ಯೋಗ ದೈಹಿಕ, ಮಾನಸಿಕ ಸ್ವಾಸ್ಥ್ಯಕ್ಕೆ ಸಹಕಾರಿ; ಬಿಸಿ ಪಾಟೀಲ್
ಹಿರೇಕೆರೂರು, ಜೂ. 21: "ಯೋಗ ಎನ್ನುವುದು ಬರೀ ದೇಹದ ದಂಡನೆಯಲ್ಲ. ಇದು ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಸ್ವಾಸ್ಥ್ಯಕ್ಕೂ ಅದ್ಭುತ ಕ್ರಿಯಾ ಸಾಧನ" ಎಂದು ಕೃಷಿ ಸಚಿವರೂ ಆಗಿರುವ ಗದಗ ಮತ್ತು ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಬಿ. ಸಿ. ಪಾಟೀಲ್ ಹೇಳಿದರು.
ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಮಂಗಳವಾರ ಹಾವೇರಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಯೋಗಾಸನ ಕ್ರೀಡಾ ಸಂಸ್ಥೆ ಇವರ ಸಹಯೋಗದಲ್ಲಿ "ಆಜಾದಿ ಕಾ ಅಮೃತ್ ಮಹೋತ್ಸವ್ " ಹಿರೇಕೆರೂರಿನ ಅಬಲೂರು ಗ್ರಾಮದ ಬಸವೇಶ್ವರ ದೇವಸ್ಥಾನದ ಮೈದಾನದ ಆವರಣದಲ್ಲಿ ನಡೆದ 8ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಶುಭಾಶಯ ಕೋರಿದ ಸಚಿವ ಬಿ. ಸಿ. ಪಾಟೀಲ್, "ಪ್ರಧಾನಿ ನರೇಂದ್ರ ಮೋದಿಯವರು ಹೇಳುವಂತೆ ಈ ಇಡೀ ವಿಶ್ವವು ನಮ್ಮ ದೇಹ ಮತ್ತು ಆತ್ಮದಿಂದ ಆರಂಭವಾಗುತ್ತದೆ. ವಿಶ್ವವು ನಮ್ಮಿಂದ ಪ್ರಾರಂಭವಾಗುತ್ತದೆ ಮತ್ತು ಯೋಗವು ನಮ್ಮೊಳಗಿನ ಎಲ್ಲವನ್ನೂ ಜಾಗೃತಗೊಳಿಸುತ್ತದೆ. ಅರಿವಿನ ಪ್ರಜ್ಞೆಯನ್ನು ನಿರ್ಮಿಸುತ್ತದೆ. ಈ ಬಾರಿ ಮಾನವೀಯತೆಗಾಗಿ ಯೋಗ ಮಾಡುತಿದ್ದೇವೆ. ಭಾರತದ ಯೋಗದ ಲಾಭವನ್ನು ವಿದೇಶಿಗರು ಸಹ ಅರಿತು ದೇಹ ಮತ್ತು ಮನಸಿನ ಆರೋಗ್ಯಕ್ಕಾಗಿ ಇಂದು ಯೋಗವನ್ನು ಒಪ್ಪಿ ಅನುಸರಿಸುತ್ತಿದ್ದಾರೆ" ಎಂದರು.

