3ನೇ ರೋಜಗಾರ್ ಮೇಳ ಉದ್ಘಾಟನೆ: 206 ಯುವಕರಿಗೆ ನೇಮಕಾತಿ ಆಯ್ಕೆ ಪತ್ರ ವಿತರಣೆ
ಹುಬ್ಬಳ್ಳಿ, ಜನವರಿ 20: ಕಳೆದ 8 ವರ್ಷಗಳಿಂದ ದೇಶದಲ್ಲಿ ಹೊಸ ಹೊಸ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಸರ್ಕಾರಿ, ಅರೆ ಸರ್ಕಾರಿ ಸಂಸ್ಥೆಗಳು, ಉದ್ದಿಮೆಗಳಲ್ಲಿ ದೇಶದ 10 ಲಕ್ಷ ಜನರಿಗೆ ಉದ್ಯೋಗಾವಕಾಶಗಳನ್ನು ಒದಗಿಸುವ ಗುರಿಯನ್ನು ಹೊಂದಲಾಗಿದೆ. ಹೊಸ ಉದ್ಯೋಗದಾತರಿಗೆ ನೇಮಕಾತಿ ಆಯ್ಕೆ ಪತ್ರಗಳನ್ನು ಇಂದು ದೇಶದಾದ್ಯಂತ ವಿತರಿಸಲಾಗುತ್ತಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರಗಳ ರಾಜ್ಯ ಸಚಿವರಾದ ಭಗವಂತ ಖೂಬಾ ಹೇಳಿದರು.
ಬಿವಿಬಿ ತಾಂತ್ರಿಕ ಮಹಾವಿದ್ಯಾಲಯದ ಬಯೋ ಟೆಕ್ನಾಲಜಿ ಸಭಾಂಗಣದಲ್ಲಿ ಆಯೋಜಿಸಲಾದ 3ನೇ ರೋಜಗಾರ್ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು, ಅಕ್ಟೋಬರ್‌ನಲ್ಲಿ 75 ಸಾವಿರ, ನವೆಂಬರ್ ತಿಂಗಳಲ್ಲಿ 72 ಸಾವಿರ ಹಾಗೂ ಇಂದು 71 ಸಾವಿರ ಯುವಕ, ಯುವತಿಯರಿಗೆ ನೇಮಕಾತಿ ಪತ್ರಗಳನ್ನು ವಿತರಣೆ ಮಾಡಲಾಗುತ್ತಿದೆ. ಇಂದು ದೇಶದಲ್ಲಿ ದೊಡ್ಡ ಮಟ್ಟದಲ್ಲಿ ಉದ್ಯೋಗ ನೀಡುವ ಮೂಲಕ ಇತಿಹಾಸ ಸೃಷ್ಟಿಯಾಗಲಿದೆ. ಭಾರತ ದೇಶವು ಎಲ್ಲಾ ಕ್ಷೇತ್ರದಲ್ಲಿ ಆತ್ಮನಿರ್ಭರತೆಯನ್ನು ಸಾಧಿಸುತ್ತಿದೆ.
ಜಗತ್ತಿನ ವಿವಿಧ ದೇಶಗಳಲ್ಲಿ ಆರ್ಥಿಕ ದುರ್ಬಲತೆ, ಆರ್ಥಿಕ ಹಿಂಜರಿತ ಸಂಭವಿಸುತ್ತಿದೆ. ಭಾರತದ ಅರ್ಥ ವ್ಯವಸ್ಥೆ ಸದೃಢವಾಗಿದೆ. ವಿಶ್ವಸಂಸ್ಥೆಯು ಭಾರತದ ಅರ್ಥ ವ್ಯವಸ್ಥೆಯನ್ನು ಕೊಂಡಾಡುತ್ತಿದೆ. ಮೇಕ್ ಇನ್ ಇಂಡಿಯಾ ಮೂಲಕ ಅನೇಕ ಉದ್ಯೋಗಗಳು ಸೃಷ್ಟಿಯಾಗಿವೆ. ಅನೇಕ ರಾಷ್ಟ್ರಗಳು ಕೋವಿಡ್ ಲಸಿಕೆ ಸಿಗದೆ ಒದ್ದಾಡಿದ್ದವು. ದೇಶದಲ್ಲಿ ತಯಾರಿಸಿದ ಕೋವಿಡ್ ಲಸಿಕೆ ನೀಡುವುದರ ಮೂಲಕ ಸಾಧನೆಗೈದಿದೆ ಎಂದರು.

ಭಾರತ ಹೆಚ್ಚಿನ ಜನರಿಗೆ ಉದ್ಯೋಗ ಕೊಡುವ ಸಾಮರ್ಥ್ಯವನ್ನು ಹೊಂದಿದೆ. ದೇಶದಲ್ಲೇ 400 ರಕ್ಷಣಾ ಉತ್ಪನ್ನಗಳು ತಯಾರಾಗುತ್ತಿವೆ. ವಿಶ್ವದಲ್ಲಿ ಚೀನಾ ನಂತರ ಭಾರತ ದೇಶ ಉತ್ಪಾದನೆ ಕ್ಷೇತ್ರದಲ್ಲಿ ಹೆಚ್ಚು ಗುರುತಿಸಿಕೊಳ್ಳುತ್ತಿದೆ. ಮುದ್ರಾ ಯೋಜನೆಯಡಿಯಲ್ಲಿ 21 ಕೋಟಿ ಜನರಿಗೆ ಸಾಲ ಸೌಲಭ್ಯ ನೀಡಲಾಗಿದ್ದು, ಸ್ವ ಉದ್ಯೋಗಾವಕಾಶಗಳು ಸೃಷ್ಟಿಯಾಗಿವೆ. ಶೇ. 67 ರಷ್ಟು ಮಹಿಳೆಯರು ಈ ಯೋಜನೆಯ ಲಾಭ ಪಡೆದುಕೊಂಡಿದ್ದಾರೆ ಎಂದು ತಿಳಿಸಿದರು.
206 ಅರ್ಹ ಜನರಿಗೆ ಸರ್ಕಾರಿ ಉದ್ಯೋಗ ಆಯ್ಕೆ ಪತ್ರಗಳನ್ನು ವಿತರಿಸಲಾಗುತ್ತಿದೆ. ಪಾರದರ್ಶಕವಾಗಿ ಯುವಕರನ್ನು ಆಯ್ಕೆ ಮಾಡಲಾಗಿದೆ. ಹೊಸ ನೇಮಕ ಹೊಂದಿದವರಿಗೆ 25 ವರ್ಷಗಳ ಕಾಲ ಭಾರತದ ಸೇವೆ ಮಾಡುವ ಅವಕಾಶ ದೊರೆತಿದೆ. ಉತ್ತಮವಾಗಿ ಸೇವೆ ಸಲ್ಲಿಸಿ ಎಂದು ಶುಭ ಹಾರೈಸಿದರು.
