ಹುಬ್ಬಳ್ಳಿ: ಕೆರೆಗೆ ಉರುಳಿದ ಖಾಸಗಿ ಬಸ್, ತಪ್ಪಿದ ಭಾರಿ ಅನಾಹುತ
ಹುಬ್ಬಳ್ಳಿ, ಜುಲೈ 06 : ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್‍ವೊಂದು ಕೆರೆಗೆ ಉರುಳಿ ಬಿದ್ದ ಘಟನೆ ಹುಬ್ಬಳ್ಳಿ ಹೊರವಲಯದ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ವರೂರ ಕ್ರಾಸ್ ಬಳಿ ಗುರುವಾರ ನಡೆದಿದೆ.
ಬೆಂಗಳೂರಿನಿಂದ ಮುಂಬೈಗೆ ಹೊರಟಿದ್ದ ಖಾಸಗಿ ಬಸ್ ವರೂರ ಕ್ರಾಸ್ ಬಳಿ ಇರುವ ಮಾಜಿ ಸಚಿವ ಬಸವರಾಜ ಹೊರಟ್ಟಿ ಅವರ ಫಾರ್ಮ್ ಹೌಸ್ ನ ಕೆರೆಗೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಬಸ್ ನಲ್ಲಿದ್ದ ಮೂವತ್ತಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹುಬ್ಬಳ್ಳಿಯ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.












Click it and Unblock the Notifications