Get Updates
Get notified of breaking news, exclusive insights, and must-see stories!

ಹುಬ್ಬಳ್ಳಿ : ಖಾಸಗಿ ಬಸ್ಸಿಗೆ ಬೆಂಕಿ, ಮೂವರ ಸಜೀವ ದಹನ

ಹುಬ್ಬಳ್ಳಿ, ಜುಲೈ 27 : ಬಸ್ ಸುಟ್ಟ ಘಟನೆಯಲ್ಲಿ ಗಾಯಗೊಂಡ 9 ಜನರಲ್ಲಿ ಎಂಟು ಪ್ರಯಾಣಿಕರನ್ನು ಬೆಳಗಾವಿಯ ಕೆಎಲ್ಇ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಒಬ್ಬರು ಧಾರವಾಡ ಎಸ್‌ಡಿಎಂ ಆಸ್ಪತ್ರೆಯಲ್ಲಿದ್ದಾರೆ.

ಗಾಯಗೊಂಡವರನ್ನು ಧಾರವಾಡದ ಸುನೀಲ ಮಾನೆ (54), ನವನಗರದ ನೇತ್ರಾ ಶೆಟ್ಟಿ (28) ಇವರ ಮಗಳು ಒಂದೂವರೆ ವರ್ಷದ ಸುಮಂತಾ ಶೆಟ್ಟಿ, ನವನಗರದ ಮಹಾಂತೇಶ ಪಾಟೀಲ (17) ಮತ್ತು ಐಶ್ವರ್ಯ ಮರದ ಎಂದು ಗುರುತಿಸಲಾಗಿದೆ.

ಮೃತಪಟ್ಟವರ ದೇಹಗಳು ಸುಟ್ಟು ಕರಕಲಾಗಿದ್ದರಿಂದ ಅವರ ಗುರುತು ಪತ್ತೆ ಹಚ್ಚಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಹಿಂದಿನ ಸುದ್ದಿ : ಹುಬ್ಬಳ್ಳಿಯಲ್ಲಿ ಖಾಸಗಿ ಬಸ್ ಬೆಂಕಿಗೆ ಆಹುತಿಯಾಗಿದ್ದು ಮೂವರು ಪ್ರಯಾಣಿಕರು ಸಜೀವವಾಗಿ ದಹನವಾಗಿದ್ದಾರೆ. 9 ಪ್ರಯಾಣಿಕರಿಗೆ ಗಾಯಗಳಾಗಿದ್ದು, 3 ಜನರನ್ನು ರಕ್ಷಣೆ ಮಾಡಲಾಗಿದೆ.

ಬೆಂಗಳೂರಿನಿಂದ ಹುಬ್ಬಳ್ಳಿಗೆ ಹೋಗುತ್ತಿದ್ದ ದುರ್ಗಾಂಬ ಟ್ರಾವೆಲ್ಸ್‌ಗೆ ಸೇರಿದ ಬಸ್ಸಿಗೆ ಹುಬ್ಬಳ್ಳಿ ಸಮೀಪದ ವರೂರು ಬಳಿ ಬುಧವಾರ ಮುಂಜಾನೆ ಬೆಂಕಿ ಹೊತ್ತಿಕೊಂಡಿದೆ. ಸ್ಥಳಕ್ಕೆ ಆಗಮಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.[ಮಂಗಳೂರಿನಲ್ಲಿ ಬಸ್ ಬೆಂಕಿಗಾಹುತಿ, ಚಿತ್ರಗಳು]

bus

ಈ ಬಸ್ಸಿನಲ್ಲಿ 15ಕ್ಕೂ ಹೆಚ್ಚಿ ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದೆ. ಮೂವರು ಪ್ರಯಾಣಿಕರು ಸಜೀವವಾಗಿ ದಹನವಾಗಿದ್ದು, 9 ಜನರು ಗಾಯಗೊಂಡಿದ್ದಾರೆ.[ಹೈದರಾಬಾದಿನ ಬಸ್ ದುರಂತದ ಚಿತ್ರಗಳು]

'ಈ ದುರ್ಘಟನೆಯಲ್ಲಿ ಸಾವನ್ನಪ್ಪಿದವರ ಬಗ್ಗೆ ಮಾಹಿತಿ ಸಿಕ್ಕಿಲ್ಲ, ವಿವರಗಳನ್ನು ಸಂಗ್ರಹಣೆ ಮಾಡಲಾಗುತ್ತಿದೆ' ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ ಮಾಧ್ಯಮಗಳಿಗೆ ತಿಳಿಸಿದರು.

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರು ವೇತನ ಪರಿಷ್ಕರಣೆಗೆ ಒತ್ತಾಯಿಸಿ ಜುಲೈ 25ರಿಂದ ಅನಿರ್ಧಾಷ್ಟಾವಧಿ ಮುಷ್ಕರ ನಡೆಸುತ್ತಿದ್ದಾರೆ. ಇದರಿಂದಾಗಿ ಸರ್ಕಾರಿ ಬಸ್ಸುಗಳ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಆದ್ದರಿಂದ, ಪ್ರಯಾಣಿಕರು ಖಾಸಗಿ ಬಸ್ ಅವಲಂಬಿಸುವುದು ಅನಿವಾರ್ಯವಾಗಿದೆ.[ಸಾರಿಗೆ ಮುಷ್ಕರ : ಮಂಗಳವಾರದ 10 ಬೆಳವಣಿಗೆಗಳು]

2 Dead after private bus catches fire, Hubballi

ಹಿಂದಿನ ಘಟನೆಗಳು

* 2013ರ ಅಕ್ಟೋಬರ್‌ನಲ್ಲಿ ಬೆಂಗಳೂರಿನಿಂದ ಹೈದರಾಬಾದ್‌ ತೆರಳುತ್ತಿದ್ದ ಜಬ್ಬಾರ್ ಟ್ರಾವೆಲ್ಸ್ ಸಂಸ್ಥೆಯ ಬಸ್ಸಿಗೆ ಮೆಹಬೂಬ ನಗರದ ಬೆಂಕಿ ಹೊತ್ತಿಕೊಂಡಿತ್ತು. 44 ಪ್ರಯಾಣಿಕರು ಈ ಅಪಘಾತದಲ್ಲಿ ಸಜೀವವಾಗಿ ದಹನವಾಗಿದ್ದರು.

* 2014ರ ಡಿಸೆಂಬರ್‌ನಲ್ಲಿ ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಸ್ಲೀಪರ್‌ ಕೋಚ್‌ ಬಸ್ಸಿಗೆ ಬೆಂಕಿ ಹೊತ್ತಿಕೊಂಡಿದ್ದು, ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿತ್ತು, ಘಟನೆಯಲ್ಲಿ ಇಬ್ಬರು ಪ್ರಯಾಣಿಕರು ಗಾಯಗೊಂಡಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+