"ಯೋಗವು ಮೂಲಭೂತವಾಗಿ ಅತ್ಯಂತ ಸೂಕ್ಷ್ಮವಾದ ವಿಜ್ಞಾನವನ್ನು ಆಧರಿಸಿದ ಆಧ್ಯಾತ್ಮಿಕ ಶಿಸ್ತು ಕ್ರಮವಾಗಿದೆ. ಇದು ಮನಸ್ಸು ಮತ್ತು ದೇಹದ ನಡುವೆ ಸಾಮರಸ್ಯವನ್ನು ತರುವುದರ ಮೇಲೆ ಕೇಂದ್ರೀಕರಿಸುತ್ತದೆ. ಇದು ಆರೋಗ್ಯಕರ ಜೀವನ ಕಲೆ ಮತ್ತು ವಿಜ್ಞಾನವಾಗಿದೆ. ಎಲ್ಲರೂ ಯೋಗವನ್ನು ದಿನನಿತ್ಯ ಮಾಡುತ್ತಾ ಸುಯೋಗಿಗಳಾಗಲಿ" ಎಂದು ಕರೆ ನೀಡಿದರು.
ಗೃಹ ಸಚಿವ ಆರಗ ಜ್ಞಾನೇಂದ್ರ ಯೋಗಾಭ್ಯಾಸ; ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಶುಭಾಶಯ ಕೋರಿದ್ದಾರೆ. ಮಾನವೀಯತೆಗಾಗಿ ಯೋಗ ಎಂಬ ಘೋಷವಾಕ್ಯದೊಂದಿಗೆ ಜಗತ್ತಿನೆಲ್ಲೆಡೆ ಅಂತಾರಾಷ್ಟ್ರೀಯ ಯೋಗ ದಿನ ಆಚರಣೆಯಾಗುತ್ತಿದೆ. ಬೆಂಗಳೂರು ನಿವಾಸದಲ್ಲಿ ಇಂದು ಯೋಗಾಭ್ಯಾಸ ಮಾಡಲಾಯಿತು ಎಂದು ಫೇಸ್‌ಬುಕ್ ಪೋಸ್ಟ್ ಹಾಕಿದಾರೆ.
ವಿಶ್ವ ಯೋಗ ದಿನಾಚರಣೆ ಅಂಗವಾಗಿ ತಿಪಟೂರಿನಲ್ಲಿ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಯೋಗಾಸನ ಮಾಡಿದರು.

ಡಾ. ಜಿಎಂ. ಸಿದ್ದೇಶ್ವರ್ ಯೋಗಾಭ್ಯಾಸ; ದಾವಣಗೆರೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ, ಚನ್ನಗಿರಿ ತಾಲ್ಲೂಕು ಆಡಳಿತ ಮತ್ತು ದಾವಣಗೆರೆ ಜಿಲ್ಲಾ ಯೋಗ ಒಕ್ಕೂಟದ ಆಶ್ರಯದಲ್ಲಿ ಚನ್ನಗಿರಿ ತಾಲ್ಲೂಕಿನ ಸಂತೆಬೆನ್ನೂರಿನ ಪುಷ್ಕರಣಿಯ ಆವರಣದಲ್ಲಿ ಏರ್ಪಡಿಸಿದ್ದ ಎಂಟನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಕಾರ್ಯಕ್ರಮದಲ್ಲಿ ಡಾ. ಜಿ. ಎಂ. ಸಿದ್ದೇಶ್ವರ್ ಯೋಗಾಭ್ಯಾಸ ಮಾಡಿದರು.
ಯೋಗ ದಿನಾಚರಣೆ ಉದ್ಘಾಟಿಸಿದ ರಾಮುಲು; ಬಳ್ಳಾರಿಯ ಕೋಟೆಮಲ್ಲೇಶ್ವರ ದೇವಸ್ಥಾನದ ಕೋಟೆ ಪ್ರದೇಶದಲ್ಲಿ ಆಯುಷ್ ಇಲಾಖೆ ವತಿಯಿಂದ ಆಯೋಜಿಸಿದ್ದ 8ನೇ ಅಂತಾರಾಷ್ಟ್ರೀಯ ಯೋಗ ದಿನದ ಕಾರ್ಯಕ್ರಮವನ್ನು ಸಚಿವ ರಾಮುಲು ಉದ್ಘಾಟಿಸಿದರು.

ಬಳಿಕ ಮಾತನಾಡಿ, ನಾವೆಲ್ಲರೂ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಂಡು ದೀರ್ಘಾಯುಷ್ಯ ಪಡೆಯೋಣ ಹಾಗೂ ಯೋಗದ ಮಹತ್ವವನ್ನು ಸಾರೋಣ ಎಂದು ತಿಳಿಸಿದರು. ಬಳಿಕ ಯೋಗಪಟುಗಳೊಂದಿಗೆ ಯೋಗಾಸನ ಮಾಡಿ, ನಾವೆಲ್ಲರೂ ಮಾನವೀಯತೆಗಾಗಿ ಯೋಗ ಎಂಬುದನ್ನು ಸಾರೋಣ ಎಂಬ ಸಂದೇಶವನ್ನು ನೀಡಿದರು.
Recommended Video
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications