ಹುಬ್ಬಳ್ಳಿ: ಕಾರು-ಶಾಲಾ ವಾಹನ ಡಿಕ್ಕಿ, 11 ವಿದ್ಯಾರ್ಥಿಗಳಿಗೆ ಗಾಯ

By: ಹುಬ್ಬಳ್ಳಿ ಪ್ರತಿನಿಧಿ
Subscribe to Oneindia Kannada

ಹುಬ್ಬಳ್ಳಿ, ನವೆಂಬರ್, 19 : ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಶನಿವಾರ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದ ಶಾಲಾ ವಾಹನ ಮತ್ತು ಕಾರು ನಡುವೆ ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಶಾಲಾ ವಾಹನ ಪಲ್ಟಿಯಾಗಿದೆ. ಘಟನೆಯಲ್ಲಿ 11 ವಿದ್ಯಾರ್ಥಿಗಳು ಗಾಯಗೊಂಡಿದ್ದು. ಅವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಾಲಾ ವಾಹನವು ಹುಬ್ಬಳ್ಳಿ ತಾಲೂಕು ಅದರಗುಂಚಿಯಿಂದ ಹುಲಕೊಪ್ಪ ಗ್ರಾಮಕ್ಕೆ ಹೋಗುವ ಮಾರ್ಗ ಮಧ್ಯ ಪಾಲಿಕೊಪ್ಪ ಬಳಿ ಯೂ ಟರ್ನ್ ತೆಗೆದುಕೊಳ್ಳುವಾಗ ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಶಾಲಾ ವಾಹನ ಪಲ್ಟಿಯಾಗಿದೆ.

Hubballi: Car and school van collisions 11 students injured

ಶಾಲಾ ವಾಹನದ ಚಾಲಕನ ನಿರ್ಲಕ್ಷ್ಯದಿಂದ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ. ಶಾಲಾ ವಾಹನದಲ್ಲಿ ಕೇವಲ 12 ವಿದ್ಯಾರ್ಥಿಗಳನ್ನು ಮಾತ್ರ ಪ್ರಯಾಣಿಸಬಹುದು. ಆದರೆ, ಶಾಲಾ ಆಡಳಿತ ಮಂಡಳಿ 25 ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ತುಂಬಿಸಲಾಗಿತ್ತು.

ಈ ಬಗ್ಗೆ ಶಾಲಾ ಆಡಳಿತ ಮಂಡಳಿಯನ್ನು ಕೇಳಿದರೆ, ಶನಿವಾರ ಅರ್ಧ ದಿನ ರಜೆ ಇದ್ದುದರಿಂದ ಎಲ್ಲ ಮಕ್ಕಳು ಬೇಗ ಮನೆಗೆ ಹೋಗಬೇಕು ಎಂದು ವಾಹನ ಹತ್ತಿದ್ದಾರೆ ಎಂದು ಸಮಜಾಯಿಸಿ ನೀಡಿದ್ದಾರೆ.

ಶಾಲಾ ವಾಹನಕ್ಕೆ ಡಿಕ್ಕಿ ಹೊಡೆಸಿದ ಕಾರಿನ ಚಾಲಕ ಪರಾರಿಯಾಗಿದ್ದು. ಪೊಲೀಸರು ತನಿಖೆ ನಡೆಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
11 school students injures as school van overturns after hitting car, near NH-4 Palikoppa Hubballi Taluk, on November 19.
Please Wait while comments are loading...