ಯುವಕರಿಗೆ ದೇಶ ಸೇವೆ ಮಾಡಲು ಅವಕಾಶ ನೀಡಲಾಗಿದೆ: ಜಗದೀಶ್ ಶೆಟ್ಟರ್
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮಾತನಾಡಿ, ದೇಶದಾದ್ಯಂತ ಇಂದು ರೋಜಗಾರ್ ಮೇಳವನ್ನು ಹಮ್ಮಿಕೊಳ್ಳಲಾಗಿದೆ. 45 ಸ್ಥಳಗಳಲ್ಲಿ ರೋಜಗಾರ್ ಮೇಳ ನಡೆಯುತ್ತಿದೆ. ಯುವಕರಿಗೆ ದೇಶ ಸೇವೆ ಮಾಡಲು ಅವಕಾಶ ನೀಡಲಾಗುತ್ತಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದಿನದ 24 ಕೆಲಸ ಮಾಡುತ್ತಿದ್ದಾರೆ. ಜಗತ್ತಿನ ನಾಯಕರಾಗಿ ಅವರು ಬೆಳೆದಿದ್ದಾರೆ ಎಂದು ಹೇಳಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರ ಹಾಗೂ ಖಾಸಗಿ ರಂಗಗಳಲ್ಲಿ ಸಾಕಷ್ಟು ಉದ್ಯೋಗಾವಕಾಶಗಳಿವೆ. ವಿಶ್ವದ ಆರ್ಥಿಕತೆಯಲ್ಲಿ 5ನೇ ಸ್ಥಾನದಲ್ಲಿ ಭಾರತವಿದೆ. ಮುಂದಿನ ದಿನಗಳಲ್ಲಿ ಮೊದಲ ಸ್ಥಾನವನ್ನು ಪಡೆದುಕೊಳ್ಳಲಿದೆ. ಈ ಹಿಂದೆ ಹಣ, ಆಮಿಷದ ಪ್ರಭಾವವಿಲ್ಲದೆ ಪಾರದರ್ಶಕವಾಗಿ 1300 ಜನರಿಗೆ ಪಂಚಾಯತ ಅಭಿವೃದ್ಧಿ ಅಧಿಕಾರಿ ( ಪಿಡಿಒ) ಹುದ್ದೆಗಳನ್ನು ನೇಮಕಾತಿ ಮಾಡಿಕೊಂಡಿರುವೆ ಎಂದರು.
ಪಾರದರ್ಶಕವಾಗಿ ಉದ್ಯೋಗ ನೀಡಿದರೆ, ಭ್ರಷ್ಟಾಚಾರ ನಡೆಯುವುದಿಲ್ಲ. ಇಂದು ಜಮ್ಮು ಕಾಶ್ಮೀರದಲ್ಲಿ ಶಾಂತಿ ನೆಲೆಸಿದೆ. ಪಾಕಿಸ್ತಾನದಲ್ಲಿ ಆರ್ಥಿಕ ಕುಸಿತ ಕಂಡಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಉಕ್ರೇನ್ ಮತ್ತು ರಷ್ಯಾ ನಾಯಕರೊಂದಿಗೆ ಮಾತುಕತೆ ನಡೆಸಿ, ಯುದ್ಧ ಮಾಡುವ ಸಮಯ ಇದಲ್ಲ ಎಂದು ತಿಳುವಳಿಕೆ ಮೂಡಿಸಿದರು. ಅಂತರಾಷ್ಟ್ರೀಯ ಮಟ್ಟದಲ್ಲಿ ಶಾಂತಿ ನೆಲೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಬಿಯಾಂಡ್ ಬೆಂಗಳೂರು ಮೂಲಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕೈಗಾರಿಕೆಗಳು ಸ್ಥಾಪನೆಯಾಗಲಿವೆ. ಮೊಬೈಲ್ ತಯಾರಿಕೆಯಲ್ಲಿ ಭಾರತ ಸ್ವಾವಲಂಬನೆ ಸಾಧಿಸಿದೆ. ದೇಶವು ಕೊರೊನಾ ಮಹಾಮಾರಿಯನ್ನು ಸಮರ್ಥವಾಗಿ ಎದುರಿಸಿದೆ. ಕೋವಿಡ್ ಲಸಿಕೆ ನೀಡುವುದರಲ್ಲಿ ವಿಶ್ವ ದಾಖಲೆ ನಿರ್ಮಿಸಿದೆ. ಭಾರತ ಬಲಿಷ್ಠ ರಾಷ್ಟ್ರವಾಗಿ ಹೊರಹೊಮ್ಮುತ್ತಿದೆ ಎಂದು ಅವರು ಹೇಳಿದರು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications