ನೀರಿಗೆ ಹಾರಿದ ನಾಲ್ವರು ನಿಲ್ಲಿಸಿ ಬಿಟ್ಟರಲ್ಲ ಉಸಿರಾಟ!
ಹುಬ್ಬಳ್ಳಿ, ನವೆಂಬರ್ 11: ಅವರೆಲ್ಲಾ ಆತ್ಮೀಯ ಸ್ನೇಹಿತರು ಎಲ್ಲರು ಸೇರಿಕೊಂಡು ಕೆರೆಯಲ್ಲಿ ಈಜಲು ಹೋಗಿದ್ದರು, ಆದ್ರೆ ವಿಧಿಯ ಆಟವೇ ಬೇರೆಯಾಗಿತ್ತು. ಏಳು ಜನ ಸ್ನೇಹಿತ ಕೆರೆಗೆ ಈಜಲು ಹೋದ್ರೆ ವಾಪಸ್ ಬಂದಿದ್ದು ಮಾತ್ರ ಮೂರೇ ಜನ.
ನೀರಿನಲ್ಲಿ ಹಾಯಾಗಿ ಈಜಲು ಹೋಗಿದ್ದ ಯುವಕರು ಇಂದು ಜವರಾಯನ ಪಾದ ಸೇರಿದ್ದಾರೆ. ಏಳರಲ್ಲಿ ಮೂರು ಮಂದಿ ಬಚಾವ್ ಆಗಿ ಬಂದರೆ, ಉಳಿದ ನಾಲ್ಕು ಯುವಕರು ನೀರುಪಾಲಾಗಿದ್ದಾರೆ.
ಹುಬ್ಬಳ್ಳಿ ತಾಲೂಕಿನ ದೇವರಗುಡಿಹಾಳ ಗ್ರಾಮದಲ್ಲಿ ಇಂಥದೊಂದು ಮನಕಲುಕುವಂಥಾ ಘಟನೆ ನಡೆದಿದೆ. ಗ್ರಾಮದ ಕೆರೆಯಲ್ಲಿ ಈಜಲು ತೆರಳಿದ್ದ ನಾಲ್ವರು ಯುವಕರು ನೀರಿನಲ್ಲಿ ಮುಳುಗಿ ಪ್ರಾಣ ಬಿಟ್ಟಿದ್ದಾರೆ.

ಸ್ನೇಹಿತರೇ ಸ್ನೇಹಿತರನ್ನು ಬದುಕಿಸಲಾಗಲಿಲ್ಲ: ಎಲ್ಲ ವಿಧಿಯಾಟ!
ಹುಬ್ಬಳ್ಳಿಯ ಮಚ್ಚಿ ಮಾರ್ಕೆಟ್ ನಿವಾಸಿಗಳಾದ 18 ವರ್ಷದ ಜುನೈದ್, ಸುಭಾನಿ, ಐಯಾನ್, ಸುಭಾನಿ ಮೃತರು ಎಂದು ಗುರುತಿಸಲಾಗಿದೆ. ನೀರು ಪಾಲಾದ ಸ್ನೇಹಿತರನ್ನು ಉಳಿಸಿಕೊಳ್ಳಲು ಎಷ್ಟು ಪ್ರಯತ್ನ ಮಾಡಿದರು ಅದು ಫಲಕಾರಿಯಾಗಿಲ್ಲ ಎಂದು ಜೊತೆಗಿದ್ದವರು ಗೋಳಿಟ್ಟಿದ್ದಾರೆ.

ಸ್ಥಳೀಯರು ಅಗ್ನಿ ಶಾಮಕ ದಳ ಹಾಗೂ ಹುಬ್ಬಳ್ಳಿ ಗ್ರಾಮೀಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮನಕ ದಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತ ದೇಹಗಳನ್ನು ಹೊರ ತೆಗೆದಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು












Click it and Unblock the Notifications