊಲೆಗೈದು ಏನೂ ಗೊತ್ತಿಲ್ಲದಂತೆ ಇದ್ದ. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ನ.13ಕ್ಕೆ ಜೈಲಿಗೆ ಅಟ್ಟಿದ್ದಾರೆ. ಈ ಸಂಬಂಧ ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿಚಾರಣೆ ಮುಂದುವರೆಸಿದ್ದಾರೆ.

Recommended Video

      ಲಸಿಕೆಯಿಂದ ತೊಂದ್ರೆ ಆಗತ್ತಾ! | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+