• search
  • Live TV
ಹಾವೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಹಿರೇಕೆರೂರು, ರಟ್ಟಿಹಳ್ಳಿಯಲ್ಲಿ ಹೋದವರಿಗೆ ಗಂಟಲು ದ್ರವ್ಯ ತಪಾಸಣೆ

|

ಹಾವೇರಿ, ಜುಲೈ.14: ಕೊರೊನಾವೈರಸ್ ಸೋಂಕಿನಿಂದ ಸಾಕಷ್ಟು ಅಂತರ ಕಾಯ್ದುಕೊಂಡಿದ್ದ ಹಾವೇರಿ ಜಿಲ್ಲೆಯಲ್ಲೇ ಇತ್ತೀಚಿಗೆ ಸೋಂಕಿತ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಅದರಲ್ಲೂ ಕೃಷಿ ಸಚಿವ ಬಿ.ಸಿ.ಪಾಟೀಲ್ ತವರು ಕ್ಷೇತ್ರ ಹಿರೇಕೆರೂರು ತಾಲೂಕಿನಲ್ಲಿ ಹೆಚ್ಚಿನ ಪ್ರಕರಣಗಳು ವರದಿಯಾಗುತ್ತಿವೆ.

ಹಿರೇಕೆರೂರು ತಾಲೂಕಿನಲ್ಲೇ ಸೋಂಕಿತ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳುವಂತೆ ತಹಸೀಲ್ದಾರ್ ಅವರಿಗೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಸೂಚನೆ ನೀಡಿರುವುದಾಗಿ ಟ್ವೀಟ್ ಮಾಡಿದ್ದಾರೆ.

ರಾಣೇಬೆನ್ನೂರು ಲಾಕ್ ಡೌನ್: ಹಾವೇರಿ ಜಿಲ್ಲಾಧಿಕಾರಿಯಿಂದ ಸ್ಪಷ್ಟನೆ

"ಹೊರಗಡೆಯಿಂದ ಯಾರೇ ಹಿರೇಕೆರೂರು ಮತ್ತು ರಟ್ಟಿಹಳ್ಳಿ ತಾಲೂಕಿಗೆ ಬಂದರೆ, ಕೂಡಲೇ ಅವರ ಗಂಟಲು ದ್ರವವನ್ನು ಪರೀಕ್ಷೆ ಮಾಡಿ ವರದಿ ನೀಡಬೇಕು ಎಂದು ತಹಶೀಲ್ದಾರ್ ಅವರಿಗೆ ಸೂಚನೆ ನೀಡಿದ್ದೇನೆ" ಎಂದು ಸಚಿವ ಬಿ.ಸಿ.ಪಾಟೀಲ್ ಟ್ವೀಟರ್ ನಲ್ಲಿ ಬರೆದುಕೊಂಡಿದ್ದಾರೆ.

ಹಾವೇರಿ ಜಿಲ್ಲೆಯಲ್ಲಿ ಕೊರೊನಾವೈರಸ್ ಕಂಡೀಷನ್:

ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಹಾವೇರಿ ಜಿಲ್ಲೆಯಲ್ಲೂ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿವೆ. ಕಳೆದ 24 ಗಂಟೆಗಳಲ್ಲಿ 6 ಹೊಸ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಇದರಿಂದ ಜಿಲ್ಲೆಯಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆಯು 307ಕ್ಕೆ ಏರಿಕೆಯಾಗಿದೆ. ಈ ಪೈಕಿ 170 ಸೋಂಕಿತರು ಗುಣಮುಖರಾಗಿದ್ದು, 130 ಸೋಂಕಿತರಿಗೆ ಚಿಕಿತ್ಸೆ ಮುಂದುವರಿಸಲಾಗುತ್ತಿದೆ. ಜಿಲ್ಲೆಯಲ್ಲಿ ಮಹಾಮಾರಿಗೆ ಇದುವರೆಗೂ 7 ಮಂದಿ ಪ್ರಾಣ ಬಿಟ್ಟಿದ್ದಾರೆ.

English summary
Throat Examination At Hirekerur And Rattihalli Is Mandatory For Those Coming From Outside.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X