Holalkere Elections: ಹೊಳಲ್ಕೆರೆ ಕ್ಷೇತ್ರದಲ್ಲಿ ಕಾಂಗ್ರೆಸ್ , ಬಿಜೆಪಿ ನಡುವೇ ತೀವ್ರ ಪೈಪೋಟಿ
ಚಿತ್ರದುರ್ಗ, ಮಾರ್ಚ್ 24: ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಕೋಟೆನಾಡು ಚಿತ್ರದುರ್ಗದ ಹೊಳಲ್ಕೆರೆ, ಚಳ್ಳಕೆರೆ, ಚಿತ್ರದುರ್ಗ ಸೇರಿದಂತೆ ಹಲವು ವಿಧಾನಸಭಾ ಕ್ಷೇತ್ರಗಳಲ್ಲಿ ಈಗಾಗಲೇ ಮೂರು ಪಕ್ಷಗಳು ಭರ್ಜರಿ ಪ್ರಚಾರ ಪ್ರಾರಂಭಿಸಿವೆ. ಕ್ಷೇತ್ರಗಳಲ್ಲಿ ಅಧಿಕಾರಕ್ಕೆ ಬರಲು ಬಿಜೆಪಿ, ಕಾಂಗ್ರೆಸ್, ಜೆಡಿಸ್ ಇನ್ನಿಲ್ಲದ ಕಸರತ್ತುಗಳನ್ನು ನಡೆಸುತ್ತಿವೆ.
ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳಲ್ಲಿ ಹೊಳಲ್ಕೆರೆ ಕೂಡ ಒಂದಾಗಿದೆ. ಜಿಲ್ಲೆಯ ತಾಲೂಕು ಕೇಂದ್ರವಾದ ಹೊಳಲ್ಕೆರೆಯಿಂದ ಚಿತ್ರದುರ್ಗಕ್ಕೆ 32 ಮೈಲಿ, ದಾವಣಗೆರೆಗೆ 60 ಕಿ. ಮೀ.ದೂರದಲ್ಲಿದೆ. ಈ ಕ್ಷೇತ್ರದಲ್ಲಿ ಈ ಬಾರಿ ಆಮ್ ಆದ್ಮಿ ಪಾರ್ಟಿ ಹಾಗೂ ಜನಾರ್ಧನ ರೆಡ್ಡಿ ಅವರ ಹೊಸ ಪಕ್ಷ ಕೆಆರ್‌ಪಿಪಿ ಕೂಡ ಕಣಕ್ಕೆ ಇಳಿಯಲಿದವೆ. ಈ ಕಾರಣದಿಂದ ಕ್ಷೇತ್ರದಲ್ಲಿ ಚುನಾವಣಾ ಕಣ ರಂಗೇರಿದೆ.

*ಹೊಳಲ್ಕೆರೆ ತಾಲೂಕಿನ ಮಾಹಿತಿ*
ಹೊಳಲ್ಕರೆ ತಾಲೂಕಿನಲ್ಲಿ ನಾಲ್ಕು ಹೋಬಳಿಗಳಿವೆ. ಬಿ. ದುರ್ಗ, ಕಸಬಾ, ತಾಳ್ಯ ಮತ್ತು ರಾಮಗಿರಿ. ಹೊಳಲ್ಕೆರೆಯಲ್ಲಿ ಪ್ರಸಿದ್ಧ ಪ್ರಸನ್ನ ಗಣಪತಿ ದೇವಾಲಯವಿದೆ. ಇದನ್ನು 1775 ರಲ್ಲಿ ಚಿತ್ರದುರ್ಗದ ಪಾಳೆಯಗಾರ ಗುತ್ಯೆಪ್ಪನಾಯಕನು ಕಟ್ಟಿಸಿದನೆಂದು ಶಾಸನಗಳು ತಿಳಿಸುತ್ತವೆ. ಕುಳಿತಿರುವ ಭಂಗಿಯಲ್ಲಿರುವ ಗಣಪತಿ ವಿಗ್ರಹ ಸುಮಾರು 6 ಮೀ (20 ಅಡಿ) ಎತ್ತರವಿದೆ. ಸ್ಥಳೀಯರ ಪ್ರಕಾರ, ಗಣೇಶನ ಪ್ರತಿಮೆಯನ್ನು ನಿಜವಾದ ಭಕ್ತಿಯಿಂದ ಪೂಜಿಸಿದರೆ, ಅವರ ಇಷ್ಟಾರ್ಥಗಳು ಈಡೇರುತ್ತವೆ. ಹೊಳಲ್ಕೆರೆಯಲ್ಲಿರುವ ದಿವಂಗತ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಅವರ ಸಮಾಧಿ ಸ್ಥಳವಾಗಿರುವ ಲೀಲಾ ವಿಶ್ರಾಂತಿ ಧಾಮ ಪ್ರಸ್ತುತ ಚಿತ್ರದುರ್ಗದ ಶ್ರೀ ಶಿವಮೂರ್ತಿ ಶರಣರ ಪ್ರಯತ್ನದಿಂದ ಪ್ರವಾಸಿ ತಾಣವಾಗಿ ಅಭಿವೃದ್ಧಿ ಹೊಂದುತ್ತಿದೆ.
*ಹೊಳಲ್ಕೆರೆ ರಾಜಕೀಯ*
ಹೊಳಲ್ಕೆರೆ ವಿಧಾನಸಭಾ ಚುನಾವಣೆಯಲ್ಲಿ ಹಲವು ವರ್ಷಗಳಿಂದ ಒಮ್ಮೆ ಕಾಂಗ್ರೆಸ್ ಗೆದ್ದರೆ ಒಮ್ಮೆ ಬಿಜೆಪಿ ಅಧಿಕಾರಕ್ಕೆ ಬರುತ್ತಿದೆ. ಸದ್ಯ ಬಿಜೆಪಿಯ ಎಂ ಚಂದ್ರಪ್ಪ ಶಾಸಕರಾಗಿದ್ದಾರೆ. 1972ರ ಚುನಾವಣೆಯಲ್ಲಿ ಕಾಂಗ್ರೆಸ್‌ನ ಬಿ ಪರಮೇಶ್ವರಪ್ಪ 29, 587 ಮತಗಳಿಂದ ಕ್ಷೇತ್ರದಲ್ಲಿ ಗೆಲುವು ದಾಖಲಿಸಿದ್ದರು. ಇವರ ಬಳಿಕ ಕಾಂಗ್ರೆಸ್‌ನಿಂದಲೇ 1978ರಲ್ಲಿ ಕೆ ಎಚ್ ಸಿದ್ದರಾಮಪ್ಪ ಶಾಸನಸಭೆಗೆ ಆಯ್ಕೆಯಾದರು.

1983 ಜೆಎನ್‌ಪಿಯ ಜಿ ಶಿವಲಿಂಗಪ್ಪ 36,050 ಮತಗಳನ್ನು ಪಡೆಯುವ ಮೂಲಕ ಹೊಳಲ್ಕೆಯಲ್ಲಿ ಶಾಸಕರಾದರು. 1985ರ ಉಪಚುಣಾವಣೆಯಲ್ಲಿ ಜೆಎನ್‌ಪಿಯ ಜಿ ಸಿ ಮಂಜುನಾಥ್ 40, 165 ಮತಗಳನ್ನು ಪಡೆದು ಶಾಸಕರಾದರು. 1989ರಲ್ಲಿ ಮತ್ತೆ ಕಾಂಗ್ರೆಸ್‌ನ ಎ ವಿ ಉಮಾಪತಿ 45978 ಮತಗಳಿಂದ ಆಯ್ಕೆಯಾದರು. 1994ರಲ್ಲಿ ಜನತಾದಳದ ಯು ಎಚ್ ತಿಮ್ಮಣ್ಣ ಆಯ್ಕೆಯಾಗಿದ್ದರು.
1999ರಲ್ಲಿ ಬಿಜೆಪಿ ಕ್ಷೇತ್ರಕ್ಕೆ ಲಗ್ಗೆ ಹಾಕಿದ್ದು, ಪಿ ರಮೇಶ್ 50121 ಮತಗಳಿಂದ ಗೆದ್ದರು. 2004ರ ಚುನಾವಣೆಯಲ್ಲಿ ಮಾಜಿ ಶಾಸಕ, ಕಾಂಗ್ರೆಸ್‌ನ ಎ ವಿ ಉಮಾಪತಿ ಮತ್ತೆ ಅಧಿಕಾರಕ್ಕೆ ಬಂದರು. ಬಿಜೆಪಿ ಕಳೆದು ಕೊಂಡಿದ್ದ ಸ್ಥಾನವನ್ನು ಮತ್ತೆ 2008ರಲ್ಲಿ ಎಂ ಚಂದ್ರಪ್ಪ ಆಯ್ಕೆಯಾಗುವ ಮೂಲಕ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ದಾಖಲಿಸಿತು. ಬಳಿಕ ನಡೆದ 2013ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ ಹೆಚ್ ಆಂಜನೇಯ 76,856 ಮತಗಳನ್ನು ಪಡೆದರು. ಮತ್ತೆ 2018 ರಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿಯ ಎಂ ಚಂದ್ರಪ್ಪ 1,07,976 ಸಾವಿರ ಮತಗಳನ್ನು ಪಡೆದಿದ್ದಾರೆ.
ಪರಿಶಿಷ್ಟ ಜಾತಿಗೆ ಮೀಸಲಾಗಿರುವ ಕ್ಷೇತ್ರದಲ್ಲಿ 2018 ರಲ್ಲಿ ಭಾರತೀಯ ಜನತಾ ಪಾರ್ಟಿ ಯ ಎಂ ಚಂದ್ರಪ್ಪ ಗೆಲುವು ಸಾಧಿಸಿದ್ದರು. ಇಂಡಿಯನ್ ನ್ಯಾಷನಲ್ ಕಾಂಗ್ರೆಸ್‌ನ ಎಚ್ ಆಂಜನೇಯ 38,940 ಮತಗಳ ಅಂತರದಿಂದ ಸೋಲನ್ನು ಅನುಭವಿಸಿದ್ದರು. ಒಮ್ಮೆ ಕಾಂಗ್ರೆಸ್ ಗೆದ್ದರೆ, ಮತ್ತೊಮ್ಮೆ ಬಿಜೆಪಿ ಅಭ್ಯರ್ಥಿ ಗೆಲುವ ಈ ಕ್ಷೇತ್ರದಲ್ಲಿ ಸದ್ಯ ಬಿಜೆಪಿಯ ಹಾಲಿ ಶಾಸಕ ಎಂ. ಚಂದ್ರಪ್ಪ ಮರು ಆಯ್ಕೆ ಬಯಸಿ ಬಿಜೆಪಿಯಿಂದ ಸ್ಪರ್ಧಿಸಲಿದ್ದಾರೆ.

ಇನ್ನು ಕಳೆದ ಚುನಾವಣೆಯಲ್ಲಿ ಸೋಲು ಕಂಡಿದ್ದ ಮಾಜಿ ಸಚಿವ ಎಚ್. ಆಂಜನೇಯ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ನಿರೀಕ್ಷೆಯಲ್ಲಿದ್ದಾರೆ. ಇವರ ಜೊತೆಗೆ ಮಾಜಿ ಸಚಿವ ಕೆ.ಎಚ್. ರಂಗನಾಥ್ ಅಳಿಯ ವಿಜಯ್ ಕುಮಾರ್, ಸವಿತಾ ರಘು ಸೇರಿ ಕಾಂಗ್ರೆಸ್ ಟಿಕೆಟ್‌ಗೆ 19 ಮಂದಿ ಅರ್ಜಿ ಸಲ್ಲಿಸಿದ್ದಾರೆ. ಟಿಕೆಟ್ ಖಚಿತವಾಗುವುದಕ್ಕೂ ಮುನ್ನವೇ ಮತದಾರರ ಮನೆಬಾಗಿಲು ತಟ್ಟುತ್ತಿದ್ದಾರೆ. ಇವರಲ್ಲಿ ನಿವೃತ್ತ ಜಿಲ್ಲಾಧಿಕಾರಿ ಎಂ.ಕೆ. ಶ್ರೀರಂಗಯ್ಯ ಕೂಡ ಇದ್ದಾರೆ ಎನ್ನಲಾಗಿದೆ.
