ಹಾವೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹಾವೇರಿಯಲ್ಲಿ ಮತದಾನ ಜಾಗೃತಿ ಮೂಡಿಸಿದ ಹನುಮಂತಪ್ಪ

|
Google Oneindia Kannada News

ಹಾವೇರಿ, ಏಪ್ರಿಲ್ 04 : ಸರಿಗಮಪ ಖ್ಯಾತಿಯ ಗಾಯಕ ಹನುಮಂತ ಲಮಾಣಿ ಅವರು ವಿವಿಪ್ಯಾಟ್ ಮತ್ತು ಕಡ್ಡಾಯ ಮತದಾನದ ಕುರಿತು ಜನರಿಗೆ ಅರಿವು ಮೂಡಿಸಿದರು. ಹಾವೇರಿ ಜಿಲ್ಲೆಯಲ್ಲಿ ಏಪ್ರಿಲ್ 23ರಂದು ಮತದಾನ ನಡೆಯಲಿದೆ.

ಗುರುವಾರ ಹಾವೇರಿ ಜಿಲ್ಲೆಯ ಸವಣೂರ ತಾಲೂಕಿನ ಚಿಲ್ಲೂರು ಬಡ್ನಿ ಗ್ರಾಮದಲ್ಲಿ ಝೀ ಕನ್ನಡ ಸರಿಗಮಪ ಕಾರ್ಯಕ್ರಮದ ಖ್ಯಾತಿಯ ಗಾಯಕ ಹನುಮಂತ ಲಮಾಣಿ ಇವರು ಗ್ರಾಮಸ್ಥರಿಗೆ ವಿವಿಪ್ಯಾಟ್ ಮತ್ತು ಇವಿಎಂ ಹಾಗೂ ಕಡ್ಡಾಯ ಮತದಾನ ಮಾಡುವ ಕುರಿತು ಜಾಗೃತಿ ಮೂಡಿಸಿದರು.

ಹಾವೇರಿ ಲೋಕಸಭಾ ಕ್ಷೇತ್ರದ ಪರಿಚಯ

Voter awareness campaign by Hanumanthappa in Haveri

ಹಾವೇರಿ ಲೋಕಸಭಾ ಕ್ಷೇತ್ರಕ್ಕೆ ಏಪ್ರಿಲ್ 23ರಂದು ಚುನಾವಣೆ ನಡೆಯಲಿದೆ. ಪ್ರಮುಖ ರಾಜಕೀಯ ಪಕ್ಷಗಳು ಸೇರಿದಂತೆ 19 ಅಭ್ಯರ್ಥಿಗಳು 30 ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ಇಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿತ್ತು.

ಲೂಟಿಕೋರರನ್ನು ಜೈಲಿಗಟ್ಟುತ್ತೇವೆ, ಹಾವೇರಿಯಲ್ಲಿ ರಾಹುಲ್ ಕಾವೇರಿದ ಭಾಷಣಲೂಟಿಕೋರರನ್ನು ಜೈಲಿಗಟ್ಟುತ್ತೇವೆ, ಹಾವೇರಿಯಲ್ಲಿ ರಾಹುಲ್ ಕಾವೇರಿದ ಭಾಷಣ

Voter awareness campaign by Hanumanthappa in Haveri

ಏಪ್ರಿಲ್ 5ರ ಶುಕ್ರವಾರ ನಾಮಪತ್ರಗಳ ಪರಿಶೀಲನೆ ಕಾರ್ಯ ನಡೆಯಲಿದೆ. ಏಪ್ರಿಲ್ 8ರ ಸೋಮವಾರ ನಾಮಪತ್ರಗಳನ್ನು ಹಿಂಪಡೆಯಲು ಕೊನೆಯ ದಿನವಾಗಿದೆ. ಏಪ್ರಿಲ್ 23ರಂದು ಚುನಾವಣೆ ನಡೆಯಲಿದ್ದು, ಮೇ 23ರಂದು ಫಲಿತಾಂಶ ಪ್ರಕಟವಾಗಲಿದೆ.

ಲೋಕಸಭಾ ಚುನಾವಣೆ : ಹಾವೇರಿಯಲ್ಲಿ ಶಪಥ ಮಾಡಿದ ಯಡಿಯೂರಪ್ಪ!ಲೋಕಸಭಾ ಚುನಾವಣೆ : ಹಾವೇರಿಯಲ್ಲಿ ಶಪಥ ಮಾಡಿದ ಯಡಿಯೂರಪ್ಪ!

ಹಾವೇರಿ ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಹಾಲಿ ಸಂಸದ ಶಿವಕುಮಾರ್ ಉದಾಸಿ ಅಭ್ಯರ್ಥಿ. ಕಾಂಗ್ರೆಸ್‌-ಜೆಡಿಎಸ್ ಅಭ್ಯರ್ಥಿಯಾಗಿ ಡಿ.ಆರ್.ಪಾಟೀಲ್ ಅವರು ಅಭ್ಯರ್ಥಿಯಾಗಿದ್ದಾರೆ.

English summary
Saregamapa fame Hanumanthappa voter awareness campaign in Savanur taluk, Haveri district. Elections will be held on April 23, 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X