ಹುಬ್ಬಳ್ಳಿ ಕಿಮ್ಸ್ ನಲ್ಲಿ 3 ನರ್ಸಿಂಗ್ ವಿದ್ಯಾರ್ಥಿನಿಯರಿಂದ ಆತ್ಮಹತ್ಯೆಗೆ ಯತ್ನ

ಹುಬ್ಬಳ್ಳಿ, ಅಕ್ಟೋಬರ್ 15: ನರ್ಸಿಂಗ್ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡಿದ್ದಕ್ಕೆ ಮೂವರು ವಿದ್ಯಾರ್ಥಿನಿಯರು ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹುಬ್ಬಳ್ಳಿಯ ಕಿಮ್ಸ್ ಹಾಸ್ಟೆಲ್ ನಲ್ಲಿ ನಡೆದಿದೆ.

ಶುಕ್ರವಾರ ತಡ ರಾತ್ರಿ ಈ ಘಟನೆ ನಡೆದಿದ್ದು ಹೇಮಾ, ರೇವತಿ, ಪಲ್ಲವಿ (ಹೆಸರು ಬದಲಾಯಿಸಿದೆ ) ಆತ್ಮಹತ್ಯೆಗೆ ಯತ್ನಿಸಿದ ವಿಧ್ಯಾರ್ಥಿನಿಯರಾಗಿದ್ದಾರೆ . ಕಳೆದ ಒಂದು ವರ್ಷದಿಂದ ಹೇಮಾ , ಸೇರಿದಂತೆ ಮೂವರು ವಿದ್ಯಾರ್ಥಿನಿಯರು ಕಿಮ್ಸ್ ನಲ್ಲಿ ನರ್ಸಿಂಗ್ ಓದುತಿದ್ದರು.

 3 nursing students attempt to suicide at Hubballi KIMS

ಗುರುವಾರ ನರ್ಸಿಂಗ್ ಪ್ರಥಮ ವರ್ಷದ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿತ್ತು. ಆದರೆ ಅಂದುಕೊಂಡಂತೆ ಪರೀಕ್ಷೆಯ ಫಲಿತಾಂಶ ಬಂದಿರಲಿಲ್ಲ. ಬದಲಾಗಿ ಮೂವರೂ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದರು.

ಫೇಲ್ ಆಗಿದ್ದ ವಿದ್ಯಾರ್ಥಿನಿಯರಿಗೆ ನೋವು ಒಂದು ಕಡೆಯಾದರೆ, ಇನ್ನೊಂದು ಕಡೆ ಪರೀಕ್ಷೆಯಲ್ಲಿ ಉತ್ತೀರ್ಣರಾದ ನರ್ಸಿಂಗ್ ವಿದ್ಯಾರ್ಥಿನಿಯರು ಹಾಸ್ಟೆಲ್ ಆವರಣದಲ್ಲಿ ವಿಜಯೋತ್ಸವ ಆಚರಿಸುತ್ತಿದ್ದರು.

ಇದರಿಂದ ಮನನೊಂದ ವಿದ್ಯಾರ್ಥಿನಿಯರು ನಿದ್ದೆ ಮಾತ್ರೆಗಳನ್ನು ನುಂಗಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಬಳಿಕ ಹಾಸ್ಟೆಲ್ ನ ಇತರ ವಿದ್ಯಾರ್ಥಿನಿಯರು ಕಿಮ್ಸ್ ಪ್ರಾಚಾರ್ಯರು ಹಾಗೂ ನಿರ್ದೇಶಕರಿಗೆ ಮಾಹಿತಿ ನೀಡಿದ್ದಾರೆ.

ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿಯರನ್ನು ಕೂಡಲೆ ಚಿಕಿತ್ಸೆಗಾಗಿ ಕಿಮ್ಸ್ ಗೆ ದಾಖಲಿಸಿದ್ದರಿಂದ ಮೂವರು ವಿದ್ಯಾರ್ಥಿನಿಯರು ಪ್ರಾಣಾಪಾಯದಿಂದ ಪಾರಾಗಿದ್ದಾರೆ . ಈ ಸಂಬಂಧ ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ .

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+