Holalkere Karnataka Elections
| ವರ್ಷ | ಗೆದ್ದವರು | ಮತಗಳು | ಸೋತವರು | ಮತಗಳು |
| 2018 | ಎಂ. ಚಂದ್ರಪ್ಪ, (ಬಿಜೆಪಿ ) | 107976 | ಎಚ್ ಆಂಜನೇಯ( ಕಾಂಗ್ರೆಸ್) | 69036 |
| 2013 | ಎಚ್ ಆಂಜನೇಯ(ಕಾಂಗ್ರೆಸ್ ) | 76856 | ಎಂ. ಚಂದ್ರಪ್ಪ (ಬಿಜೆಪಿ ) | 63992 |
| 2008 | ಎಂ. ಚಂದ್ರಪ್ಪ (ಬಿಜೆಪಿ ) | 51,156 | ಎಚ್ ಆಂಜನೇಯ(ಕಾಂಗ್ರೆಸ್ ) | 39010 |
ಸಿದ್ದರಾಮಯ್ಯ ಅವರ ಆಪ್ತರಾಗಿರುವ ಮಾಜಿ ಸಚಿವ ಎಚ್. ಆಂಜನೇಯ ಅವರಿಗೆ ಈ ಬಾರಿಯೂ ಟಿಕೆಟ್ ಬಹುತೇಕ ಖಚಿತವಾಗಲಿದೆ. ಅವರು ಕ್ಷೇತ್ರವನ್ನು ಹಿಡಿತಕ್ಕೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ಪ್ರಚಾರ ಕೈಗೊಂಡಿದ್ದಾರೆ ಎನ್ನಲಾಗಿದೆ. ಇತ್ತ ಜೆಡಿಎಸ್ ಪಕ್ಷದ ಅಭ್ಯರ್ಥಿಗಳ ಹೆಸರು ಸುಳಿವು ಸಿಗುತ್ತಿಲ್ಲ. ಇವರ ಜೊತೆಗೆ ಆಮ್ ಆದ್ಮಿ ಪಕ್ಷ ಮತ್ತು ಜನಾರ್ಧನ ರೆಡ್ಡಿ ಅವರ ಹೊಸ ಪಕ್ಷ ಕೆಆರ್‌ಪಿಪಿ ಕೂಡ ಕಣಕ್ಕೆ ಇಳಿಯುವ ಸಾಧ್ಯತೆಯಿದೆ.
*ಮತದಾರರು*
2011 ರ ಜನಗಣತಿಯ ಪ್ರಕಾರ ಹೊಳಲ್ಕೆರೆ ಪರಿಶಿಷ್ಟ ಜಾತಿ ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿ ಮತದಾರರು ಸರಿಸುಮಾರು 62,224 ರಷ್ಟಿದ್ದಾರೆ. ಪರಿಶಿಷ್ಟ ಪಂಗಡದ ಮತದಾರರು ಸರಿಸುಮಾರು 31,920 ಜನರಿದ್ದಾರೆ. ಮುಸ್ಲಿಂ ಮತದಾರರು ಸರಿಸುಮಾರು 14,106, ಗ್ರಾಮೀಣ ಮತದಾರರು ಸರಿಸುಮಾರು 2, 09,673 ಮತ್ತು ನಗರ ಮತದಾರರು ಸರಿಸುಮಾರು 17,837 ಆಗಿದೆ. 2019 ರ ಸಂಸತ್ ಚುನಾವಣೆಯಂತೆ ಹೊಳಲ್ಕೆರೆ ವಿಧಾನಸಭೆಯ ಒಟ್ಟು ಮತದಾರರು - 2,27,510.y
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications