• search
 • Live TV
ಹಾವೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಸುಪ್ರೀಂಕೋರ್ಟ್ ನ್ಯಾ. ಮೋಹನ್ ಎಂ. ಶಾಂತನಗೌಡರ್ ವಿಧಿವಶ

|
Google Oneindia Kannada News

ಹಾವೇರಿ, ಏಪ್ರಿಲ್ 25; ಕರ್ನಾಟಕ ಮೂಲದ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ನ್ಯಾ. ಮೋಹನ್ ಎಂ. ಶಾಂತನಗೌಡರ್ ಶನಿವಾರ ರಾತ್ರಿ ನಿಧನ ಹೊಂದಿದ್ದಾರೆ. 2023ರ ಮೇ 4ರ ತನಕ ಅವರ ಸೇವಾವಧಿ ಇತ್ತು.

ಕೆಲವು ದಿನಗಳಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಮೋಹನ್ ಮಲ್ಲಿಕಾರ್ಜುನಗೌಡ ಶಾಂತನಗೌಡರ್ (61) ಅವರನ್ನು ಗುರುಗ್ರಾಮದ ಮೇದಾಂತ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಶನಿವಾರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಸುಪ್ರೀಂ ಆದೇಶ: ರಾಮಚಂದ್ರಾಪುರ ಮಠದ ಆಡಳಿತದಿಂದ ಕೈತಪ್ಪಿದ ಗೋಕರ್ಣ ಮಹಾಬಲೇಶ್ವರ ದೇಗುಲಸುಪ್ರೀಂ ಆದೇಶ: ರಾಮಚಂದ್ರಾಪುರ ಮಠದ ಆಡಳಿತದಿಂದ ಕೈತಪ್ಪಿದ ಗೋಕರ್ಣ ಮಹಾಬಲೇಶ್ವರ ದೇಗುಲ

ನ್ಯಾಯಮೂರ್ತಿ ಮೋಹನ್ ಎಂ. ಶಾಂತನಗೌಡರ್ ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಚಿಕ್ಕೇರೂರು ಗ್ರಾಮದವರು. ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಕಾನೂನು ಪದವಿ ಪಡೆದಿದ್ದರು.

ಕಳೆದ ವರ್ಷ ವಲಸೆ ಕಾರ್ಮಿಕರ ವಿಷಯದಲ್ಲೂ ಸುಪ್ರೀಂ ಹೀಗೆಯೇ ಮಾಡಿತ್ತುಕಳೆದ ವರ್ಷ ವಲಸೆ ಕಾರ್ಮಿಕರ ವಿಷಯದಲ್ಲೂ ಸುಪ್ರೀಂ ಹೀಗೆಯೇ ಮಾಡಿತ್ತು

ಮೇ 5, 1958ರಂದು ಜನಿಸಿದ್ದ ನ್ಯಾ. ಮೋಹನ್ ಎಂ. ಶಾಂತನಗೌಡರ್ ಸೆಪ್ಟೆಂಬರ್ 1980ರಲ್ಲಿ ವಕೀಲರಾಗಿ ಕಾರ್ಯ ಆರಂಭಿಸಿದ್ದರು. ಬೆಂಗಳೂರಿಗೆ ಆಗಮಿಸುವ ಮೊದಲು ಒಂದು ವರ್ಷ ಧಾರವಾಡದಲ್ಲಿ ಅಭ್ಯಾಸ ಮಾಡಿದ್ದರು.

 ಸುಪ್ರೀಂ ಕೋರ್ಟ್‌ನ ಶೇ 50ರಷ್ಟು ಸಿಬ್ಬಂದಿಗೆ ಕೊರೊನಾ; ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ಸುಪ್ರೀಂ ಕೋರ್ಟ್‌ನ ಶೇ 50ರಷ್ಟು ಸಿಬ್ಬಂದಿಗೆ ಕೊರೊನಾ; ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ

2003ರಲ್ಲಿ ರಾಜ್ಯ ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು. 2004ರಲ್ಲಿ ನ್ಯಾಯಮೂರ್ತಿಯಾಗಿ ಸೇವೆ ಆರಂಭಿಸಿದ್ದರು. 2016ರಿಂದ ಒಂದು ವರ್ಷ ಕೇರಳ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದರು.

   ಕೊರೋನ ತಡಿಯೋಕೆ 14 ದಿನಗಳ ಕಾಲ Lock Down! | Oneindia Kannada

   2017ರಲ್ಲಿ ನ್ಯಾ. ಮೋಹನ್ ಎಂ. ಶಾಂತನಗೌಡರ್ ಅವರು ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು. ಇವರ ಸೇವೆ 2023ರ ಮೇ 4ರ ತನಕ ಇತ್ತು.

   English summary
   Sitting judge of supreme court Justice Mohan M.Shantanagoudar passed away on Saturday. He is from Haveri district of Karnataka.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X